PM Narendra Modi ಯವರೇ, ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ಸಿದ್ದರಾಮಯ್ಯ ಸರಣಿ ಟ್ವೀಟ್

Published : Sep 02, 2022, 10:27 AM ISTUpdated : Sep 02, 2022, 10:47 AM IST
PM Narendra Modi ಯವರೇ, ನಿಮ್ಮ ಭೇಟಿ  ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ಸಿದ್ದರಾಮಯ್ಯ ಸರಣಿ ಟ್ವೀಟ್

ಸಾರಾಂಶ

ನರೇಂದ್ರ ಮೋದಿಯವರೇ, ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ನಿಮ್ಮ ಇಂದಿನ ಭಾಷಣದಲ್ಲಿ ನನ್ನ ಪ್ರಶ್ನೆಗಳಿಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ. ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್.

ಬೆಂಗಳೂರು (ಸೆ.3) : ಇಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಸುಮಾರು 3.800 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

 ಟ್ವೀಟರ್‌ನಲ್ಲಿ ಕೇಳಿದ ಪ್ರಶ್ನೆಗಳು ಇಂತಿವೆ:

ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi)  ಯವರಿಗೆ ಮಂಗಳೂರಿ(Mangaluru)ಗೆ ಸ್ವಾಗತ. ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗಳಿಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ.   ದಕ್ಷಿಣ ಕನ್ನಡ(Dakshina Kannada)ದ ಉದ್ಯಮ ಶೀಲ ಹಿರಿಯರು  ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್ ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ. ಇದು ವಿಕಾಸವೋ? ವಿನಾಶವೋ?

ಕಾರ್ಪೋರೇಷನ್ ಬ್ಯಾಂಕ್ ಸ್ಥಾಪಕರು- ಹಾಜಿ ಅಬ್ದುಲ್ಲಾ (1906), ಸಿಂಡಿಕೇಟ್ ಬ್ಯಾಂಕ್ ಸ್ಥಾಪಕರು ಟಿಎಂಎ ಪೈ, ಉಪೇಂದ್ರ ಪೈ, ವಾಮನ್ ಕುಡ್ವಾ (1925),  ವಿಜಯಾ ಬ್ಯಾಂಕ್ ಸ್ಥಾಪಕರು- ಎ.ಬಿ.ಶೆಟ್ಟಿ (1931).  ಪ್ರಧಾನಿಯವರೇ, ನಿಮ್ಮ ನಡೆ ಈ ಅಮರವೀರರಿಗೆ ಬಗೆದ ದ್ರೋಹವಲ್ಲವೇ?  ಇದು ವಿಕಾಸವೋ? ವಿನಾಶವೋ?  ಬಜ್ಪೆ ವಿಮಾನ ನಿಲ್ದಾಣ(Bajpe Airport) ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ(Jawaharlal Nehru) ಕೊಡುಗೆ.(25-12-1971) ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ.  ಈ ವಿಮಾನ ನಿಲ್ದಾಣವನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಅರ್ಪಿಸಿದ್ದು (20-10-2020) ಪ್ರಧಾನಿ ನರೇಂದ್ರ ಮೋದಿ. ಇದು ವಿಕಾಸವೋ? ವಿನಾಶವೋ?

ನವಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾಗಾಂಧಿ(Indira Gandhi) ಕೊಡುಗೆ (1975). ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ನವಮಂಗಳೂರು ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರುತ್ತಿರುವುದು ಪ್ರಧಾನಿ ನರೇಂದ್ರ ಮೋದಿ.  ಇದು ವಿಕಾಸನೋ? ವಿನಾಶನೋ? 

ಬಜ್ಪೆ ವಿಮಾನ ನಿಲ್ದಾಣ, ಎನ್ ಎಂಪಿಟಿ, ಎನ್ ಎಚ್-66, ರೀಜನಲ್ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್-ಇವೆಲ್ಲ ಕಾಂಗ್ರೆಸ್ ಸಂಸದರ ಕೊಡುಗೆ. ಬಿಜೆಪಿ ಸಂಸದ ನಳಿನ್ ಕುಮಾರ ಕೊಡುಗೆ ಏನು? ಮಳೆಯಲ್ಲಿ ಮುಳುಗುವ ಮಂಗಳೂರು? ಕೋಮುದ್ವೇಷದ ಬೆಂಕಿಯಲ್ಲಿ ಬೇಯುತ್ತಿರುವ ಮಂಗಳೂರು?  ಇದು ವಿಕಾಸವೋ? ವಿನಾಶನೋ?

ದಕ್ಷಿಣ ಕನ್ನಡದ ವಿಕಾಸ ಪುರುಷರು ಕಾಂಗ್ರೆಸ್ ಸಂಸದರಾಗಿದ್ದ ಉಳ್ಳಾಲ ಶ್ರೀನಿವಾಸ ಮಲ್ಯ, ಕೆಮ್ತೂರು ಕಾಂತಪ್ಪ ಶೆಟ್ಟಿ ಮತ್ತು ಬೋಳಾರ ಜನಾರ್ಧನ ಪೂಜಾರಿ. ದಕ್ಷಿಣ ಕನ್ನಡದ ವಿನಾಶ ಪುರುಷ- ಬಿಜೆಪಿ ಸಂಸದ ನಳಿನ್ ಕುಮಾರ ಕಟೀಲ್. ಇದು ವಿಕಾಸವೋ? ವಿನಾಶವೋ?

ಜೂನ್ ತಿಂಗಳೊಂದರಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದುವರೆ ಕೋಟಿ ಬೆಲೆಯ ಮಾದಕದ್ರವ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾದಕದ್ರವ್ಯ ಸೇವನೆಯಲ್ಲಿ ದೇಶದಲ್ಲಿಯೇ ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ. ಇದು ವಿಕಾಸನೋ? ವಿನಾಶನೋ?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿದೆ. ಹೆಜ್ಜೆಹೆಜ್ಜೆಗೂ ಗುಂಡಿಬಿದ್ದ ರಸ್ತೆಗಳು, ಕುಸಿದು ಬಿದ್ದಿರುವ ಮನೆಗಳು, ನೆರೆಯಲ್ಲಿ ಕೊಚ್ಚಿಹೋದ ರೈತರ ಬೆಳೆಗಳು.. ಪ್ರಧಾನಿ ಭೇಟಿಗಾಗಿ ಮಳೆ ಹುಳುಕನ್ನು ಮುಚ್ಚಿಟ್ಟು ರಸ್ತೆಗಳಿಗೆ ತೇಪೆ ಹಾಕಲಾಗಿದೆ  ಇದು ವಿಕಾಸನೋ? ವಿನಾಶನೋ? 

ಕಳೆದ ಮೂರು ವರ್ಷಗಳಲ್ಲಿ ಕಡಲ್ಕೊರೆತ ತಡೆಗೆ ರಾಜ್ಯ ಸರ್ಕಾರ ಖರ್ಚು ಮಾಡಿರುವ ಹಣ ಅಂದಾಜು ರೂ.250 ಕೋಟಿ. ಇದರಲ್ಲಿ 40% ಜನಪ್ರತಿನಿಧಿಗಳ ಜೇಬಿಗೆ, 60% ಕಡಲ ನೀರಿಗೆ. ಕಡಲ್ಕೊರೆತ ಮುಂದುವರಿದಿದೆ. ಇದು ವಿಕಾಸವೋ? ವಿನಾಶನೋ?

ಕರಾವಳಿ ಮೀನುಗಾರರ ಮೇಲೆ ಸಿಆರ್ ಜೆಡ್, ಸಿಎಂ ಜೆಡ್ ನಿಯಮಾವಳಿಗಳ ಹೇರಿಕೆ ಪ್ರವಾಸೋದ್ಯಮದ ಹೆಸರಲ್ಲಿ ರೆಸಾರ್ಟ್, ಥೀಮ್ ಪಾರ್ಕ್ ಗಳಿಗೆ ಮುಕ್ತ ಪರವಾನಿಗೆ ಇದು ವಿಕಾಸನೋ? ವಿನಾಶನೋ?

48 ಕಿ.ಮೀ. ಅಂತರದಲ್ಲಿ ಬ್ರಹ್ಮರಕೂಟ್ಲು, ಸುರತ್ಕಲ್, ತಲಪಾಡಿ ಮತ್ತು ಹೆಜಮಾಡಿಗಳಲ್ಲಿ 4 ನಿಯಮಬಾಹಿರ ಟೋಲ್ ಗೇಟ್ ಗಳು. ವಾಹನ ಸಂಚಾರಿಗಳ ಜೇಬು ಖಾಲಿ, ಅಕ್ರಮದ ರೂವಾರಿಗಳಾದ ಬಿಜೆಪಿ ಸಂಸದರು ಮತ್ತು ಶಾಸಕರ ಜೇಬು ಭರ್ತಿ. ಇದು ವಿಕಾಸನೋ? ವಿನಾಶನೋ? ಮಂಗಳೂರಿನಲ್ಲಿ ಮಾಡಲಿರುವ ಭಾಷಣದಲ್ಲಿ ಈ ಎಲ್ಲ ಪ್ರಶ್ನೆಗಳಿಗೆ ಉತ್ತರಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಒತ್ತಾಯಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಜನರೊಂದಿಗೆ ಸಂಪರ್ಕ ಸಾಧಿಸಿ, ಸೋಶಿಯಲ್ ಮೀಡಿಯಾ ಬಳಸಿ: ಸಂಸದರಿಗೆ ಮೋದಿ ಕರೆ