ನೇಹಾ ಹಿರೇಮಠ್ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಸಿಎಂ ಸಿದ್ದರಾಮಯ್ಯ

By Kannadaprabha News  |  First Published Apr 23, 2024, 8:03 AM IST

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಪ್ರಕರಣದ ವಿಚಾರಣೆಗಾಗಿ ವಿಶೇಷ ಕೋರ್ಟ್‌ ರಚಿಸುತ್ತೇವೆ. 


ಶಿವಮೊಗ್ಗ (ಏ.23): ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಪ್ರಕರಣದ ವಿಚಾರಣೆಗಾಗಿ ವಿಶೇಷ ಕೋರ್ಟ್‌ ರಚಿಸುತ್ತೇವೆ. ಸಿಐಡಿ ಅಧಿಕಾರಿಗಳ ತಂಡ ಹುಬ್ಬಳ್ಳಿಗೆ ತೆರಳಿ ಪೊಲೀಸರಿಂದ ನೇಹಾ ಹತ್ಯೆ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದೆ. ನೇಹಾ ಹತ್ಯೆ ಹಿಂದೆ ಯಾರ ಕೈವಾಡ ಇದ್ದರೂ, ಯಾರೇ ಭಾಗಿಯಾಗಿದ್ದರೂ ನಿಷ್ಪಕ್ಷಪಾತ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸಿಒಡಿ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

ಮೋದಿಯ ವಿಕಸಿತ ಭಾರತವೆಂಬ ಸುಳ್ಳಿನ ಪ್ರಚಾರಕ್ಕೆ ಸೋಲಾಗಲಿದೆ: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಎನ್ನುವ ಸುಳ್ಳಿನ ಪ್ರಚಾರಕ್ಕೆ ಸೋಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಕಸಿತ ಭಾರತ ಅಂತ ನರೇಂದ್ರ ಮೋದಿ ಹೇಳಿದರು. ವಿಕಸಿತ ಸಮಾಜ ಅಂದರೆ ಅದು ವರ್ಗರಹಿತ ಸಮಾಜ, ಜಾತಿ ಯತೆ ಹೋಗಬೇಕು. ಸಮ ಸಮಾಜ ನಿರ್ಮಾಣ ಅಗಬೇಕು, ಮೋದಿ ಅವರು ಹತ್ತು ವರ್ಷ ರೈತರಿಗೆ, ಬಡವರಿಗೆ ಏನು ಮಾಡಿದ್ದಾರೆ. ಶ್ರೀಮಂತರು ಇಟ್ಟ ಕಪ್ಪು ಹಣ ನೂರೇ ದಿನದಲ್ಲಿ ವಾಪಸು ತರುತ್ತೇನೆ. 15 ಲಕ್ಷ ನಿಮ್ಮ ಖಾತೆಗೆ ಹಾಕುತ್ತೇನೆ ಎಂದಿದ್ದರು, ಹಾಕಿದಾರಾ ಎಂದು ಪ್ರಶ್ನಿಸಿದರು.

Tap to resize

Latest Videos

undefined

ರಾಜ್ಯದ 25 ದಂಡಪಿಂಡಗಳನ್ನು ಜನರು ಮನೆಗೆ ಕಳಿಸಬೇಕು: ಬಿ.ವಿ.ಶ್ರೀನಿವಾಸ್ ವಿಶೇಷ ಸಂದರ್ಶನ!

ನಿರುದ್ಯೋಗ ಹೋಗಲಾಡಿಸುತ್ತೇನೆ, 2 ಕೋಟಿ ಉದ್ಯೋಗ ಸೃಷ್ಠಿ ಮಾಡುತ್ತೇನೆ ಎಂದಿದ್ದರು. ಉದ್ಯೋಗ ಸೃಷ್ಠಿಯಾಯಿತಾ,..? ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆ, ಬೆಲೆ ಇಳಿಸುತ್ತೇನೆ ಎಂದರು. ಗ್ಯಾಸು, ಗೊಬ್ಬರ, ಪೆಟ್ರೋಲ್, ಡೀಸಲ್, ತೈಲ ಬೆಲೆ ಏರಿಸಲಾಯಿತು, ರೈತರಿಗೆ ಖರ್ಚು ಹೆಚ್ಚಾಯಿತು, ಅಚ್ಚೆ ದಿನ್ ಬಂತಾ ಎಂದು ಕೇಳಿದರು. ವಾಜಪೇಯಿಯವರ ಇಂಡಿಯಾ ಶೈನಿಂಗ್ ಎನ್ನುವ ಸುಳ್ಳು ಪ್ರಚಾರ ಸೋತ ಹಾಗೆಯೇ ಮೋದಿಯವರ ವಿಕಸಿತ ಭಾರತ ಸುಳ್ಳಿನ ಪ್ರಚಾರಕ್ಕೂ ಸೋಲಾಗುತ್ತದೆ. ಬಡವರು, ಮಧ್ಯಮ ವರ್ಗದ ಕುಟುಂಬಗಳ ಭವಿಷ್ಯ ಉಳಿಯಲು ಇದು ನಿರ್ಣಾಯಕ ಚುನಾವಣೆ. ಯೋಚಿಸಿ ನಿರ್ಧರಿಸಬೇಕು ಎಂದರು.

ದೇವೇಗೌಡರ ಸುಳ್ಳು ಕೇಳಿ ನಾಚಿಕೆ ಆಯ್ತು: ಮೋದಿಯವರ ಜತೆ ಪೈಪೋಟಿಗೆ ಬಿದ್ದವರಂತೆ ದೇವೇಗೌಡರು ಹೇಳಿದ ಸುಳ್ಳುಗಳನ್ನು ಕೇಳಿ ನನಗೇ ನಾಚಿಕೆ ಆಯ್ತು. ದೇವೇಗೌಡರು ಮೋದಿಯವರ ಮಟ್ಟಕ್ಕೆ ಇಳಿದು ಸುಳ್ಳು ಹೇಳಿದ್ರಲ್ಲಾ ಅಂತ ನನಗೇ ನಾಚಿಕೆ ಆಯ್ತು ಎಂದರು. ಮೋದಿಯವರು ರಾಜ್ಯದ ಜನತೆಗೆ ಕೊಟ್ಟ ಖಾಲಿ ಚೊಂಬನ್ನು ದೇವೇಗೌಡರು ಅಕ್ಷಯ ಪಾತ್ರೆ ಎಂದು ಸುಳ್ಳು ಹೇಳಿದ್ದಾರೆ. ಚೊಂಬು ಅಕ್ಷಯ ಪಾತ್ರೆ ಆಗಿದ್ದರೆ, ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಕೊಡಲು ಏಕೆ ಸಾಧ್ಯವಾಗಲಿಲ್ಲ ? ರೈತರ ಸಾಲ ಏಕೆ ಮನ್ನಾ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ನನಗೆ ಚಿಕ್ಕಬಳ್ಳಾಪುರ ಟಿಕೆಟ್ ಕೊಡಿಸಿದ್ದು ಅಂಬಾನಿ ಅಲ್ಲ: ಮುಖಾಮುಖಿ ಸಂದರ್ಶನದಲ್ಲಿ ಡಾ.ಕೆ.ಸುಧಾಕರ್‌

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಇಡೀ ದೇಶದ ರೈತರ ಸಾಲ 76 ಸಾವಿರ ಕೋಟಿಯನ್ನು ಒಂದೇ ಸಾರಿ ಮನ್ನಾ ಮಾಡಿದರು. ಮೋದಿ15 ಲಕ್ಷ ಕೋಟಿ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ಮಾಡಿದರು. ಹೀಗಾಗಿ ಮೋದಿ ಯವರು ರಾಜ್ಯದ, ದೇಶದ ಮಧ್ಯಮ ವರ್ಗ ಮತ್ತು ಬಡವರ ಕೈಗೆ ಖಾಲಿ ಚೊಂಬು ಕೊಟ್ಟರು. ಶ್ರೀಮಂತ ಉದ್ಯಮಿಗಳ ಪಾಲಿಗೆ ಅಕ್ಷಯ ಪಾತ್ರೆ ಆದರು. ಈ ಸತ್ಯ ದೇವೇಗೌಡರಿಗೆ ಗೊತ್ತಿದ್ದೂ ಏಕೆ ರಾಜ್ಯದ ಜನರಿಗೆ ಸುಳ್ಳು ಹೇಳಿದರು ಎಂದು ಪ್ರಶ್ನಿಸಿದರು. ನಾವು ನುಡಿದಂತೆ ನಡೆದು ಪ್ರತೀ ಕುಟುಂಬಗಳ ಖಾತೆಗೆ, ಜನರ ಜೇಬಿಗೆ ಹಣ ಹಾಕುತ್ತಿರುವ ನಮ್ಮ ಗ್ಯಾರಂಟಿಗಳಿಗೆ ಮತ ಹಾಕುತ್ತೀರೋ, ಸುಳ್ಳುಗಳ ಸರದಾರನ ಖಾಲಿ ಚೊಂಬಿಗೆ ಮತ ಹಾಕುತ್ತೀರೋ ಯೋಚಿಸಿ ಎಂದು ಕರೆ ನೀಡಿದರು.

click me!