
ನವದೆಹಲಿ: ಎನ್‌ಡಿಎ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಸಿ. ಪಿ. ರಾಧಾಕೃಷ್ಣನ್ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಇತರ ನಾಯಕರು ಈ ವೇಳೆ ಉಪಸ್ಥಿತರಿದ್ದರು.
ಉಪರಾಷ್ಟ್ರಪತಿ ಚುನಾವಣೆಯ ಚುನಾವಣಾಧಿಕಾರಿ ಹಾಗೂ ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿಯವರಿಗೆ ರಾಧಾಕೃಷ್ಣನ್ 4 ಸೆಟ್‌ಗಳ ನಾಮಪತ್ರವನ್ನು ಹಸ್ತಾಂತರಿಸಿದರು. ನಾಮಪತ್ರಕ್ಕೆ ಪ್ರಧಾನಿ ಮೋದಿ, ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಹಾಗೂ ಜೆಡಿಯು ನಾಯಕ ರಾಜೀವ್ ರಂಜನ್ ಸಿಂಗ್ ಅನುಮೋದಕರಾಗಿ ಸಹಿ ಹಾಕಿದ್ದಾರೆ.
ನಾಮಪತ್ರವನ್ನು ಪರಿಶೀಲಿಸಿದ ಚುನಾವಣಾಧಿಕಾರಿ, ರಾಧಾಕೃಷ್ಣನ್ ಅವರಿಂದ ಸಹಿ ಪಡೆದುಕೊಂಡರು. ಆ ಬಳಿಕ ಮೋದಿಯವರಿಗೆ ಸ್ವೀಕೃತಿ ಪತ್ರವನ್ನು ನೀಡಿದರು.
ಪ್ರತಿಪಕ್ಷ ಇಂಡಿಯಾ ಕೂಟದ ಅಭ್ಯರ್ಥಿ ನ್ಯಾ. ಸುದರ್ಶನ್ ರೆಡ್ಡಿ ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.