ನಾವು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೇಳಿಯೇ ಇಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಚ್ಚರಿ ಹೇಳಿಕೆ ನೀಡಿದ್ದಾರೆ.
ವಿಜಯಪುರ (ಡಿ.16): ನಾವು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೇಳಿಯೇ ಇಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಚ್ಚರಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಅಹಿಂದ ವರ್ಗದ ಹಕ್ಕು ಕಸಿದು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಪಡೆಯಲು ಮುಂದಾಗಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ನಾವು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೇಳಿಯೇ ಇಲ್ಲ. ಆಗ ಕಾಂಗ್ರೆಸ್‌ನ ಮಾಜಿ ಶಾಸಕರಾಗಿದ್ದು, ಈಗ ಹಾಲಿ ಶಾಸಕರಾಗಿರುವವರು 2ಎ ಪ್ರಸ್ತಾವನೆ ಮಾಡಿದ್ದರು. ನಾವು ಮೊದಲಿನಿಂದಲೂ ಪಂಚಮಸಾಲಿಗೆ 2ಎ ಬೇಡ.
ಅದರಲ್ಲಿ 104 ಜಾತಿಗಳಿವೆ. ಅವರ ಹಕ್ಕನ್ನು ಕಸಿದುಕೊಳ್ಳಲು ನಾವು ತಯಾರಿಲ್ಲ ಎಂದು ಹೇಳುತ್ತಾ ಬಂದಿದ್ದೇವೆ ಎಂದರು. ಪಂಚಮಸಾಲಿಗೆ 2ಎ ಮೀಸಲಾತಿ ಕೇಳುತ್ತಿರುವುದು ಸಂವಿಧಾನ ವಿರೋಧಿ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿ, ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಕೊಟ್ಟಿರುವುದು ಸಂವಿಧಾನ ವಿರೋಧಿಯಲ್ಲವೇ?. ರಾಜ್ಯದ ಸಿಎಂ, ವಕೀಲರಾಗಿರುವ ಅವರಿಗೆ ಸಂವಿಧಾನದ ಬಗ್ಗೆ ಅರಿವಿಲ್ಲವೇ?, ಆಂಧ್ರ, ಪಶ್ಚಿಮ ಬಂಗಾಳ ಹೈಕೋರ್ಟ್ ನಲ್ಲಿ ಮುಸ್ಲಿಮರಿಗೆ ಮೀಸಲಾತಿ ಅಸಂವಿಧಾನಿಕ ಎಂದು ತೀರ್ಪು ಪ್ರಕಟವಾಗಿದೆ. ಸುಪ್ರೀಂಕೋರ್ಟ್ ಸಹ ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿ ಕೊಡಲು ಬರಲ್ಲ ಎಂದಿದೆ ಎಂದರು.
ಮಾಣಿಪ್ಪಾಡಿ ಏಕೆ ಉಲ್ಟಾ ಹೇಳಿಕೆ ಕೊಡ್ತಿದ್ದಾರೆ? ಅವರ ವಿಡಿಯೋ ನೋಡಿ ನಾನು ಪ್ರತಿಕ್ರಿಯಿಸಿದ್ದೆ: ಸಿದ್ದರಾಮಯ್ಯ
ಬೆಂಬಲಿಗರಿಂದ ರಹಸ್ಯ ಸಭೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲಿಗ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಮುಖಂಡರು ಹಾಗೂ ಬೆಂಬಲಿಗರ ಎರಡು ದಿನಗಳ ಸಭೆ ಸಂಜೆಯಿಂದ ನಗರದ ಸಾಯಿ ಇಂಟರ್ ನ್ಯಾಷನಲ್ ಹೋಟೆಲ್‌ನಲ್ಲಿ ಶುರುವಾಗಿದೆ. ವಿಜಯೇಂದ್ರ ಅವರ ಕೈ ಬಲಪಡಿಸುವ ಉದ್ದೇಶದಿಂದ ದಾವಣಗೆರೆಯಲ್ಲಿ ದೊಡ್ಡಮಟ್ಟದಲ್ಲಿ ಸಮಾವೇಶ ಆಯೋಜಿಸುವ ಬಗ್ಗೆ, ಪಕ್ಷದಿಂದ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಉಚ್ಚಾಟಿಸುವಂತೆ ಪಕ್ಷದ ಹೈಕಮಾಂಡ್‌ಗೆ ಒತ್ತಾಯಿಸುವುದೂ ಸೇರಿ ಅನೇಕ ವಿಷಯಗಳ ಬಗ್ಗೆ ರಹಸ್ಯ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
undefined
ಈ ಮಧ್ಯೆ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ವಿಜಯೇಂದ್ರ ಅವರಿಗೆ ಬಲ ನೀಡಲು ಸಭೆ ನಡೆಸಿದ್ದೇವೆ. ಈಗಾಗಲೇ ನಾವು ಆರು ಸಭೆಗಳನ್ನು ನಡೆಸಿದ್ದು, ದಾವಣಗೆರೆಯಲ್ಲಿ ಇದೀಗ 7ನೇ ಸಭೆ ನಡೆಸುತ್ತಿದ್ದೇವೆ. ಎರಡು ದಿನಗಳ ಸಭೆಯಲ್ಲಿ 40ಕ್ಕೂ ಹೆಚ್ಚು ಮುಖಂಡರು ಭಾಗವಹಿಸುತ್ತಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಸದೃಢವಾಗಬೇಕೆಂಬ ಸದುದ್ದೇಶದಿಂದ ಸಭೆ ನಡೆಸಿದ್ದೇವೆ. ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇದೀಗ ಒಂದು ವರ್ಷವಾಗುತ್ತಿದೆ. ಅವರ ನೇತೃತ್ವದಲ್ಲಿ 17 ಲೋಕಸಭಾ ಕ್ಷೇತ್ರಗಳನ್ನು ಗೆದ್ದಿದ್ದೇವೆ ಎಂದು ತಿಳಿಸಿದರು.
ವಕ್ಫ್ ಆಸ್ತಿ ಕಬಳಿಕೆ ಕುರಿತು ಮೌನವಾಗಿರಲು ಆಮಿಷವೊಡ್ಡಿದ್ದು ಕಾಂಗ್ರೆಸ್: ಮಾಣಿಪ್ಪಾಡಿ
ಭಾನುವಾರ ಬೆಳಗ್ಗೆ ದಾವಣಗೆರೆಯ ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿಯ ದರ್ಶನ ಪಡೆಯುತ್ತೇವೆ. ನಂತರ, ಬೆಳಗ್ಗೆ 11ಕ್ಕೆ ಸಾಯಿ ಇಂಟರ್ ನ್ಯಾಷನಲ್ ಹೋಟೆಲ್‌ನಲ್ಲೇ ಮತ್ತೆ ಸಭೆ ನಡೆಸುತ್ತೇವೆ. ಭಾನುವಾರದ ಸಭೆಯ ನಂತರ ನಮ್ಮ ನಿರ್ಣಯ ತಿಳಿಸುತ್ತೇವೆ ಎಂದು ಹೇಳಿದರು. ಪಕ್ಷದ ಮುಖಂಡರಾದ ವೈ.ಸಂಪಂಗಿ, ಬ್ಯಾಡಗಿ ವಿರೂಪಾಕ್ಷಪ್ಪ, ರಾಣೆಬೆನ್ನೂರಿನ ಅರುಣಕುಮಾರ ಪೂಜಾರ, ಕೊಳ್ಳೆಗಾಲದ ಮಹೇಶ, ಮಾನ್ವಿಯ ಗಂಗಾಧರ ನಾಯ್ಕ, ಶಿವಮೊಗ್ಗದ ಕುಮಾರಸ್ವಾಮಿ, ಸೀಮಾ ಮಸೂತಿ, ಮೊಳಕಾಲ್ಮೂರು ತಿಪ್ಪೇಸ್ವಾಮಿ, ಕಡೂರು ಬೆಳ್ಳಿ ಪ್ರಕಾಶ, ರಾಜಶೇಖರ ಶೀಲವಂತ, ಮಸ್ಕಿ ಪ್ರತಾಪ ಗೌಡ ಸೇರಿದಂತೆ ಅನೇಕ ಜಿಲ್ಲೆಗಳಿಂದ ಮುಖಂಡರು ಆಗಮಿಸಿದ್ದು, ಭಾನುವಾರ ಮತ್ತಷ್ಟು ಮುಖಂಡರು ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ.