ಯೋಗಿ ವಿರುದ್ಧ ಪುತ್ರಿ ನಿಶಾ ಸಮರ: ಎಲ್ಲವನ್ನೂ ಬಯಲು ಮಾಡುವೆ ಎಂದ ಸೈನಿಕನ ಮಗಳು!

Published : Oct 22, 2024, 08:35 AM IST
ಯೋಗಿ ವಿರುದ್ಧ ಪುತ್ರಿ ನಿಶಾ ಸಮರ: ಎಲ್ಲವನ್ನೂ ಬಯಲು ಮಾಡುವೆ ಎಂದ ಸೈನಿಕನ ಮಗಳು!

ಸಾರಾಂಶ

ನಾನು ರಾಜಕೀಯಕ್ಕೆ ಬರದಂತೆ ತಡೆದರು. ಸಮಾಜ ಸೇವೆಗೆ ಇಳಿಯದಂತೆ ತಡೆದರು. ವಿದ್ಯಾಭ್ಯಾಸ ಮಾಡದಂತೆ ತಡೆದರು. ಯಾವ ಕ್ಷೇತ್ರದಲ್ಲೂ ಮುಂದೆ ಬರಲು ಬಿಡುತ್ತಿಲ್ಲ. ಕೊನೆಗೆ, ಜೀವನದಲ್ಲಿ ನೆಮ್ಮದಿಯಾಗಿರುವುದಕ್ಕೂ ಬಿಡುತ್ತಿಲ್ಲ. ನನ್ನ ಜೀವನದ ಸತ್ಯವನ್ನು ಹೊರತರುತ್ತೇನೆ ಎಂದು ಹೇಳಿದ ನಿಶಾ ಯೋಗೇಶ್ವ‌ರ್ 

ಬೆಂಗಳೂರು(ಅ.22): ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಅವರ ಪುತ್ರಿ ನಿಶಾ ಯೋಗೇಶ್ವ‌ರ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಎಲ್ಲವನ್ನೂ ಬೆಳಕಿಗೆ ತರುತ್ತೇನೆ ಎಂದು ಗುಡುಗಿದ್ದಾರೆ. ಸೋಮವಾರ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಅವರು ಯೋಗೇಶ್ವರ್ ಹೆಸರು ಹೇಳದೆಯೇ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನಾನು ರಾಜಕೀಯಕ್ಕೆ ಬರದಂತೆ ತಡೆದರು. ಸಮಾಜ ಸೇವೆಗೆ ಇಳಿಯದಂತೆ ತಡೆದರು. ವಿದ್ಯಾಭ್ಯಾಸ ಮಾಡದಂತೆ ತಡೆದರು. ಯಾವ ಕ್ಷೇತ್ರದಲ್ಲೂ ಮುಂದೆ ಬರಲು ಬಿಡುತ್ತಿಲ್ಲ. ಕೊನೆಗೆ, ಜೀವನದಲ್ಲಿ ನೆಮ್ಮದಿಯಾಗಿರುವುದಕ್ಕೂ ಬಿಡುತ್ತಿಲ್ಲ. ನನ್ನ ಜೀವನದ ಸತ್ಯವನ್ನು ಹೊರತರುತ್ತೇನೆ' ಎಂದು ಹೇಳಿದ್ದಾರೆ. 

'ನನ್ನಿಂದ ಏನು ಸಮಸ್ಯೆ, ಏಕೆ ದ್ವೇಷ ತಿಳಿಯುತ್ತಿಲ್ಲ. ನಿಜವಾದ ಕಥೆ ಬೇರೆಯೇ ಇದೆ, ಸತ್ಯ ಬೇರೆಯೇ ಇದೆ. ಆ ಸತ್ಯವನ್ನು ಬೇಗ ಹೊರಗಡೆ ತರುತ್ತೇನೆ' ಎಂದರು. 

ವಿವಾದದ ಹಿನ್ನೆಲೆ: 

ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಯೋಗೇಶ್ವರ್ ಹಾಗೂ ಪುತ್ರಿ ನಿಶಾ ಮಧ್ಯೆ ಕಳೆದ 4-5 ತಿಂಗಳಿಂದ ವೈಮನಸ್ಸು  ಮೂಡಿದೆ ಎನ್ನಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ನಿಶಾ ಅವರು ತಂದೆ ಪರ ಪ್ರಚಾರ ನಡೆಸಿದರು. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಸೇರಲು ಪ್ರಯತ್ನ ನಡೆಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ