
ಬೆಂಗಳೂರು, (ಜುಲೈ.02): `ಮುಂದಿನ ಸಿಎಂ' ಹೇಳಿಕೆಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್‌ನಲ್ಲಿ ಬಣಗಳು ಹುಟ್ಟಿಕೊಂಡಿದ್ದು, ಭಿನ್ನಮತ ಸ್ಪೋಟಗೊಂಡಿದೆ.
ಈ ಮುಂದಿನ ಸಿಎಂ ವಿವಾದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತೆರೆ ಎಳೆಯಲು ಮುಂದಾಗಿದ್ದಾರೆ. ಇದರ ಮಧ್ಯೆ ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿರುವ ಘಟನೆ ನಡೆದಿದೆ.
ಮೈಸೂರಿಗೆ ಎಂಟ್ರಿ ಕೊಟ್ಟ ಸಿದ್ದರಾಮಯ್ಯಗೆ ಭರ್ಜರಿ ಸ್ವಾಗತ: ಮೊಳಗದ ಮುಂದಿನ ಸಿಎಂ ಘೋಷಣೆ
ಹೌದು...ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನಲ್ಲಿ ಶಾಸಕ ರಾಮಪ್ಪ ಪುತ್ರಿ ವಿವಾಹ ಸಮಾರಂಭದಲ್ಲಿ ಸಿದ್ದರಾಮಯ್ಯ ಭಾಗಿಯಗಿದ್ರು. ಈ ವೇಳೆ ಮದುವೆ ಕಲ್ಯಾಣ ಮಂಟಪದ ಬಳಿ ಕಾರ್ಯಕರ್ತರು, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿ, ಜೈಕಾರ ಹಾಕಿದ್ದಾರೆ.
ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ಸಾಮಾಜಿಕ ಅಂತರ ಮರೆತು ಜನರು ಗುಂಪು ಸೇರಿ ಕೋವಿಡ್ ನಿಯಮಾವಳಿಯನ್ನು ಗಾಳಿಗೆ ತೂರಿದರು.
ಮದುವೆಗೆ ಕೇವಲ 40 ಜನರಿಗೆ ಮಾತ್ರ ಅವಕಾಶ ಇದೆ. ಆದ್ರೆ, ಜನಪ್ರತಿನಿಧಿಗಳು ಕೋವಿಡ್ ನಿಯಮಾವಳಿಯನ್ನು ಗಾಳಿಗೆ ತೂರಿದ್ದು, ಶಾಸಕರಿಗೆ ಒಂದು ನ್ಯಾಯ, ಜನಸಾಮಾನ್ಯರಿಗೆ ಒಂದು ನ್ಯಾಯನಾ ಎಂದು ಜನಸಾಮಾನ್ಯರು ಪ್ರಶ್ನಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.