ಪ್ರತಿಪಕ್ಷಗಳಿಂದ ನೇಹಾ ಹತ್ಯೆ ಪ್ರಕರಣ ರಾಜಕೀಯಕ್ಕೆ ಬಳಕೆ: ಸಿಎಂ ಸಿದ್ದರಾಮಯ್ಯ

By Govindaraj S  |  First Published Apr 21, 2024, 8:03 AM IST

ಪ್ರತಿಪಕ್ಷಗಳು ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. 


ಮೈಸೂರು (ಏ.21): ಪ್ರತಿಪಕ್ಷಗಳು ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಸುದ್ದಿಗಾರರೊಡನೆ ಮಾತನಾಡಿ, ನೇಹಾ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಕೊಲೆಗಾರನನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಕೊಲೆಗಾರನಿಗೆ ಉಗ್ರ ಶಿಕ್ಷೆ ಆಗುವಂತೆ ನೋಡಿಕೊಳ್ಳಲಿದೆ ಎಂದರು. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ. 

ಎಲ್ಲಾ ಕಾಲದಲ್ಲೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ, ಸುವ್ಯವಸ್ಥೆ ಬೇರೆ ರಾಜ್ಯಗಳಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಘಟನೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇದರ ಪರಿಣಾಮ ಸರ್ಕಾರದ ಮೇಲೆ ಆಗುವುದಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

Latest Videos

undefined

ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯ ಮುನ್ನವೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಮಂತ್ರಿ ಜಿ. ಪರಮೇಶ್ವರ ದಾರಿ ತಪ್ಪಿಸುತ್ತಿದ್ದಾರೆ. ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದಿಂದ ಮೃತ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಇಲ್ಲದಂತಾಗಿದೆ ಎಂದು ಮಾಜಿ ಕೃಷಿ ಸಚಿವ ಬಿ.ಸಿ. ಪಾಟೀಲ್ ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದರು. ನೇಹಾ ಹಿರೇಮಠ ಹತ್ಯೆ ಖಂಡಿಸಿ ಹಾಗೂ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪಟ್ಟಣದ ಭಗತ್‌ಸಿಂಗ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಡಾ.ಕೆ.ಸುಧಾಕರ್‌ಗೆ ದೊಡ್ಡ ಗೆಲುವು ತಂದುಕೊಡಿ: ಪ್ರಧಾನಿ ಮೋದಿ ಮನವಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೇ ಸಂಪೂರ್ಣ ಹದಗೆಟ್ಟಿದ್ದು, ರಾಜ್ಯದಲ್ಲಿ ಹಾಡಹಗಲೇ ಸಾಲು ಸಾಲು ಕೊಲೆಗಳಾಗುತ್ತಿದ್ದರೂ ಅದನ್ನು ಸಮರ್ಥನೆ ಮಾಡಿಕೊಂಡು ಕೇವಲ ಒಂದು ಕೋಮಿನಿ ವೋಟ್ ಬ್ಯಾಂಕ್‌ಗಾಗಿ ಹಿಂದೂಗಳನ್ನು ತುಚ್ಛವಾಗಿ ಕಾಣುತ್ತಿರುವ ಸರಕಾರದ ನಡೆ ಖಂಡನೀಯ. ತಮ್ಮ ಪಕ್ಷದ ಕಾರ್ಯಕರ್ತನ ಮಗಳ ಹತ್ಯೆಯಲ್ಲೂ ಓಲೈಕೆ ರಾಜಕಾರಣ ಖಂಡನೀಯ. ಹಿಂದೂಗಳು ಎಚ್ಚೆತ್ತುಕೊಳ್ಳದಿದ್ದರೆ ಮುಂಬರುವ ದಿನಗಳಲ್ಲಿ ಹಿಂದೂಗಳ ಬದುಕು ದುಸ್ತರವಾಗುವುದು ಖಂಡಿತ ಎಂದರು.

click me!