ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಗೆ ನೆಲೆಯೇ ಇಲ್ಲ: ನಿಖಿಲ್‌ ಕುಮಾರಸ್ವಾಮಿ

Published : Nov 07, 2022, 11:18 PM IST
ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಗೆ ನೆಲೆಯೇ ಇಲ್ಲ: ನಿಖಿಲ್‌ ಕುಮಾರಸ್ವಾಮಿ

ಸಾರಾಂಶ

ಬಿಜೆಪಿಗೆ ಮಂಡ್ಯ ಜಿಲ್ಲೆಯಲ್ಲಿ ನೆಲೆಯೇ ಇಲ್ಲ. ಅವರು ಹೇಗೆ ಜೆಡಿಎಸ್‌ ಮುಕ್ತ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ಗೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಟಾಂಗ್‌ ನೀಡಿದರು. 

ಮಂಡ್ಯ (ನ.07): ಬಿಜೆಪಿಗೆ ಮಂಡ್ಯ ಜಿಲ್ಲೆಯಲ್ಲಿ ನೆಲೆಯೇ ಇಲ್ಲ. ಅವರು ಹೇಗೆ ಜೆಡಿಎಸ್‌ ಮುಕ್ತ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ಗೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಟಾಂಗ್‌ ನೀಡಿದರು. ತಾಲೂಕಿನ ದುದ್ದ ಹೋಬಳಿ ಪುರದಕೊಪ್ಪಲು ಗ್ರಾಮದಲ್ಲಿ ಶ್ರೀವೀರಾಂಜನೇಯ ಸ್ವಾಮಿ ವಿಗ್ರಹ ಪ್ರತಿಪ್ಠಾಪನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಮೊನ್ನೆ ಕಟೀಲ್‌ ಸಾಹೇಬ್ರು ಮಾತನಾಡುವ ವೇಳೆ ಬಹುತೇಕ ಎಲ್ಲ ಕುರ್ಚಿಗಳು ಖಾಲಿಯಾಗಿದ್ದವು. ಮಂಡ್ಯದಲ್ಲಿ ಜೆಡಿಎಸ್‌ ಮುಕ್ತ ಮಾಡುವುದಕ್ಕೆ ಬಿಜೆಪಿಗೆ ಮಂಡ್ಯದಲ್ಲಿ ನೆಲೆಯೇ ಇಲ್ಲ. ಅದರ ಬಗ್ಗೆ ಚರ್ಚೆ ಮಾಡುವುದಕ್ಕೆ ನಾನು ಇಷ್ಟಪಡೋಲ್ಲ ಎಂದು ಹೇಳಿದರು.

ಇದೇ ವೇಳೆ ಎಚ್‌.ಡಿ.ಕುಮಾರಸ್ವಾಮಿ ಕಣ್ಣೀರ ನಾಯಕ ಎಂಬ ಕಟೀಲ್‌ ಹೇಳಿಕೆಗೆ ಕುಮಾರಣ್ಣ ಮಂಡ್ಯಕ್ಕೆ ಬಜೆಟ್‌ನಲ್ಲಿ ಎಂಟೂ ಮುಕ್ಕಾಲು ಸಾವಿರ ಕೋಟಿ ರು. ಮೀಸಲಿಟ್ಟಿದ್ದರು. ಆಗ ಬಿಜೆಪಿಯವರು ಲಘುವಾಗಿ ಮಾತನಾಡಿದರು. ಮಂಡ್ಯ, ರಾಮನಗರ, ಹಾಸನಕ್ಕೆ ಸೀಮಿತವಾದ ಬಜೆಟ್‌ ಎಂದು ಟೀಕಿಸಿದ್ದರು. ಬಳಿಕ ಬಿಜೆಪಿ ಸರ್ಕಾರ ಬಂದ ಮೇಲೆ ಆ ಅನುದಾನ ಏನಾಯಿತು ಅಂತ ಪ್ರಶ್ನೆ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.ರಾಜ್ಯದ ರೈತರು, ಜನಸಾಮಾನ್ಯರಿಗೆ ಪೂರಕವಾಗಿರುವ ಪಂಚರತ್ನ ಯೋಜನೆಗಳ ಬಗ್ಗೆ ತಿಳಿಸಲು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. 

ಪಂಚರತ್ನ ಯೋಜನೆಗಳ ಜಾಗೃತಿಗೆ ರಾಜ್ಯಾದ್ಯಂತ ಎಚ್ಡಿಕೆ ಪ್ರವಾಸ: ನಿಖಿಲ್‌ ಕುಮಾರಸ್ವಾಮಿ

ರೈತರು, ರಾಜ್ಯದ ಜನರ ದೃಷ್ಠಿಯಿಂದ ಜೆಡಿಎಸ್‌ ಪಕ್ಷ ಪಂಚರತ್ನ ಯೋಜನೆ ಜಾರಿಗೆ ತರಲಾಗಿದೆ ಎಂದರು. ರಾಜ್ಯದ ಜನರು 5 ವರ್ಷ ಜೆಡಿಎಸ್‌ ಪಕ್ಷ ಸರ್ಕಾರ ರಚನೆಗೆ ಆಶೀರ್ವಾದ ಮಾಡಿದರೆ ಈ ಯೋಜನೆಯಿಂದ ಅನುಕೂಲವಾಗಲಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಸರ್ಕಾರ ರಚಿಸುವುದು ಶತಸಿದ್ಧ. ಈ ಬಾರಿ ಸ್ವತಂತ್ರವಾದ ಜಾತ್ಯತೀತ ಜನತಾದಳ ಪಕ್ಷವನ್ನು ಅಧಿಕಾರಕ್ಕೆ ತರಲು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗಿದೆ. ಎಲ್ಲರೂ ಒಗ್ಗೂಡಿ 2023ಕ್ಕೆ ಜೆಡಿಎಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸೋಣ ಎಂದು ಕೋರಿದರು. 

ಹೆದ್ದಾರಿ ಕಾಮಗಾರಿಗೆ ಮತ್ತೆ 12 ಕೋಟಿ ಬಿಡುಗಡೆ: ಶಾಸಕ ತಮ್ಮಣ್ಣ

ಸದ್ಯಕ್ಕೆ ಸ್ಪರ್ಧೆ ವಿಚಾರದ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಸದ್ಯ ಪಕ್ಷ ಸಂಘಟನೆ ಮಾಡುವ ಜವಾಬ್ದಾರಿ ವಹಿಸಿದ್ದಾರೆ. ಅದನ್ನು ಮಾಡುತ್ತಿದ್ದೇನೆ. ರಾಜ್ಯದ ಎಲ್ಲೆಡೆ ಪಕ್ಷ ಸಂಘಟಿಸಲು ಪ್ರವಾಸ ಮಾಡುತ್ತೇನೆ. ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಮುಂದಿನ ಸವಾಲು ಎಂದರು. ಮುದಗಂದೂರು ಗ್ರಾಪಂ ಅಧ್ಯಕ್ಷ ಶಂಕರೇಗೌಡ, ಮನ್‌ಮುಲ್‌ ಅಧ್ಯಕ್ಷ ಬಿ.ಆರ್‌.ರಾಮಚಂದ್ರ, ಶಾಸಕ ಸಿ.ಎಸ್‌.ಪುಟ್ಟರಾಜು ಪುತ್ರ ಸಿ.ಪಿ.ಶಿವರಾಜ್‌, ಜಿಪಂ ಮಾಜಿ ಸದಸ್ಯರಾದ ಸಿ.ಅಶೋಕ್‌, ಎಚ್‌.ಟಿ ಮಂಜು, ಗುತ್ತಿಗೆದಾರ ಬಾಲರಾಜು ಇತರರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್