
ನವದೆಹಲಿ(ಜೂ.02): ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳ ಎನ್‌ಡಿಯ ಮೈತ್ರಿಕೂಟ ಭರ್ಜರಿ ಜಯ ಸಾಧಿಸಲಿದೆ ಎಂದು ಹೇಳಿವೆ. ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಭಾರಿ ಹಿನ್ನಡೆ ಕಾಣಲಿದೆ, ಆದರೆ ಕಳೆದ ಚುನಾವಣೆಗಿಂತ ಕಾಂಗ್ರೆಸ್ ಪಕ್ಷದ ಗಳಿಕೆ ಹೆಚ್ಚಲಿದೆ ಎಂದು ಅಭಿಪ್ರಾಯಪಟ್ಟಿವೆ.
ನ್ಯೂಸ್ 18 ಮೆಗಾ ಎಕ್ಸಿಟ್ ಪೋಲ್ ಪ್ರಕಾರ, ರಾಜ್ಯದ ಒಟ್ಟು 28 ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ 23-26 ಸ್ಥಾನ ಬರಲಿದೆ. ಕಾಂಗ್ರೆಸ್ ಕೇವಲ 3-7 ಸ್ಥಾನಗಳಲ್ಲಿ ಕಾಂಗ್ರೆಸ್ ತನ್ನ ಗೆಲುವು ದಾಖಲಿಸಬಹುದು ಎಂದು ಹೇಳಿದೆ.
ಮತದಾನ ಅಂತ್ಯದ ಬೆನ್ನಲ್ಲೇ ಫಲೋಡಿ ಸಟ್ಟಾ ಬಜಾರ್ ಭವಿಷ್ಯ ಪ್ರಕಟ, ಹಲವು ಲೆಕ್ಕಾಚಾರ ಉಲ್ಟಾ!
ರಿಪಬ್ಲಿಕ್ ಟೀವಿ ಸಮೀಕ್ಷೆ ಪ್ರಕಾರ ಬಿಜೆಪಿ ಜೆಡಿಎಸ್ 22, ಕಾಂಗ್ರೆಸ್ 6 ಸ್ಥಾನ ಗೆಲ್ಲಲಿವೆ. ಇಂಡಿಯಾ ಟುಡೇ, ಎಬಿಪಿ ನ್ಯೂಸ್ ಎರಡೂಸಮೀಕ್ಷೆಗಳುಎನ್‌ಡಿಗೆ 23-25,ಕಾಂಗ್ರೆಸ್ ಗೆ 3-5 ಸ್ಥಾನ ನೀಡಿವೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25, ಜೆಡಿಎಸ್ 1, ಕಾಂಗ್ರೆಸ್ 1 ಹಾಗೂ ಪಕ್ಷೇತರರು 1 ಸ್ಥಾನದಲ್ಲಿ ಗೆದ್ದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.