
ಕೋಲ್ಕತಾ: ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಅಭೂತಪೂರ್ವ ಜಯ ಸಾಧಿಸಿದ ಬೆನ್ನಲ್ಲೇ, ನಮ್ಮ ಮುಂದಿನ ಗುರಿ ಪಶ್ಚಿಮ ಬಂಗಾಳ ಎಂದು ಬಿಜೆಪಿ ಕಾರ್ಯಕರ್ತರು ಶುಕ್ರವಾರ ಘೋಷಿಸಿದ್ದಾರೆ. ಈ ಮೂಲಕ 2026ರ ಮಾರ್ಚ್-ಏಪ್ರಿಲ್‌ನಲ್ಲಿ ನಡೆಯಲಿರುವ ಬಂಗಾಳ ವಿಧಾನಸಭಾ ಚುನಾವಣೆಗೆ ಈಗಿಂದಲೇ ತಯಾರಿ ನಡೆಸುವುದಾಗಿ ತಿಳಿಸಿದ್ದಾರೆ.
ಶುಕ್ರವಾರ ಬಿಹಾರದ ನಂದಿಗ್ರಾಮ, ಕೂಚ್ ಬೇಹರ್ ಮೊದಲಾದೆಡೆ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಈ ವೇಳೆ ಮಾತನಾಡಿದ ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ಶಮಿಕ್ ಭಟ್ಟಾಚಾರ್ಯ, ‘ಬಿಹಾರದ ಗೆಲುವು ಬಹಳ ಸಂತಸ ತಂದಿದೆ. ನಮ್ಮ ಮುಂದಿನ ಹೋರಾಟ ಬಂಗಾಳದಲ್ಲಿ. ಮುಂಬರುವ ಚುನಾವಣೆಯಲ್ಲಿ ಟಿಎಂಸಿ ವಿಸರ್ಜನೆಯಾಗುತ್ತದೆ ಎಂದು ನಮಗೆ ಭರವಸೆಯಿದೆ’ ಎಂದಿದ್ದಾರೆ.
ಕಳೆದ ಬಾರಿ ಚುನಾವಣೆಯಲ್ಲಿ ಅಧಿಕಾರಕ್ಕೇರಲು ಬಿಜೆಪಿ ಸರ್ವ ಪ್ರಯತ್ನ ಮಾಡಿತ್ತು. ಆದರೆ 294 ಕ್ಷೇತ್ರಗಳಲ್ಲಿ 77 ಸ್ಥಾನಗಳನ್ನು ಮಾತ್ರ ಗೆಲ್ಲುವಲ್ಲಿ ಶಕ್ತವಾಗಿತ್ತು. 215 ಸ್ಥಾನ ಗೆದ್ದ ಟಿಎಂಸಿ ಅಧಿಕಾರದಲ್ಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.