ಭ್ರಷ್ಟಾಚಾರ ಆರೋಪ: ದಿಢೀರ್ ರಾಜೀನಾಮೆ ಕೊಟ್ಟ ಸಚಿವ...!

By Suvarna News  |  First Published Nov 19, 2020, 4:47 PM IST

ತಮ್ಮ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದರಿಂದ ನೂತನ ಸಚಿವರೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


ಪಾಟ್ನಾ, (ನ.19): ಭ್ರಷ್ಟಾಚಾರ ಆರೋಪ ಸಚಿವರೊಬ್ಬರ ಹುದ್ದಯನ್ನೇ ನುಂಗಿದೆ. ನಿತೀಶ್ ಕುಮಾರ್ ನೇತೃತ್ವದ ನೂತನ ಸರ್ಕಾರ ಸಂಪುಟ ರಚನೆಯಾಗಿ ಇನ್ನು ವಾರ ಕಳೆದಿಲ್ಲ. ಅದಾಗಲೇ ಶಿಕ್ಷಣ ಸಚಿವ ಸ್ಥಾನಕ್ಕೆ ಮೇವಾಲಾಲ್ ಚೌಧರಿ ರಾಜೀನಾಮೆ ನೀಡಿದ್ದಾರೆ.

ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದರಿಂದ ಮೇವಾಲಾಲ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

Tap to resize

Latest Videos

ಮುಸ್ಲಿಂ ಸಚಿವರಿಲ್ಲದೆ ನಿತೀಶ್ ಸಂಪುಟ, ಅಸಲಿಗೆ ಒಬ್ಬ ಶಾಸಕನೂ ಇಲ್ಲ! 

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮದೇ ಸಂಪುಟ ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಈ ಸಂಬಂಧ ಯಾವ ಕ್ರಮ ಕೈಗೊಳ್ಳುತ್ತಾರೆ ಎಂದು ರಾಷ್ಟ್ರೀಯ ಜನತಾ ದಳ(ಆರ್ ಜೆಡಿ) ಪ್ರಶ್ನಿಸಿತ್ತು.

ಇದರ ಬೆನ್ನಲ್ಲೇ ನಿತೀಶ್ ಕುಮಾರ್ ಅವರು ನವೆಂಬರ್ 16ರಂದು ಶಿಕ್ಷಣ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಮೇವಾಲಾಲ್ ವಿರುದ್ಧ ಇರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ಚರ್ಚಿಸಿದ್ದರು.

ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನಾಗಿ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದು ಸೋಮವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇವರ ಜೊತೆ ಬಿಜೆಪಿಯ ಮೇವಾ ಲಾಲ್ ಚೌಧರಿ ಸಹ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

click me!