BJP-JDS Alliance: ಮೈತ್ರಿ ಚರ್ಚೆ ನಾಲ್ಕು ಗೋಡೆ ನಡುವೆ ಇರಬೇಕು; ನಿಖಿಲ್‌ ಎಚ್ಚರಿಕೆ ಕೊಟ್ಟಿದ್ದು ಯಾರಿಗೆ?

Kannadaprabha News, Ravi Janekal |   | Kannada Prabha
Published : Feb 19, 2026, 08:31 AM IST
Nikhil Kumaraswamy

ಸಾರಾಂಶ

Nikhil Kumaraswamy: ಬಿಜೆಪಿ-ಜೆಡಿಎಸ್ ಮೈತ್ರಿ ಚರ್ಚೆಗಳು ನಾಲ್ಕು ಗೋಡೆಗಳ ನಡುವೆ ನಡೆಯಬೇಕು, ಹಾದಿಬೀದಿಯಲ್ಲಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಕೆಲವರು ಪ್ರಚಾರಕ್ಕಾಗಿ ಮೈತ್ರಿ ಮುರಿಯುವ ಹೇಳಿಕೆ ನೀಡುತ್ತಿದ್ದು, ಎರಡೂ ಪಕ್ಷಗಳ ನಾಯಕರು ಮೈತ್ರಿ ಧರ್ಮವನ್ನು ಗೌರವದಿಂದ ಪಾಲಿಸಬೇಕು ಎಂದರು.

 ಬೆಂಗಳೂರು (ಫೆ.19) ಬಿಜೆಪಿ-ಜೆಡಿಎಸ್‌ ಮೈತ್ರಿ ವಿಚಾರ ಚರ್ಚೆ ನಾಲ್ಕು ಗೋಡೆಗಳ ನಡುವೆ ಇರಬೇಕೇ ಹೊರತು ಹಾದಿ-ಬೀದಿಯಲ್ಲಿ ಚರ್ಚೆ ಆಗಬಾರದು ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತೀಕ್ಷ್ಣವಾಗಿ ಹೇಳಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ವಿಚಾರಗಳು ನಾಲ್ಕು ಗೋಡೆಗಳ ಒಳಗೆ ಚರ್ಚೆಯಾಗಬೇಕು. ಹಾದಿ ಬೀದಿಯಲ್ಲಿ ಚರ್ಚಿಸಿ ಇತ್ಯರ್ಥವಾಗುವ ವಿಚಾರವಲ್ಲ. ಲೋಕಸಭಾ ಚುನಾವಣೆಯಿಂದಲೂ ಎರಡೂ ಪಕ್ಷಗಳ ಮೈತ್ರಿ ಇದೆ. ಅಂದಿನಿಂದಲೂ ನಮ್ಮನ್ನು ಗೌರವದಿಂದ ನೋಡಿಕೊಂಡಿದ್ದಾರೆ ಎಂದರು.

ಕೆಲವರು ಪ್ರಚಾರಕ್ಕಾಗಿ ಮಾತು:

ಕೆಲ ಬಿಜೆಪಿಗರಿಂದ ಮೈತ್ರಿ ಮುರಿಯುವ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ, ನಾವು ಮೈತ್ರಿ ಧರ್ಮವನ್ನು ಅತ್ಯಂತ ಗೌರವದಿಂದ ಪಾಲಿಸುತ್ತಿದ್ದೇವೆ. ನಮ್ಮ ಮೈತ್ರಿಗೆ ಬಿಜೆಪಿ ಹೈಕಮಾಂಡ್ ನಾಯಕರ ಮಾರ್ಗದರ್ಶನ ಇದೆ. ಬಿಜೆಪಿ ಆಥವಾ ಜೆಡಿಎಸ್‌ನ ಯಾರೇ ಆಗಿರಲಿ ಹೊರಗೆ ಮಾತನಾಡಬಾರದು. ಎರಡು ಜಿಲ್ಲೆಗಳಲ್ಲಿ ಮೈತ್ರಿ ವಿಚಾರದ ಸಮಸ್ಯೆ ಉದ್ಭವವಾಗಿದೆ. ಅಲ್ಲಿನ ಮೂರ್ನಾಲ್ಕು ಜನ ಪ್ರಚಾರಕ್ಕೆ ಮಾತನಾಡಿದ್ದಾರೆ ಎಂದರು.

ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಎನ್ನುವುದಕ್ಕಿಂತ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲಲಿದೆ. ನಾವು ಮೈತ್ರಿ ಧರ್ಮ ಪಾಲಿಸುತ್ತೇವೆ. ಲೋಕಸಭೆ ಗೆದ್ದಂತೆ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ದಾಖಲೆ ಸೃಷ್ಟಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾವೆಲ್ಲೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ

ಪ್ರಶ್ನೆಯೊಂದಕ್ಕೆ ಉತ್ತರಿಸಿದ ನಿಖಿಲ್‌, ನಾವೆಲ್ಲೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಕೆ.ಆರ್.ಪೇಟೆಯಲ್ಲಿ ನೀವು ಈಗಾಗಲೇ ಶಾಸಕರಾಗಿದ್ದೀರಿ. ಮತ್ತೆ ಆರಿಸಿ ಬರುವುದಕ್ಕೆ ಜನರ ಪ್ರೀತಿ ವಿಶ್ವಾಸ ಗಳಿಸಿ ಮಂಜಣ್ಣ ಅಂತ ಹೇಳಿದ್ದೆ. ಆದರೆ, ನನ್ನ ಹೇಳಿಕೆ ತಿರುಚಿದ್ದಾರೆ. ಅಭ್ಯರ್ಥಿಗಳ ಘೋಷಿಸಲು ನಾನು ಯಾರು? ನಾನು ಜನರ ವಿಶ್ವಾಸ ಉಳಿಸಿಕೊಂಡು ಹೋಗಿ ಅಂತ ಹೇಳುವುದರಲ್ಲಿ ತಪ್ಪೇನಿದೆ ಎಂದು ಕೇಳಿದರು.

ಜಿಪಂ ಮತ್ತು ತಾಪಂ ಚುನಾವಣೆಗೆ ಮೈತ್ರಿ ಇರುತ್ತಾ ಎಂಬ ಪ್ರಶ್ನೆಗೆ, ಈ ವಿಚಾರ ಇನ್ನೂ ಎರಡೂ ಪಕ್ಷಗಳ ಚೌಕಟ್ಟಿನಲ್ಲಿ ಚರ್ಚೆಗೆ ಬಂದಿಲ್ಲ. ಮೊದಲು ಈ ಚುನಾವಣೆಗಳು ನಡೆಯುತ್ತಾ ಇಲ್ವಾ ಅನ್ನೋದೇ ಗೊತ್ತಿಲ್ಲ. ಕಾರ್ಯಕರ್ತರ ಹಿತದೃಷ್ಟಿ ಮುಂದಿಟ್ಟುಕೊಂಡು ಮೈತ್ರಿಯಾಗಿ ಅಥವಾ ಪಕ್ಷವಾಗಿ ಹೋಗಬೇಕಾ ಎಂಬುದು ಮುಂದಿನ ದಿನಗಳಲ್ಲಿ ತೀರ್ಮಾನವಾಗಲಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Karnataka CM change politics: ಡಿಕೆಶಿಯನ್ನು ಸಿಎಂ ಮಾಡ್ತಾರೋ ಇಲ್ವೋ ಹೈಕಮಾಂಡ್‌ ಹೇಳ್ಲಿ, ಇಲ್ಲದಿದ್ರೆ...
Tejasvi Surya metro protest case: ಅನುಮತಿ ಇಲ್ಲದೆ ಪ್ರತಿಭಟನೆ; ಸಂಸದ ತೇಜಸ್ವಿ ಸೂರ್ಯ ಸೇರಿ 9 ಮಂದಿಗೆ ನೋಟಿಸ್‌!