ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪರ ಯೋಜನೆಗಳ ಬಗ್ಗೆ ಮತದಾರರಿಗೆ ತಿಳಿಸಿ ಅವರಿಂದ ಮತ ಪಡೆದು ಆಯ್ಕೆಯಾಗುತ್ತೇನೆಂಬ ವಿಶ್ವಾಸ ನನಗಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ತಿಳಿಸಿದರು.
ಚಳ್ಳಕೆರೆ (ಮಾ.31): ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪರ ಯೋಜನೆಗಳ ಬಗ್ಗೆ ಮತದಾರರಿಗೆ ತಿಳಿಸಿ ಅವರಿಂದ ಮತ ಪಡೆದು ಆಯ್ಕೆಯಾಗುತ್ತೇನೆಂಬ ವಿಶ್ವಾಸ ನನಗಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ತಿಳಿಸಿದರು. ಅವರು ಬೆಂಗಳೂರು, ತುಮಕೂರು, ಹಿರಿಯೂರು ಮೂಲಕ ಚಳ್ಳಕೆರೆಗೆ ಭೇಟಿ ನೀಡಿದ ವೇಳೆಗೆ ಟಿಎಟಿ ಟಾಕೀಸ್ ಬಳಿ ನೂರಾರು ಕಾರ್ಯಕರ್ತರು ಜಮಾಯಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರಲ್ಲದೆ ಮಹಿಳೆಯರು ಆರತಿ ಎತ್ತಿ ಸ್ವಾಗತಿಸಿದರು.
ಆ ಬಳಿಕ ಮಾತನಾಡಿದ ಅವರು, ಚಿತ್ರದುರ್ಗ ಲೋಕಸಭಾ ಕ್ಷೇತ್ರ ನನಗೆ ಹೊಸದಲ್ಲ, ಕಳೆದ ಬಾರಿ ಈ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿಯೊಡನೆ ಹಲವಾರು ಕಾರ್ಯಕ್ರಮಗಳಿಗೆ ಬಂದು ಹೋಗಿದ್ದೇನೆ. ರಾಜ್ಯದ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಚಿತ್ರದುರ್ಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳನ್ನು ಸರ್ಕಾರ ಮಟ್ಟದಲ್ಲಿ ಚರ್ಚಿಸಿದ್ದೇನೆ. ಆದರೆ, ರಾಜಕೀಯ ಕ್ಷೇತ್ರದಲ್ಲಿ ವಿನಾಕಾರಣ ಸುಳ್ಳು ಆರೋಪಗಳು ಸ್ವಾಭಾವಿಕ. ನಾನು ಈ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರಮೋದಿಯವರ ಜನಪರ ಯೋಜನೆಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿ ಚುನಾವಣೆಯಲ್ಲಿ ಗೆಲ್ಲುತ್ತೇನೆ ಎಂದರು.
undefined
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾದ ನಂತರ ಇದೇ ಮೊದಲ ಭೇಟಿಯಾಗಿದೆ. ದೊಡ್ಡೇರಿಯ ಕನ್ನೇಶ್ವರ ಆಶ್ರಮ ಶ್ರೀಮಲ್ಲಪ್ಪಸ್ವಾಮೀಜಿಯವರ ಆಶೀರ್ವಾದವನ್ನು ಪಡೆದಿದ್ದೇನೆ. ಪಾವಗಡ ರಸ್ತೆಯಲ್ಲಿಯ ಸಾಯಿಬಾಬಾ ಮಂದಿರಕ್ಕೂ ಭೇಟಿ ನೀಡಿದ್ದೇನೆ. ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ವಿಶೇಷವಾಗಿ ಮಹಿಳೆಯರು, ಯುವಕರು ಬಿಜೆಪಿಯ ಗೆಲುವಿನ ಬಗ್ಗೆ ಹೆಚ್ಚು ಆತ್ಮವಿಶ್ವಾಸ ತುಂಬಿದ್ದಾರೆ ಎಂದರು.
ಕೋವಿಡ್ ವೇಳೆಯ ಆರೋಪಗಳು ಕೇವಲ ಅಪಪ್ರಚಾರ: ಡಾ.ಕೆ.ಸುಧಾಕರ್
ಮಂಡಲಾಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೆಮಂಡಿ ರಾಮದಾಸ್, ಜಿಲ್ಲಾಧ್ಯಕ್ಷ ಎ.ಮುರುಳಿ, ಬಿ.ಎಸ್.ಶಿವಪುತ್ರಪ್ಪ, ಸಿ.ಎಸ್. ಪ್ರಸಾದ್, ಜಯಪಾಲಯ್ಯ, ಜಿ.ಕೆ.ವೀರಣ್ಣ, ಈ.ವೀರೇಶ್, ಡಿ.ಎಂ.ತಿಪ್ಪೇಶ್ವಾಮಿ, ಬಿ.ಸಿ.ವೆಂಕಟೇಶ್ ಮೂರ್ತಿ, ಮಾರುತಿ, ಕರೀಕೆರೆ ತಿಪ್ಪೇಸ್ವಾಮಿ, ಜಗದಾಂಭ, ಜಗದೀಶ್, ಗೋವಿಂದಪ್ಪ ಮುಂತಾದವರು ಉಪಸ್ಥಿತರಿದ್ದರು.