
\Bಮೋದಿ, ವ್ಯವಸ್ಥೆ ಮೇಲೆ ವಿಶ್ವಾಸವಿದೆ: ಸಿಂಗ್\B
\Bಇದು ರಾಜಕೀಯ ವಿಷಯ ಅಲ್ಲ: ಸ್ಪಷ್ಟನೆ\B
ನವದೆಹಲಿ (ಜೂ.2): ನೀಟ್(NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ(Paper leak)ಯು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿ, ಬಿಜೆಪಿ ಸರ್ಕಾರ(BJP Government)ದ ವಿರುದ್ಧ ಕಾಂಗ್ರೆಸ್(Congress) ಹರಿಹಾಯುತ್ತಿರುವ ನಡುವೆ ಅಚ್ಚರಿಯೆಂಬಂತೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್(Congress Leader Digvijaya Singh) ಅವರು ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರ ಮೇಲೆ ವಿಶ್ವಾಸವಿದೆ ಎಂದಿದ್ದಾರೆ.
ಜೂ. 21ರಂದು ನಡೆಯಲಿರುವ ಮರುಪರೀಕ್ಷೆಯ ಸಿದ್ಧತೆ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಂಸದೀಯ ಸ್ಥಾಯಿ ಸಮಿತಿ ಸಭೆಯಲ್ಲಿ ಮಾತನಾಡುತ್ತಿದ್ದ ಸಿಂಗ್, ‘ನಾವು ಪ್ರಧಾನಿ ಹಾಗೂ ವ್ಯವಸ್ಥೆಯ ಮೇಲೆ ನಂಬಿಕೆ ಇಟ್ಟಿದ್ದೇವೆ. ನೀಟ್ ವಿಷಯದಲ್ಲಿ ಪ್ರಧಾನಿ ಮಧ್ಯಪ್ರವೇಶಿಸಿದ್ದಾರೆ. ವಿದ್ಯಾರ್ಥಿಗಳಿಗೆ ಯಾವುದೇ ಅನ್ಯಾಯವಾಗದು ಎಂಬುದು ನಮ್ಮ ವಿಶ್ವಾಸ’ ಎಂದರು.
ಸಭೆಗೂ ಮುನ್ನ ನಡೆದ ಅನೌಪಚಾರಿಕ ಚರ್ಚೆಯ ವೇಳೆ ಈ ವಿವಾದವನ್ನು ರಾಜಕೀಯಗೊಳಿಸಲಾಗುತ್ತಿದೆ ಎಂಬ ಆಡಳಿತ ಪಕ್ಷದವರ ಕಳವಳಕ್ಕೆ ಪ್ರತಿಕ್ರಿಯಿಸಿದ ಸಿಂಗ್, ‘ಇದು ರಾಜಕೀಯ ವಿಷಯವಲ್ಲ. ಬದಲಿಗೆ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರ ಮೇಲೆ ಪರಿಣಾಮ ಬೀರಿರುವ ಘಟನೆ. ಸಮಿತಿಯ ಉದ್ದೇಶವು ಪರೀಕ್ಷೆ ಬಗೆಗಿನ ಕಳವಳಗಳನ್ನು ಇತ್ಯರ್ಥಗೊಳಿಸಿ ನ್ಯಾಯಯುತವಾಗಿ ಪರೀಕ್ಷೆ ನಡೆಸುವುದಾಗಿದೆ’ ಎಂದರು. ಜತೆಗೆ ಇದಕ್ಕಾಗಿ ಅವರು ಶಿಕ್ಷಣ ಸಚಿವಾಲಯ ಮತ್ತು ಅಧಿಕಾರಿಗಳಿಗೆ ಶುಭ ಕೋರಿದರು.
ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕೇಳಿದ್ದ ಕಾಂಗ್ರೆಸ್ ಪಕ್ಷದ ಹಿರಿಯರೊಬ್ಬರ ಈ ನಡೆ ಎಲ್ಲರಲ್ಲಿ ಅಚ್ಚರಿ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.