ಪಕ್ಷ ಸಂಘಟನೆ ದೃಷ್ಟಿಯಿಂದ ರಾಜ್ಯದಲ್ಲಿ ಪ್ರವಾಸ ಮಾಡುತ್ತಿರುವುದಾಗಿ ಹೇಳಿದರು. ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದೇವೆ. ಉಪಚುನಾವಣೆ ಹಿನ್ನೆಲೆ ಎರಡೂ ಪಕ್ಷಗಳ ಕಾರ್ಯಕರ್ತರು ಹೊಂದಾಣಿಕೆ ಮೂಲಕ ಕೈಜೋಡಿಸಬೇಕು ಎನ್ನುವುದು ಉದ್ದೇಶ: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
ಹುಬ್ಬಳ್ಳಿ(ಅ.20): ನಾನು ಅಧಿಕಾರದ ಹಪಾಹಪಿಗಾಗಿ ಕೆಲಸ ಮಾಡುತ್ತಿಲ್ಲ. ಪಕ್ಷ ಕೊಡುವ ಜವಾಬ್ದಾರಿ ನಿರ್ವಹಿಸುತ್ತಿ ದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ನಗರದಲ್ಲಿ ಚನ್ನಪಟ್ಟಣ ಟಿಕೆಟ್ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷ ಸಂಘಟನೆ ದೃಷ್ಟಿಯಿಂದ ರಾಜ್ಯದಲ್ಲಿ ಪ್ರವಾಸ ಮಾಡುತ್ತಿರುವುದಾಗಿ ಹೇಳಿದರು. ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದೇವೆ. ಉಪಚುನಾವಣೆ ಹಿನ್ನೆಲೆ ಎರಡೂ ಪಕ್ಷಗಳ ಕಾರ್ಯಕರ್ತರು ಹೊಂದಾಣಿಕೆ ಮೂಲಕ ಕೈಜೋಡಿಸಬೇಕು ಎನ್ನುವುದು ಉದ್ದೇಶ. ಈಗಾಗಲೇ ಏಳು ಜಿಲ್ಲೆಗಳ ಪ್ರವಾಸ ಮಾಡಿದ್ದೇವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಒಳ್ಳೆಯ ವಾತಾವರಣ ಸೃಷ್ಟಿಯಾಗಿತ್ತು. ಈ ಬಾರಿಯೂ ಕೂಡ ಉಪಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಉದ್ದೇಶವಿದೆ ಎಂದರು.
ಚನ್ನಪಟ್ಟಣ ಟಿಕೆಟ್ ಜೆಡಿಎಸ್‌ಗೇ: ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ನಿಖಿಲ್ ಕುಮಾರಸ್ವಾಮಿ!
ಸಿ.ಪಿ. ಯೋಗೀಶ್ವರಗೆ ಚನ್ನಪಟ್ಟಣ ಟಿಕೆಟ್ ನೀಡುವ ಕುರಿತಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದ ಹಿತದೃಷ್ಟಿಯಿಂದ ದೇವೇಗೌಡರು ನಿರ್ಧಾರ ತೆಗೆದುಕೊಂಡಿದ್ದರು. ಫಲಿತಾಂಶದ ಮೂಲಕ ರಾಜ್ಯದ ಜನ ನಮಗೆ ಸಹಿ ಹಾಕಿದ್ದಾರೆ. ಕೇಂದ್ರ ಬಿಜೆಪಿ ವರಿಷ್ಠರು ಈಗಾಗಲೇ ವರದಿ ಪಡೆದಿದ್ದಾರೆ. ಎರಡೂ ಪಕ್ಷದ ಮುಖಂಡರು ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ. ನಾನು ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೇನೆ ಎಂದರು.