
ಬೆಂಗಳೂರು(ಅ.28): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ಮಾಡಿದ್ದಾರೆ. ಬಿಜೆಪಿ ಜೊತೆಗಿನ ಮೈತ್ರಿ ವಿಚಾರವಾಗಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಜತೆ ನಿಖಿಲ್ ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ.
ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳ ಕುರಿತು ನಿಖಿಲ್‌ಗೆ ಯೋಗಿ ಆದಿತ್ಯನಾಥ್ ಪಾಠ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ನಿಖಿಲ್ ಕುಮಾರಸ್ವಾಮಿ ರಾಮ ಲಕ್ಷ್ಮಣ ಸೀತೆಯ ವಿಗ್ರಹವನ್ನ ಗಿಫ್ಟ್ ಆಗಿ ನೀಡಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ರಾಜಕೀಯದಲ್ಲಿ ಫುಲ್ ಆಕ್ಟಿವ್ ಆಗಿದ್ದಾರೆ.
ನಿಖಿಲ್‌ಗೆ ಗಿಫ್ಟ್ ಬಂದಿರೋದು ಎಂದು ಅರಣ್ಯಾಧಿಕಾರಿಗಳಿಗೆ ಹುಲಿ ಉಗುರಿನ ಪೆಂಡೆಂಟ್ ಒಪ್ಪಿಸಿದ ಎಚ್‌ಡಿಕೆ!
ಗೋವಾ ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿದ ಎಚ್‌ಡಿಕೆ, ನಿಖಿಲ್!
ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿಯಾದ ತಿಂಗಳ ಬಳಿಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಎಚ್‌ಡಿಕೆ, ನಿಖಿಲ್ ವಜಾ ಎಂಬ ಪತ್ರ ನಕಲಿ: ಇಬ್ರಾಹಿಂ ದೂರು
ಎನ್‌ಡಿಎ ಜತೆ ಜೆಡಿಎಸ್ ಮೈತ್ರಿ ವಿಚಾರದಲ್ಲಿ ಪ್ರಮೋದ್ ಸಾವಂತ್ ಪ್ರಮುಖ ಪಾತ್ರವಹಿಸಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಭೇಟಿಯಾದರು. ಇತ್ತೀಚೆಗೆ ಪಣಜಿಗೆ ತೆರಳಿ ಪ್ರಮೋದ್ ಸಾವಂತ್ ಅವರೊಂದಿಗೆ ಮೈತ್ರಿ ವಿಚಾರವಾಗಿ ಮಾತುಕತೆ ನಡೆಸಿದರು. ಮೈತ್ರಿ ವಿಚಾರ ಸಂಬಂಧ ಪಕ್ಷದಲ್ಲಿ ಉಂಟಾಗಿರುವ ಬೆಳವಣಿಗೆ ಸಂಬಂಧ ಸಮಾಲೋಚನೆ ನಡೆಸಿದ್ದರು.
ಪ್ರಮೋದ್ ಸಾವಂತ್ ಅವರ ಭೇಟಿ ಕುರಿತು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಮುಂಬರುವ ಲೋಕಸಭಾ ಚುನಾವಣೆ ಮತ್ತು ಎನ್‌ಡಿಎ ಮೈತ್ರಿಕೂಟದ ಬಗ್ಗೆ ಆತ್ಮೀಯವಾಗಿ ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದರು. ಬಿಜೆಪಿ ವರಿಷ್ಠರ ಭೇಟಿಗೆ ಪ್ರಮೋದ್ ಸಾವಂತ್ ಮಧ್ಯಸ್ಥಿಕೆ ವಹಿಸಿರುವುದರಿಂದ ಅವರ ಮೂಲಕವೇ ಮೈತ್ರಿಯ ಸ್ಥಾನ ಹಂಚಿಕೆ ಸಂಬಂಧ ಚರ್ಚೆ ನಡೆಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.