ಜೆಡಿಎಸ್ ಪಕ್ಷ ರೂಪಿಸಿರುವ ಪಂಚರತ್ನ ಕಾರ್ಯಕ್ರಮ ಅನುಷ್ಠಾನಗೊಳಿಸುವುದೇ ನಮ್ಮ ಗುರಿಯಾಗಿದೆ. ಇದಕ್ಕಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರಂಭಿಸಿರುವ ಹೋರಾಟಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ರಾಮನಗರ (ಡಿ.03): ಜೆಡಿಎಸ್ ಪಕ್ಷ ರೂಪಿಸಿರುವ ಪಂಚರತ್ನ ಕಾರ್ಯಕ್ರಮ ಅನುಷ್ಠಾನಗೊಳಿಸುವುದೇ ನಮ್ಮ ಗುರಿಯಾಗಿದೆ. ಇದಕ್ಕಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರಂಭಿಸಿರುವ ಹೋರಾಟಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ನಗರದ ನಿರ್ಮಾಣಗೊಂಡಿರುವ ಗ್ಯಾಲಕ್ಸಿ ಸ್ಪೋಟ್ಸ್ ರ್ ಅಂಡ್ ಕಲ್ಚರಲ್ ಸೆಂಟರ್ ಅನ್ನು ಲೋಕಾರ್ಪಣೆ ಮಾಡಿದ ನಿಖಿಲ್ ಕುಮಾರಸ್ವಾಮಿ, 14 ದಿನಕ್ಕೆ ಕಾಲಿಟ್ಟಿರುವ ಪಂಚರತ್ನ ರಥಯಾತ್ರೆಗೆ ಎಲ್ಲೆಡೆ ಜನರಿಂದ ಅಭೂತಪೂರ್ವ ಸ್ವಾಗತ ದೊರಕುತ್ತಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಜನರಿಗೆ ಸೂಕ್ತ ಆರೋಗ್ಯ ಸೇವೆ ಸಿಗುತ್ತಿಲ್ಲ.
ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಇಲ್ಲದಂತಾಗಿದೆ. ಇದೆಲ್ಲದಕ್ಕೂ ಪರಿಹಾರ ಕಲ್ಪಿಸಬೇಕೆಂಬುದು ಪಂಚರತ್ನ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಒಂದರಿಂದ ಪದವಿವರೆಗೆ ಉಚಿತ ಶಿಕ್ಷಣ, ಉಚಿತ ಆರೋಗ್ಯ ಸೇವೆ, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 30 ಹಾಸಿಗೆಯ ಹೈಟೆಕ್ ಆಸ್ಪತ್ರೆ ನಿರ್ಮಾಣ, ಪ್ರತಿಯೊಬ್ಬರಿಗೂ ವಸತಿ ಹಾಗೂ ಪ್ರತಿ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸಿ ಯುವಜನರಿಗೆ ಉದ್ಯೋಗ ನೀಡಿ ನಿರುದ್ಯೋಗ ಸಮಸ್ಯೆ ಹೋಗಲಾಡಿಸುವುದು ಪಂಚರತ್ನ ಕಾರ್ಯಕ್ರಮಗಳ ಭಾಗವಾಗಿದೆ ಎಂದು ಹೇಳಿದರು.
ಕೆಂಪೇಗೌಡರಿಗೆ 'ಪ್ರತಿಮೆ' ಗೌರವ ಸಮರ್ಪಣೆ: ಸಚಿವ ಅಶ್ವತ್ಥ್ ನಾರಾಯಣ
ಗ್ಯಾಲಕ್ಸಿ ಸ್ಪೋರ್ಟ್ಸ್ ಸೆಂಟರ್ ಲೋಕಾರ್ಪಣೆ: ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮುನ್ನ ಸೆಂಟರ್‌ನಲ್ಲಿರುವ ಬ್ಯಾಡ್ಮಿಂಟನ್ ಕೋರ್ಚ್, ಟೆಬಲ್ ಟೆನಿಸ್, ಈಜು ಕೊಳ, ಜಿಮ್ ಅನ್ನು ವೀಕ್ಷಣೆ ಮಾಡಿದ ನಿಖಿಲ್ ರವರು,ಜನರಿಗೆ ಒಳ ಕ್ರೀಡಾಂಗಣದ ಅವಶ್ಯಕತೆ ಇತ್ತು. ಆ ಕಾರ್ಯ ಸುಸಜ್ಜಿತ ಒಳ ಕ್ರೀಡಾಂಗಣ ನಿರ್ಮಾಣದ ಮೂಲಕ ಸಾಕಾರಗೊಂಡಿದೆ. ಈ ಸೆಂಟರ್‌ನಲ್ಲಿ ಜನರು ಒಂದು ಅಥವಾ ಹೆಚ್ಚಿನ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಅನುಕೂಲವಾಗಲಿದೆ. ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿರಲು ಕ್ರೀಡೆ ಸಹಕಾರಿಯಾಗಿದೆ. ಯುವಜನರು ಜಿಮ್‌ಗಳಲ್ಲಿ ಏಕಾಏಕಿ ವರ್ಕ್ಔಟ್ ಮಾಡಬಾರದು. ಆಗಾಗ ಆರೋಗ್ಯ ತಪಾಸಣೆಗೆ ಒಳಗಾದ ನಂತರ ಜಿಮ್‌ನಲ್ಲಿ ತರಬೇತುದಾರರ ಮಾರ್ಗದರ್ಶನದಲ್ಲಿ ವರ್ಕೌಟ್ ಮಾಡುವುದು ಸೂಕ್ತ ಎಂದು ಹೇಳಿದರು.
Ramanagara: ಮಾಗಡಿ ಪುರಸಭೆಯಲ್ಲಿ ಮುಖ್ಯಾಧಿಕಾರಿಯೇ ಇಲ್ಲ!
ಶಾಸಕ ಎ.ಮಂಜುನಾಥ್, ಜೆಡಿಎಸ್ ತಾಲೂಕು ಅಧ್ಯಕ್ಷ ರಾಜಶೇಖರ್, ಹರೀಸಂದ್ರ ಗ್ರಾಪಂ ಮಾಜಿ ಅಧ್ಯಕ್ಷೆ ಆಶಾ ಮಂಚೇಗೌಡ, ಗ್ಯಾಲಕ್ಸಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಪ್ರವೀಣ್ ಕುಮಾರ್, ಉಪಾಧ್ಯಕ್ಷ ಮುನಿರಾಜು, ಖಜಾಂಚಿ ಎಸ್.ಮಮತಾ, ಕಾರ್ಯದರ್ಶಿ ಆರ್.ನಿತೀನ್, ನಿರ್ದೇಶಕರಾದ ಗೀತಾ, ಉಮಾ ರವಿ, ಸುನಂದಮ್ಮ ಇತರರಿದ್ದರು.