ಶರದ್ ಪವಾರ್ ರಾಜೀನಾಮೆ ತಿರಸ್ಕರಿಸಿದ ಎನ್‌ಸಿಪಿ ಕೋರ್ ಕಮಿಟಿ, ಸಭೆಯಲ್ಲಿ ಒಮ್ಮತದ ನಿರ್ಧಾರ!

Published : May 05, 2023, 12:13 PM IST
ಶರದ್ ಪವಾರ್ ರಾಜೀನಾಮೆ ತಿರಸ್ಕರಿಸಿದ ಎನ್‌ಸಿಪಿ ಕೋರ್ ಕಮಿಟಿ, ಸಭೆಯಲ್ಲಿ ಒಮ್ಮತದ ನಿರ್ಧಾರ!

ಸಾರಾಂಶ

ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡುವ ಶರದ್ ಪವಾರ್ ಭಾರಿ ಸಂಚಲನ ಸೃಷ್ಟಿಸಿದ್ದರು. ಈ ಕುರಿತು ಇಂದು ಸಭೆ ಸೇರಿದ ಎನ್‌ಸಿಪಿ ಕೋರ್ ಕಮಿಟಿ, ಶರದ್ ಪವಾರ್ ರಾಜೀನಾಮೆ ತಿರಸ್ಕರಿಸಿದೆ. ಇಷ್ಟೇ ಅಲ್ಲ ಶರದ್ ಪವಾರ್ ಪಕ್ಷದ ಮುಖ್ಯಸ್ಥರಾಗಿ ಮುಂದುವರಿಯಬೇಕು ಅನ್ನೋ ನಿರ್ಣಯ ತೆಗೆದುಕೊಂಡಿದೆ.

ಮುಂಬೈ(ಮೇ.05): ಶರದ್ ಪವಾರ್ ರಾಜೀನಾಮೆಯಿಂದ ಎನ್‌ಸಿಪಿ ಪಕ್ಷದಲ್ಲಿ ರಾಜಕೀಯ ತಲ್ಲಣ ಸೃಷ್ಟಿಯಾಗಿದೆ. ಮುಂಬೈನಲ್ಲಿ ಇಂದು ಸಭೆ ಸೇರಿದಿ ಎನ್‌ಸಿಪಿ ಕೋರ್ ಕಮಿಟಿ ಇದೀಗ ಶರದ್ ಪವಾರ್ ರಾಜೀನಾಮೆಯನ್ನು ತಿರಸ್ಕರಿಸಿದೆ. ಇದೇ ವೇಳೆ ಶರದ್ ಪವಾರ್ ಪಾರ್ಟಿ ಮುಖ್ಯಸ್ಥರಾಗಿ ಮುಂದುವರಿಯಬೇಕು ಅನ್ನೋ ಮನವಿಯನ್ನು ಕೋರ್ ಕಮಿಟಿ ಮಾಡಿದೆ. ಪ್ರಫುಲ್ ಪಟೇಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸುಪ್ರಿಯಾ ಸುಳೆ, ಅಜಿತ್ ಪವಾರ್ ಸೇರಿದಂತೆ ಹಲವು ಪ್ರಮುಖ ನಾಯಕರು ಪಾಲ್ಗೊಂಡಿದ್ದಾರೆ.

ಎನ್‌ಸಿಪಿ ಕಚೇರಿ ಒಳಗಡೆ ಸಭೆ ನಡೆಯುತ್ತಿದ್ದರೆ ಹೊರಗಡೆ ಕಾರ್ಯಕರ್ತರು, ಬೆಂಬಲಿಗರು ಶರದ್ ಪವಾರ್ ರಾಜೀನಾಮೆ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದರು. ಸಭೆಯಲ್ಲಿ ಒಮ್ಮತದಿಂದ ಶರದ್ ಪವಾರ್ ರಾಜೀನಾಮೆಯನ್ನು ತಿರಸ್ಕರಿಸಲಾಗಿದೆ. ಪಾರ್ಟಿಯಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಲು, ಮಾರ್ಗದರ್ಶನ ನೀಡಲು ಶರದ್ ಪವಾರ್ ಮುಖ್ಯಸ್ಥರಾಗಿ ಮುಂದುವರಿಯಬೇಕು ಎಂದು ನಿರ್ಣಯ ತೆಗೆದುಕೊಳ್ಳಲಾಗಿದೆ.

 

ಬಿಜೆಪಿ ಜತೆ ಎನ್‌ಸಿಪಿ ಮಹಾ ಸರ್ಕಾರ: ಈ ಹಾದಿ ಸುಗಮಕ್ಕೆಂದೇ ಪವಾರ್ ಪದತ್ಯಾಗ?

1999ರಿಂದ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಪವಾರ್‌ ಅವರು ಕಳೆದ ಮಂಗಳವಾರ ಏಕಾಏಕಿ ಪದತ್ಯಾಗ ಘೋಷಿಸಿದ್ದರು. ಇದರಿಂದ ಆಘಾತಕ್ಕೆ ಒಳಗಾದ ಕಾರ್ಯಕರ್ತರು ಈ ನಿರ್ಧಾರ ಹಿಂಪಡೆಯುವಂತೆ ಆಗ್ರಹಿಸಿದರೂ ಪವಾರ್‌ ಒಪ್ಪಿರಲಿಲ್ಲ. ಆದರೆ ಸಕ್ರಿಯ ರಾಜಕೀಯದಿಂದ ತಾವು ನಿವೃತ್ತರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಈ ನಡುವೆ ಗುರುವಾರ ತಮ್ಮನ್ನು ಭೇಟಿಯಾದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪವಾರ್‌, ಪಕ್ಷದ ಭವಿಷ್ಯದ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದೇನೆ. ರಾಜೀನಾಮೆ ಹಿಂಪಡೆಯುವ ಬೇಡಿಕೆ ಕುರಿತು ಒಂದೆರಡು ದಿನಗಳಲ್ಲಿ ನಿರ್ಧಾರ ಪ್ರಕಟಿಸುತ್ತೇನೆ ಎಂದಿದ್ದಾರೆ.

2019ರ ಚುನಾವಣೆಯ ಬಳಿಕ ರಾಷ್ಟ್ರೀಯವಾದಿ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ) ಜೊತೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಬಯಸಿತ್ತು. ಆದರೆ ಬಿಜೆಪಿಯೊಂದಿಗೆ ಯಾವುದೇ ಮೈತ್ರಿ ಸಾಧ್ಯವಿಲ್ಲ ಎಂದು ಎನ್‌ಸಿಪಿ ನಾಯಕ ಶರದ್‌ ಪವಾರ್‌ ಸ್ಪಷ್ಟಪಡಿಸಿದ್ದರು ಎಂಬ ವಿಷಯ ಅವರ ಆತ್ಮಕಥೆಯಿಂದ ತಿಳಿದುಬಂದಿದೆ. ಮುಂದಿನ ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಎನ್‌ಸಿಪಿ ಜೊತೆ ಸೇರಿ ಬಿಜೆಪಿ ಸರ್ಕಾರ ರಚಿಸಬಹುದು ಎಂಬ ವದಂತಿಗಳ ಬೆನ್ನಲ್ಲೇ ಈ ಅಂಶ ಪ್ರಾಮುಖ್ಯತೆ ಪಡೆದುಕೊಂಡಿದೆ.

2ಕ್ಕಿಂತ ಹೆಚ್ಚು ಮಕ್ಕಳಿರುವ ಸಂಸದ, ಶಾಸಕರನ್ನು ಅನರ್ಹಗೊಳಿಸಿ: ಅಜಿತ್ ಪವಾರ್

ಎನ್‌ಸಿಪಿಗೆ ಸರ್ಕಾರ ರಚನೆಯ ಬಗ್ಗೆ ಕೊಂಚ ಆಸಕ್ತಿ ಇದ್ದರೂ ಸಹ ರಾಜ್ಯದ ಒಳಿತಿನ ದೃಷ್ಟಿಯಿಂದ ಬಿಜೆಪಿ ಜೊತೆ ಸೇರದಿರಲು ನಿರ್ಧರಿಸಿದೆವು. 2019ರ ಚಳಿಗಾಲದ ಅಧಿವೇಶನದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಎನ್‌ಸಿಪಿ ಮತ್ತು ಬಿಜೆಪಿಯ ನಡುವೆ ಯಾವುದೇ ರಾಜಕೀಯ ಮೈತ್ರಿ ಸಾಧ್ಯವಿಲ್ಲ ಎಂಬುನ್ನು ಸ್ಪಷ್ಟವಾಗಿ ಹೇಳಿದೆ. ಆದರೆ ಈ ಸಮಯದಲ್ಲಿ ಕೆಲವು ಎನ್‌ಸಿಪಿ ನಾಯಕರು ಬಿಜೆಪಿ ಜೊತೆ ಮೈತ್ರಿಬಯಸಿದ್ದರು ಎಂಬುದನ್ನು ಗಮನಿಸಿದ್ದೆ. 2014ರಲ್ಲೂ ಬಿಜೆಪಿ ಎನ್‌ಸಿಪಿಯ ಸಖ್ಯವನ್ನು ಬಯಸಿತ್ತು. ಆದರೆ ಈ ವೇಳೆ ನಾನು ಮಾತುಕತೆಗೆ ಹೋಗಿರಲಿಲ್ಲ. ಕೆಲವು ದಿನಗಳ ಬಳಿಕ ಶಿವಸೇನೆಯ ಜೊತೆ ಸೇರಿ ಬಿಜೆಪಿ ಸರ್ಕಾರ ರಚನೆ ಮಾಡಿತು. ಈ ವೇಳೆ ಬಿಜೆಪಿಯನ್ನು ನಂಬಬಾರದು ಎಂಬ ಸತ್ಯ ನಮ್ಮ ನಾಯಕರಿಗೆ ಅರ್ಥವಾಯಿತು’ ಎಂದು ಅವರು ಬರೆದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ