ಕಾಂಗ್ರೆಸ್ ಸೇರುತ್ತೇನೆಂದು ಎಲ್ಲೂ ಹೇಳಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ

By Kannadaprabha NewsFirst Published Sep 3, 2023, 11:21 PM IST
Highlights

ನಾನು ಸ್ವಾಭಿಮಾನದಿಂದ ರಾಜಕೀಯ ಮಾಡಿಕೊಂಡು ಬಂದವನು. ನನಗೆ ಬ್ಲಾಕ್ ಮೇಲ್ ಮಾಡಿ ಗೊತ್ತಿಲ್ಲ. ನಾನು ಬಿಜೆಪಿ ಆಂತರಿಕ ವಿಚಾರವಾಗಿ ಮಾತನಾಡಿದ್ದೇನೆ ಹೊರತು ಕಾಂಗ್ರೆಸ್ ಸೇರುತ್ತೇನೆಂದು ಎಲ್ಲೂ ಹೇಳಿಲ್ಲ. ಅರ್ಜಿಯನ್ನು ಯಾರಿಗೂ ಹಾಕಿಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಹೊನ್ನಾಳಿ (ಸೆ.03): ನಾನು ಸ್ವಾಭಿಮಾನದಿಂದ ರಾಜಕೀಯ ಮಾಡಿಕೊಂಡು ಬಂದವನು. ನನಗೆ ಬ್ಲಾಕ್ ಮೇಲ್ ಮಾಡಿ ಗೊತ್ತಿಲ್ಲ. ನಾನು ಬಿಜೆಪಿ ಆಂತರಿಕ ವಿಚಾರವಾಗಿ ಮಾತನಾಡಿದ್ದೇನೆ ಹೊರತು ಕಾಂಗ್ರೆಸ್ ಸೇರುತ್ತೇನೆಂದು ಎಲ್ಲೂ ಹೇಳಿಲ್ಲ. ಅರ್ಜಿಯನ್ನು ಯಾರಿಗೂ ಹಾಕಿಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಕೇಂದ್ರ ಸರ್ಕಾರ 9 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಹಾಸಂಪರ್ಕ ಅಭಿಯಾನದಡಿಯಲ್ಲಿ ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರವನ್ನು ತಾಲೂಕಿನ ಎಚ್.ಗೋಪಗೊಂಡನಹಳ್ಳಿ ಗ್ರಾಮದ ಅಡಿಕೆ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರಿಗೆ ವಿತರಿಸಿ ಮಾತನಾಡಿ ನನಗೆ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಗ್ಗೆ ಅಪಾರ ಗೌರವವಿದೆ. ನಾನು ಬಿಜೆಪಿಯಿಂದ ದಾವಣಗೆರೆ ಲೋಕಸಭೆಗೆ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ನಾನು ಬಿಜೆಪಿ ಬಿಡುವುದಿಲ್ಲ ಎಂದು ಹತ್ತಾರು ಬಾರಿ ಹೇಳಿದ್ದೇನೆ, ಈಗಲು ಹೇಳುತ್ತಿದ್ದೇನೆ ಎಂದು ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ಸರ್ಕಾರಕ್ಕೆ ಕಾವೇರಿ ನೀರನ್ನು ರಕ್ಷಣೆ ಮಾಡುವ ಆಸಕ್ತಿಯೇ ಇಲ್ಲ: ಸಿ.ಎಸ್.ಪುಟ್ಟರಾಜು

ಮುಂದೆಯೂ ಭೇಟಿಯಾಗುವೆ: ಹೊನ್ನಾಳಿ -ನ್ಯಾಮತಿ ತಾಲೂಕು ಬರ ಪೀಡಿತ ಘೋಷಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಕೃಷಿ ಸಚಿವ ಚೆಲುವರಾಯಸ್ವಾಮಿಯವರ ಭೇಟಿ ಮಾಡಿದ್ದೇನೆ. ಅಲ್ಲದೆ ನಮ್ಮ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದ್ದ ಕಾಮಗಾರಿಗಳು ಟೆಂಡರ್ ಆಗಿದ್ದು, ಅನುದಾನ ಬಿಡುಗಡೆ ಮಾಡುವಂತೆ ಸಚಿವರ ಭೇಟಿಯಾಗಿ ಮನವಿ ಮಾಡಿದ್ದೇನೆ, ಮುಂದೆಯೂ ಭೇಟಿ ಮಾಡುತ್ತೇನೆ. ಇದರಲ್ಲಿ ತಪ್ಪೇನಿದೇ ಎಂದು ಪ್ರಶ್ನಿಸಿದರು. ಗ್ರಾಪಂ ಸದಸ್ಯರಾದ ರಮೇಶ್, ಸುರೇಶ್, ಮುಖಂಡರಾದ ಬಸವರಾಜ್ ಸೇರಿ ಗ್ರಾಮದ ಮುಖಂಡರಿದ್ದರು.

ಇನ್‌ಸ್ಟಾಗ್ರಾಮ್‌ನಲ್ಲಿ ಲೈಂಗಿಕ ಕಿರುಕುಳ: ಫೋಕ್ಸೋ ಕಾಯ್ದೆಯಡಿಯಲ್ಲಿ ಪ್ಯಾರಮೆಡಿಕಲ್ ವಿದ್ಯಾರ್ಥಿ ಬಂಧನ

ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರ ಇಡೀ ದೇಶದಲ್ಲೇ ಎಲ್ಲಾ ಬೂತ್‌ಗಳಿಗೆ ಹಂಚಿದ ಏಕೈಕ ತಾಲೂಕು ಎಂದರೆ ಅದು ಹೊನ್ನಾಳಿ-ನ್ಯಾಮತಿ. ನಾನು ಪಕ್ಷದಲ್ಲಿ ಸಕ್ರಿಯನಾಗಿದ್ದೇನೆ, ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಮಾಡುವಂತೆ ಜನರ ಬಳಿ ಮನವಿ ಮಾಡುತ್ತಿದ್ದೇನೆಂದರು. ಚುನಾವಣೆಯಲ್ಲಿ ಗೆದ್ದಾಗಲೂ ಜನರ ಮಧ್ಯೆ ಇದ್ದೇ, ಈಗಲೂ ಜನರ ಮಧ್ಯೆ ಇದ್ದೇನೆ. ದಿನದ 18 ಗಂಟೆ ನಾನು ಕೆಲಸ ಮಾಡುತ್ತಿದ್ದೇನೆ. ಜನರ ಕಷ್ಟ ಕೇಳುವುದು ನನ್ನ ಕರ್ತವ್ಯ. ಈ ನಿಟ್ಟಿನಲ್ಲಿ ಚುನಾವಣೆಯಲ್ಲಿ ಸೋತಾಗಿನಿಂದ ಅವಳಿ ತಾಲೂಕಿನ ಪ್ರತಿ ಗ್ರಾಮಕ್ಕೆ ಮೂರು ಬಾರಿ ಭೇಟಿ ನೀಡಿ ಜನರ ಕಷ್ಟ ಅಲಿಸುವ ಕೆಲಸ ಮಾಡಿದ್ದೇನೆ.
-ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ

click me!