ರಾಜ್ಯದಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಜವಾಬ್ದಾರಿ ನಿಖಿಲ್‌ ಕುಮಾರಸ್ವಾಮಿ ಹೆಗಲಿಗೆ?

Published : Jun 09, 2024, 09:57 AM IST
ರಾಜ್ಯದಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಜವಾಬ್ದಾರಿ ನಿಖಿಲ್‌ ಕುಮಾರಸ್ವಾಮಿ ಹೆಗಲಿಗೆ?

ಸಾರಾಂಶ

ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಸಚಿವರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯನ್ನು ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವಹಿಸಿಕೊಳ್ಳುವ ಸಾಧ್ಯತೆ ಇದೆ. 

ಬೆಂಗಳೂರು (ಜೂ.09): ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಸಚಿವರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯನ್ನು ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವಹಿಸಿಕೊಳ್ಳುವ ಸಾಧ್ಯತೆ ಇದೆ. ಇದಕ್ಕೆ ಪುಷ್ಟಿ ನೀಡುವಂತೆ ಅವರು ಇನ್ನು ಮುಂದೆ ಸಿನಿಮಾಗಳಲ್ಲಿ ನಟಿಸುವುದಿಲ್ಲ ಎಂಬ ಹೇಳಿಕೆ ನೀಡುವ ಮೂಲಕ ರಾಜ್ಯ ಜೆಡಿಎಸ್‌ ಮುನ್ನಡೆಸುವ ಸೂಚನೆ ನೀಡಿದ್ದಾರೆ. 

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ನಿಖಿಲ್‌, ಜೆಡಿಎಸ್‌ನಲ್ಲಿ ಹಲವು ಯುವ ನಾಯಕರು ಇದ್ದಾರೆ. ಶರಣಗೌಡ ಕಂದಕೂರು, ಸಮೃದ್ಧಿ ಮಂಜುನಾಥ್‌, ಹರೀಶ್‌ಗೌಡ ಸೇರಿದಂತೆ ಹಲವು ಯುವಕರು ಇದ್ದು, ಎಲ್ಲರ ಜತೆ ಸೇರಿ ಪಕ್ಷವು ಮುಂದೆ ಸಾಗಬೇಕಿದೆ. ಸಿನಿಮಾರಂಗ ನನ್ನನ್ನು ಗುರುತಿಸಿ ಬೆಳೆಸಿದೆ. ಜನರೂ ಸಹ ನಟನಾಗಿ ನನ್ನ ಮೇಲೆ ಪ್ರೀತಿ ತೋರಿಸಿದ್ದಾರೆ. ಈಗ ಸಿನಿಮಾಗಳಿಂದ ಕೊಂಚ ಬಿಡುವು ತೆಗೆದುಕೊಳ್ಳುವ ಸಮಯ ಬಂದಿದೆ ಎಂದು ತಿಳಿಸಿದರು. ಲೋಕಸಭಾ ಚುನಾವಣೆ ವೇಳೆ ಸ್ಥಾನಗಳ ಬಗ್ಗೆ ಬಿಜೆಪಿಯೊಂದಿಗೆ ಯಾವುದೇ ಗೊಂದಲ ಮಾಡಿಕೊಳ್ಳಲಿಲ್ಲ. 

ಮೂರು ಸ್ಥಾನ ಕೇಳಿದ್ದೆವು, ಅವರು ಸಹ ಮೂರು ಸ್ಥಾನ ಕೊಟ್ಟಿದ್ದರು. ಈಗಲೂ ಅಷ್ಟೇ ಮೂರು ಉಪ ಚುನಾವಣೆಗಳು ನಡೆಯಬೇಕಿದೆ. ಜೆಡಿಎಸ್‌ಗೆ ಎಷ್ಟು ಸ್ಥಾನ ಬಿಟ್ಟುಕೊಡಲಾಗುತ್ತದೆ ಎಂಬುದರ ಬಗ್ಗೆ ಎರಡು ಪಕ್ಷಗಳ ಮುಖಂಡರು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಉಪ ಚುನಾವಣೆ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ. ಚನ್ನಪಟ್ಟಣ ಸೇರಿದಂತೆ ಯಾವುದೇ ಕ್ಷೇತ್ರದ ಬಗ್ಗೆಯೂ ಉಭಯ ಪಕ್ಷಗಳ ವರಿಷ್ಠರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದರು. ಚುನಾವಣೆಯಲ್ಲಿ 28 ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. 

ಲೋಕಸಭೆ ಚುನಾವಣೆ ಹಿನ್ನಡೆಗೆ ಯಾರನ್ನೂ ಹೊಣೆ ಮಾಡಲು ಸಾಧ್ಯವಿಲ್ಲ: ಸಚಿವ ಎಂ.ಬಿ.ಪಾಟೀಲ್‌

ಒಂದು ಹಂತಕ್ಕೆ ನಿರೀಕ್ಷೆ ಫಲಕೊಟ್ಟಿದೆ. ಎರಡೂ ಪಕ್ಷಗಳ ನಾಯಕರು ಒಟ್ಟಾಗಿ ಹೋರಾಟ ಮಾಡಿದ್ದಾರೆ. ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಅವರಾಗಲಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆಗಲಿ ಯಾವುದೇ ಷರತ್ತು ಹಾಕದೆ ಬೆಂಬಲ ನೀಡಿದ್ದಾರೆ. ಮಂಡ್ಯದಲ್ಲಿ ಒಂದೂವರೆ ಲಕ್ಷ ಅಂತರದಲ್ಲಿ ಗೆಲ್ಲಬಹುದು ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ, ಜನ ಅದಕ್ಕಿಂತ ಮೀರಿದ ಬೆಂಬಲ ನೀಡಿದ್ದಾರೆ. ಕಾವೇರಿ, ಮೇಕೆದಾಟು ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳಿವೆ. ಅವುಗಳನ್ನು ಸರಿಪಡಿಸುವ ಕೆಲಸವನ್ನು ಮಾಡಲಿದ್ದಾರೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!