ಮೋದಿ ಗ್ಯಾರಂಟಿ-ಶಾಶ್ವತ ಗ್ಯಾರಂಟಿ, ಬಡತನ ನಿರ್ಮೂಲನೆಯೇ ನಮ್ಮ ಗುರಿ: ಬೊಮ್ಮಾಯಿ

By Govindaraj S  |  First Published Apr 14, 2024, 5:05 PM IST

ನಮ್ಮ ಪ್ರಣಾಳಿಕೆ ಬಡವರಿಗೆ ಬದುಕು ಕಟ್ಟಿಕೊಡುವಂತದ್ದು, ಶಾಶ್ವತವಾಗಿ ದೇಶವನ್ನು ಕಟ್ಟುವಂತದ್ದು, ಬಡತನ ನಿರ್ಮೂಲನೆ ಮಾಡೋದೆ ನಮ್ಮ ಗುರಿ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.


ಗದಗ (ಏ.14): ನಮ್ಮ ಪ್ರಣಾಳಿಕೆ ಬಡವರಿಗೆ ಬದುಕು ಕಟ್ಟಿಕೊಡುವಂತದ್ದು, ಶಾಶ್ವತವಾಗಿ ದೇಶವನ್ನು ಕಟ್ಟುವಂತದ್ದು, ಬಡತನ ನಿರ್ಮೂಲನೆ ಮಾಡೋದೆ ನಮ್ಮ ಗುರಿ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು. ಈಗಾಗಲೇ 15 ಕೋಟಿ ಜನರ ಬಡತನ ನಿರ್ಮೂಲನೆಯಾಗಿದೆ. ಇನ್ನೂ 25 ಕೋಟಿ ಜನ್ರ ಬಡತನ ನಿರ್ಮೂಲನೆ ಮಾಡೋ ಗುರಿ ನಮ್ಮ ಪ್ರಣಾಳಿಕೆಯಲ್ಲಿದೆ. ಮೂಲಭೂತ ಸೌಕರ್ಯ, ಮನೆ, ಶೌಚಾಲಯ ಶಾಶ್ವತವಾಗಿ ಕೊಡುತ್ತೇವೆ. ವಿಶೇಷವಾಗಿ ಸೋಲಾರ್ ಎನರ್ಜಿಯಿಂದ ಉಚಿತ ವಿದ್ಯುತ್ ಪಡೆದು, ವಿದ್ಯುತ್ ಉತ್ಪಾದನೆ ಮಾಡಿ ಮಾರಾಟ ಮಾಡಬಹುದು. ರೈತರಿಗೆ ಅನುಕೂಲವಾಗುವಂತ ಯೋಜನೆ ಮುಂದುವರೆಸಲಾಗಿದೆ. ಹೆಣ್ಣು ಮಕ್ಕಳಿಗೆ ಲಕ್ಷ ಪತಿ ದೀದಿ ಯೋಜನೆ, ಇದರಿಂದ ಹೆಣ್ಣು ಮಕ್ಕಳ ಸಬಲೀಕರಣ ಎಂದರು. 

ಬಿಜೆಪಿ ಪ್ರಣಾಳಿಕೆ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ, ಜನರ ಜೀವನ ಮಟ್ಟ ಹೆಚ್ಚಳ ಹಾಗೂ ಬಡತನ ನಿರ್ಮೂಲನೆ ಮಾಡುವ ಯೋಜನೆ ನಮ್ಮ ಪ್ರಣಾಳಿಕೆಯಲ್ಲಿವೆ. ಬೇಕಾಬಿಟ್ಟಿಯಾಗಿ ಕಾಂಗ್ರೆಸ್ ನವರು ಘೋಷಣೆ ಮಾಡಿದ್ದಾರೆ. ಅವರಿಗೆ ಜವಾಬ್ದಾರಿ ಇಲ್ಲ, ಯಾಕೆಂದರೆ ಅವರು ಅಧಿಕಾರಕ್ಕೆ ಬರೋದು ಗ್ಯಾರಂಟಿ ಇಲ್ಲ. ಅವರು ಅಧಿಕಾರಕ್ಕೆ ಬರಲು 272 ಸೀಟ್ ಬೇಕು, ಅವರು ಸ್ಪರ್ಧೆ ಮಾಡಿರೋದೆ 230 ಕ್ಷೇತ್ರದಲ್ಲಿ ಮಾತ್ರ. ಕಾಂಗ್ರೆಸ್ ಪ್ರಣಾಳಿಕೆ ಬೇಜವಾಬ್ದಾರಿ ಪ್ರಣಾಳಿಕೆ. ನಮ್ಮದು ಜವಾಬ್ದಾರಿಯುತ ಪ್ರಣಾಳಿಕೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಗದಗ ಬೆಟಗೇರಿ ನಗರಸಭೆ ಅವರಣದಲ್ಲಿಅಂಬೇಡ್ಕರ್ ಮೂರ್ತಿಗೆ ಬೊಮ್ಮಾಯಿ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ವೇಳೆ ಎಂಎಲ್ಸಿ ಎಸ್.ವಿ.ಸಂಕನೂರ, ಮಾಜಿ ಸಚಿವ ಸಿ.ಸಿ.ಪಾಟೀಲ್, ಜಿಲ್ಲಾಧ್ಯಕ್ಷ ರಾಜು ಕುರಡಗಿ ಸೇರಿ ಹಲವು ಮುಖಂಡರು ಬೊಮ್ಮಾಯಿಗೆ ಸಾಥ್ ನೀಡಿದರು.

Tap to resize

Latest Videos

undefined

ಪ್ರಧಾನಿ ಮೋದಿಗೆ ಮತ ಹಾಕಿ: ಮುಂದಿನ ಐದು ವರ್ಷ ದೇಶವನ್ನು ಯಾರು ಮುನ್ನೆಡೆಸಬೇಕು, ಯಾವ ರೀತಿ ನಡೆಸಬೇಕು ಎನ್ನುವುದನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ಬಲಿಷ್ಠ ದೇಶ ಕಟ್ಟುವ ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿಗೆ ಮತ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು. ತಾಲೂಕಿನ ನದಿಹರಳಹಳ್ಳಿ, ಕರೂರ, ಚಳಗೇರಿ ಹಾಗೂ ಹುಲಿಕಟ್ಟಿ ಗ್ರಾಮಗಳಲ್ಲಿ ಭಾನುವಾರ ರಾತ್ರಿ ರೋಡ್ ಶೋ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಹತ್ತು ವರ್ಷ ದೇಶವನ್ನು ಬಲಿಷ್ಠಗೊಳಿಸಿದ್ದಾರೆ. 

Lok Sabha Election 2024: ಚಂದ್ರಯಾನ-2 ಯಶಸ್ವಿಯಾಗಿದೆ, ಇದಕ್ಕೆ ಪ್ರಧಾನಿ ಮೋದಿ ಕಾರಣ: ಪ್ರಜ್ವಲ್‌ ರೇವಣ್ಣ

ಅವರು ಆರ್ಥಿಕವಾಗಿ, ಸಾಮಾಜಿಕವಾಗಿ ದೇಶವನ್ನು ಬಲಗೊಳಿಸಿದ್ದಾರೆ. ಭದ್ರತೆ ದೃಷ್ಟಿಯಿಂದಲೂ ಪ್ರಧಾನಮಂತ್ರಿ ದೇಶವನ್ನು ರಕ್ಷಣೆ ಮಾಡಿದ್ದಾರೆ. ಕುಡಿಯಲು ನೀರು, ಅಕ್ಕಿ, ಲಸಿಕೆ ಕೊಟ್ಟಿರುವ ಮೋದಿಯವರಿಗೆ ಕೃತಜ್ಞತೆ ಸಲ್ಲಿಸಲು ಮತದಾನದ ಮೂಲಕ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ, ರಾಜ್ಯ ಉಪಾಧ್ಯಕ್ಷ ಡಾ. ಬಸವರಾಜ ಕೇಲಗಾರ, ಜಿಪಂ ಮಾಜಿ ಸದಸ್ಯ ಸಂತೋಷಕುಮಾರ ಪಾಟೀಲ, ಮಂಜುನಾಥ ಓಲೇಕಾರ, ತಾಲೂಕು ಗ್ರಾಮೀಣ ಘಟಕದ ಅಧ್ಯಕ್ಷ ಪರಮೇಶ ಗೂಳಣ್ಣನವರ, ಮಾಳಪ್ಪ ಪೂಜಾರ, ಬಸವರಾಜ ಚಳಗೇರಿ, ಸಿದ್ದು ಚಿಕ್ಕಬಿದರಿ, ಆನಂತ ಇಟಗಿ, ಕುಬೇರಪ್ಪ ಕೊಂಡಜ್ಜಿ, ಸುಭಾಶ ಶಿರಗೇರಿ ಮತ್ತಿತರರಿದ್ದರು.

click me!