ಕುಮಾರಸ್ವಾಮಿ ಕಾಂಗ್ರೆಸ್‌ ಸೇರ್ಪಡೆಗೆ ಮೋಟಮ್ಮ ಪುತ್ರಿ ಆಕ್ಷೇಪ

Published : Oct 13, 2023, 02:40 AM IST
ಕುಮಾರಸ್ವಾಮಿ ಕಾಂಗ್ರೆಸ್‌ ಸೇರ್ಪಡೆಗೆ ಮೋಟಮ್ಮ ಪುತ್ರಿ ಆಕ್ಷೇಪ

ಸಾರಾಂಶ

ಬಿಜೆಪಿಯ ಮೂಡಿಗೆರೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಕಾಂಗ್ರೆಸ್‌ ಸೇರ್ಪಡೆಗೆ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ ನಯನಾ ಮೋಟಮ್ಮ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಗುರುವಾರ ನಡೆಯಬೇಕಿದ್ದ ಕುಮಾರಸ್ವಾಮಿ ಅವರ ಕಾಂಗ್ರೆಸ್‌ ಪಕ್ಷ ಸೇರ್ಪಡೆ ಮುಂದೂಡಿಕೆ ಕಂಡಿದೆ. 

ಬೆಂಗಳೂರು (ಅ.13): ಬಿಜೆಪಿಯ ಮೂಡಿಗೆರೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಕಾಂಗ್ರೆಸ್‌ ಸೇರ್ಪಡೆಗೆ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ ನಯನಾ ಮೋಟಮ್ಮ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಗುರುವಾರ ನಡೆಯಬೇಕಿದ್ದ ಕುಮಾರಸ್ವಾಮಿ ಅವರ ಕಾಂಗ್ರೆಸ್‌ ಪಕ್ಷ ಸೇರ್ಪಡೆ ಮುಂದೂಡಿಕೆ ಕಂಡಿದೆ. ಮೂಲಗಳ ಪ್ರಕಾರ ಎ.ಕೃಷ್ಣಪ್ಪ ಅವರ ಪುತ್ರಿ ಹಾಗೂ ಬಿಜೆಪಿ ಮಾಜಿ ಶಾಸಕ ಪೂರ್ಣಿಮಾ ಶ್ರೀನಿವಾಸ್‌ ಅವರು ಅ.20 ರಂದು ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದು, ಅದೇ ದಿನ ಎಂ.ಪಿ.ಕುಮಾರಸ್ವಾಮಿ ಅವರೂ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ನೇತೃತ್ವದಲ್ಲಿ ಬಿಜೆಪಿ ಮಾಜಿ ಶಾಸಕರಾದ ರಾಮಪ್ಪ ಲಮಾಣಿ ಹಾಗೂ ಎಂ.ಪಿ. ಕುಮಾರಸ್ವಾಮಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಪಕ್ಷ ಸೇರ್ಪಡೆ ಬಗ್ಗೆ ಚರ್ಚಿಸಿದ್ದರು. ಇದರ ಬೆನ್ನಲ್ಲೇ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಭೇಟಿಯಾಗಿದ್ದರು. ಇಬ್ಬರೂ ನಾಯಕರು ಸಮ್ಮತಿ ಸೂಚಿಸಿದ್ದರಿಂದ ಗುರುವಾರ ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಇಬ್ಬರೂ ಮಾಜಿ ಶಾಸಕರ ಪಕ್ಷ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿತ್ತು. 

ಲೋಕಸಭೆ ಚುನಾವಣೆ ಜಯಕ್ಕೆ 'ಗ್ಯಾರಂಟಿ' ಅಸ್ತ್ರ ಬಳಸಿ: ಸಚಿವ ಕೃಷ್ಣ ಬೈರೇಗೌಡ

ಆದರೆ ನಯನಾ ಮೋಟಮ್ಮ ತೀವ್ರ ಆಕ್ಷೇಪದಿಂದಾಗಿ ಎಂ.ಪಿ. ಕುಮಾರಸ್ವಾಮಿ ಪಕ್ಷ ಸೇರ್ಪಡೆ ಮುಂದೂಡಲ್ಪಟ್ಟಿದೆ.  ಈ ಸೇರ್ಪಡೆ ಬಗ್ಗೆ ನಯನಾ ಅವರೊಂದಿಗೆ ಚರ್ಚೆ ನಡೆಸಿ ಒಮ್ಮತ ಮೂಡಿಸಿ ಅನಂತರ ಪಕ್ಷ ಸೇರ್ಪಡೆ ಮಾಡಿಕೊಳ್ಳಲು ಪಕ್ಷದ ನಾಯಕತ್ವ ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ. 2018ರಲ್ಲಿ ಬಿಜೆಪಿ ಶಾಸಕರಾಗಿ ಗೆದ್ದಿದ್ದ ಎಂ.ಪಿ. ಕುಮಾರಸ್ವಾಮಿ ಅವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ನಿರಾಕರಿಸಿತ್ತು. ಹೀಗಾಗಿ ಜೆಡಿಎಸ್‌ನಿಂದ ಸ್ಪರ್ಧಿಸಿ ಸೋಲುಂಡಿದ್ದರು. ಬಳಿಕ ಜಗದೀಶ್‌ ಶೆಟ್ಟರ್‌ ಮೂಲಕ ಕಾಂಗ್ರೆಸ್‌ ಸೇರ್ಪಡೆಗೆ ಯತ್ನಿಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ