ಲೋಕಸಭೆ ಚುನಾವಣೆ 2024: ಬಿಜೆಪಿ ಗೆಲುವಿನಿಂದ ಅಭಿವೃದ್ಧಿಯ ಹೊಸ ಪರ್ವ, ಅಶೋಕ್‌

Published : Apr 10, 2024, 01:27 PM IST
ಲೋಕಸಭೆ ಚುನಾವಣೆ 2024: ಬಿಜೆಪಿ ಗೆಲುವಿನಿಂದ ಅಭಿವೃದ್ಧಿಯ ಹೊಸ ಪರ್ವ, ಅಶೋಕ್‌

ಸಾರಾಂಶ

ದೇಶದ ಭವಿಷ್ಯ ಮತ್ತಷ್ಟು ಸದೃಢಗೊಳಿಸಲು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಬೇಕಿದೆ. ಮೂರನೇ ಬಾರಿಗೆ ಮೋದಿಯವರನ್ನು ಗೆಲ್ಲಿಸುವ ಮೂಲಕ ವಿಕಸಿತ ಭಾರತದ ಜೊತೆಗೆ ವಿಕಸಿತ ದೊಡ್ಡಬಳ್ಳಾಪುರ-ಚಿಕ್ಕಬಳ್ಳಾಪುರಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ 

ದೊಡ್ಡಬಳ್ಳಾಪುರ(ಏ.10): ರಾಜ್ಯದಲ್ಲಿ ಕಾಂಗ್ರೆಸ್‌ನ ದುರಾಡಳಿತ ಅಂತ್ಯಗೊಳಿಸಲು ಹಾಗೂ ಕಳೆದ 10 ತಿಂಗಳಲ್ಲಿ ಕಾಣದ ಅಭಿವೃದ್ಧಿಯನ್ನು ಮತ್ತೆ ತರಲು ಬಿಜೆಪಿ ಆಡಳಿತ ಅಗತ್ಯವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದರು. ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿ, ದೊಡ್ಡಬೆಳವಂಗಲ ಹೋಬಳಿ ಮತ್ತು ಸಾಸಲು ಹೋಬಳಿ ವ್ಯಾಪ್ತಿಯ ವಿವಿಧೆಡೆ ಸೋಮವಾರ ನಡೆದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದ ಭವಿಷ್ಯ ಮತ್ತಷ್ಟು ಸದೃಢಗೊಳಿಸಲು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಬೇಕಿದೆ. ಮೂರನೇ ಬಾರಿಗೆ ಮೋದಿಯವರನ್ನು ಗೆಲ್ಲಿಸುವ ಮೂಲಕ ವಿಕಸಿತ ಭಾರತದ ಜೊತೆಗೆ ವಿಕಸಿತ ದೊಡ್ಡಬಳ್ಳಾಪುರ-ಚಿಕ್ಕಬಳ್ಳಾಪುರಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದರು.

ಕೋವಿಡ್ ವೇಳೆಯ ಆರೋಪಗಳು ಕೇವಲ ಅಪಪ್ರಚಾರ: ಡಾ.ಕೆ.ಸುಧಾಕರ್

ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗ್ಯಾರಂಟಿಗಳಿಂದ ಜನರನ್ನು ದಿಕ್ಕುತಪ್ಪಿಸಿ ಗೆದ್ದಿದೆ. ಈ ಲೋಕಸಭೆ ಚುನಾವಣೆಯಲ್ಲಿ ಮೋಸಕ್ಕೆ ಅವಕಾಶ ಮಾಡಿಕೊಡದೆ ನರೇಂದ್ರ ಮೋದಿಯವರನ್ನು ಗೆಲ್ಲಿಸಬೇಕು. ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಣ್ಣಿನ ಮಗ ಎಚ್‌.ಡಿ.ದೇವೇಗೌಡರ ಸಮಾಗಮವಾಗಿದ್ದು, ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಕಂಡುಬಂದಿದೆ. ರಾಜ್ಯದ ಆರೂವರೆ ಕೋಟಿ ಜನರ ಏಳಿಗೆಗಾಗಿ ಈ ಸಮಾಗಮ ನಡೆದಿದೆ ಎಂದರು.

ಶಾಶ್ವತ ನೀರಾವರಿಗೆ ಆದ್ಯತೆ:

ದೊಡ್ಡಬಳ್ಳಾಪುರ ಸೇರಿ ಬಯಲುಸೀಮೆ ಭಾಗಕ್ಕೆ ಶಾಶ್ವತ ನೀರಾವರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತರುವುದು ತಮ್ಮ ಮೊದಲ ಆದ್ಯತೆಯಾಗಿದೆ. ದೊಡ್ಡಬಳ್ಳಾಪುರಕ್ಕೆ ಈಗಾಗಲೇ ಜಿಲ್ಲಾಸ್ಪತ್ರೆ ನೀಡಲಾಗಿದೆ. ಜಕ್ಕಲಮಡಗು ಜಲಾಶಯದಿಂದ ದೊಡ್ಡಬಳ್ಳಾಪುರದ ಜನರಿಗೆ ಕುಡಿಯುವ ನೀರು ನೀಡಲಾಗುತ್ತಿದೆ ಎಂದು ವಿವರಿಸಿದರು.

ಕಾಂಗ್ರೆಸ್‌ ಕಾಲಿಟ್ಟರೆ ಬರ!:

ಕಾಂಗ್ರೆಸ್‌ ರಾಜ್ಯಕ್ಕೆ ಕಾಲಿಟ್ಟರೆ ಬರಗಾಲ ಬರುತ್ತದೆ, ರೈತರಿಗೆ ಬೆಳೆ ನಷ್ಟವಾದರೂ ಪರಿಹಾರ ನೀಡಿಲ್ಲ. ಬಿಜೆಪಿ ಸರ್ಕಾರವಿದ್ದಾಗ ಪ್ರವಾಹದಿಂದ ಬೆಳೆ ನಷ್ಟವಾದಾಗ, 48 ಗಂಟೆಯಲ್ಲಿ ಅಂದಾಜು ತಿಳಿದು ಒಂದೇ ತಿಂಗಳಲ್ಲಿ ರೈತರ ಬ್ಯಾಂಕ್‌ ಖಾತೆಗೆ ಎರಡು ಪಟ್ಟು ಅಧಿಕ ಪರಿಹಾರ ನೀಡಲಾಗಿತ್ತು. ಕಾಂಗ್ರೆಸ್‌ ಸರ್ಕಾರವನ್ನು ಈ ಬಗ್ಗೆ ಕೇಳಿದರೆ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಾರೆ ಎಂದರು.

ಕಾಂಗ್ರೆಸ್‌ ಸರ್ಕಾರದಿಂದ ಅಭಿವೃದ್ಧಿ ನಡೆಯುತ್ತಿಲ್ಲ: ಡಾ.ಕೆ.ಸುಧಾಕರ್‌

ದಲಿತರ ಹಣ ಗ್ಯಾರೆಂಟಿಗಳಿಗೆ ಬಳಕೆ:

ದಲಿತರಿಗೆ ಮೀಸಲಿಟ್ಟ ಹಣವನ್ನು ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಿಗೆ ಬಳಸಿದೆ. ಆದರೆ ಪ್ರಧಾನಿ ಮೋದಿ ಮಹಿಳೆಯರು, ಯುವಜನರು, ಮಕ್ಕಳಿಗೆ ಉತ್ತಮ ಯೋಜನೆ ನೀಡಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಗ್ಯಾರಂಟಿಗೆ ಮತ ನೀಡಬೇಕೆಂದು ಜನರು ತೀರ್ಮಾನಿಸಿದ್ದಾರೆ. ಪ್ರಧಾನಿ ಮೋದಿಯವರು ಹೇಳುವಂತೆ ರೈತರು, ಮಹಿಳೆಯರು, ಯುವಜನರು ಹಾಗೂ ಕಾರ್ಮಿಕರು ಎಂಬ ನಾಲ್ಕು ವರ್ಗಗಳಿಗೆ ನಾವು ಹೆಚ್ಚು ಗಮನ ನೀಡುತ್ತೇವೆ ಎಂದರು.

ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಶಾಸಕ ಧೀರಜ್ ಮುನಿರಾಜು, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಜಿ.ಕೆ.ಕೃಷ್ಣಾ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಜೆಡಿಎಸ್‌ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಸೇರಿ ಬಿಜೆಪಿ-ಜೆಡಿಎಸ್ ಪಕ್ಷಗಳ ವಿವಿಧ ಘಟಕಗಳ ಮುಖ್ಯಸ್ಥರು, ಪದಾಧಿಕಾರಿಗಳು ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?