ಮತ್ತೆ ಬಿಜೆಪಿ ಜೊತೆ ಕೈಜೋಡಿಸುತ್ತಾರೆ ನಿತೀಶ್ ಕುಮಾರ್, ತಲ್ಲಣ ಸೃಷ್ಟಿಸಿದ ಪ್ರಶಾಂತ್ ಕಿಶೋರ್!

By Suvarna News  |  First Published Oct 19, 2022, 8:43 PM IST

ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವ ಜೆಡಿಯು ಪಕ್ಷ ಬಿಜೆಪಿ ಜೊತೆಗಿನ ಮೈತ್ರಿ ಮುರಿದು ಆರ್‌ಜೆಡಿ ಜೊತೆ ಸರ್ಕಾರ ರಚಿಸಿ ದಿನಗಳೇ ಉರುಳಿಸಿದೆ. ಇದೀಗ ಮತ್ತೊಂದು ರಾಜಕೀಯ ಪಲ್ಲಟಕ್ಕೆ ಬಿಹಾರ್ ಸಜ್ಜಾಗಿದೆ ಅನ್ನೋ ಮಾತನ್ನು ಚುನಾವಣಾ ತಂತ್ರಗಾರ ಪ್ರಶಾಂಕ್ ಕಿಶೋರ್ ಸೂಚಿಸಿದ್ದಾರೆ. ನಿತೀಶ್ ಕುಮಾರ್ ಮತ್ತೆ ಬಿಜೆಪಿ ಜೊತೆ ಸೇರಿಕೊಳ್ಳುತ್ತಾರೆ ಅನ್ನೋ ಹೇಳಿಕೆಯಿಂದ ಬಿಹಾರ ರಾಜಕೀಯದಲ್ಲಿ ಹೊಸ ಬಿರುಗಾಳಿ ಬೀಸಿದೆ.


ಪಾಟ್ನಾ(ಅ.19): ಬಿಹಾರ ರಾಜಕೀಯದಲ್ಲಿ ಎದ್ದ ಬಿರುಗಾಳಿ ತಣ್ಣಗಾಗಿ ಇದೀಗ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಹಾಗೂ ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿ ಮೈತ್ರಿ ಸರ್ಕಾರ ಆಡಳಿತ ನಡೆಸುತ್ತಿದೆ. ಬಿಜೆಪಿಯಿಂದ ಮೈತ್ರಿ ಮುರಿದುಕೊಂಡ ನಿತೀಶ್ ಕುಮಾರ್ ಬಿಹಾರದಲ್ಲಿ ಹೊಸ ರಾಜಕೀಯ ಅಧ್ಯಾಯಕ್ಕೆ ಮುನ್ನುಡಿ ಬರೆದಿದ್ದಾರೆ. ಆದರೆ ಹೊಸ ಮೈತ್ರಿ ಸರ್ಕಾರ ಹೆಚ್ಚು ದಿನ ಉಳಿಯಲ್ಲ ಅನ್ನೋ ಸೂಚನೆಯನ್ನು ಚುನಾವಣಾ ತಂತ್ರಗಾರ ಪ್ರಶಾಂಕ್ ಕಿಶೋರ್ ನೀಡಿದ್ದಾರೆ. ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೆ ಬಿಜೆಪಿ ಜೊತೆ ಕೈಜೋಡಿಸುತ್ತಾರೆ ಎಂದು ಪ್ರಶಾಂತ್ ಕಿಶೋರ್ ಭವಿಷ್ಯ ನುಡಿದಿದ್ದಾರೆ. ನಿತೀಶ್ ಕುಮಾರ್ ಬಿಜೆಪಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಹೀಗಾಗಿ ಯಾವುದೇ ಕ್ಷಣದಲ್ಲೂ ನಿತೀಶ್ ಕುಮಾರ್ ಬಿಜೆಪಿ ಜೊತೆ ಮತ್ತೆ ಮೈತ್ರಿಮಾಡಿಕೊಳ್ಳುವ ಸಾಧ್ಯತೆ ಹೆಚ್ಚು ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಬಿಹಾರದಲ್ಲಿ ಪಾದಯಾತ್ರೆ ಕೈಗೊಂಡಿರುವ ಪ್ರಶಾಂತ್ ಕಿಶೋರ್, ನಿತೀಶ್ ಕುಮಾರ್ ಹಾಗೂ ಮೈತ್ರಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಬಿಹಾರದಲ್ಲಿ ಈ ಸರ್ಕಾರ ಹಾಗೂ ಪಕ್ಷಗಳಿಂದ ಅಭಿವೃದ್ಧಿ ಸಾಧ್ಯವಿಲ್ಲ. ಇವರೆಲ್ಲಾ ತಮ್ಮ ರಾಜಕೀಯ ಉದ್ದೇಶಕಕ್ಕಾಗಿ ಮೈತ್ರಿ ಮಾಡಿಕೊಳ್ಳುತ್ತದೆ ಎಂದಿದ್ದಾರೆ. ನಿತೀಶ್ ಕುಮಾರ್ ಸಂದರ್ಭ ಬಂದರೆ ಮತ್ತೆ ಬಿಜೆಪಿ ಜೊತೆ ಸೇರುತ್ತಾರೆ. ಇದಕ್ಕಾಗಿ ಜೆಡಿಯು ಸಂಸದ ಹರಿವಂಶ್ ಮೂಲಕ ಬಿಜೆಪಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ. 

Tap to resize

Latest Videos

 

ಪ್ರಧಾನಿ ಮೋದಿ ಒರಿಜಿನಲ್ ಅಲ್ಲ ಡೂಪ್ಲಿಕೇಟ್, ಜೆಡಿಯು ಮುಖ್ಯಸ್ಥ ವಾಗ್ದಾಳಿ!

ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌ ಅವರು ರಾಜಕೀಯ ರಂಗಕ್ಕೆ ಪ್ರವೇಶ ಮಾಡುವ ಉದ್ದೇಶದೊಂದಿಗೆ ಬಿಹಾರದಲ್ಲಿ ಅ.2ರಿಂದ ಪಾದಯಾತ್ರೆ ಆರಂಭಿಸಿದ್ದಾರೆ. ಬಿಹಾರದ ಗಾಂಧಿ ಆಶ್ರಮದಿಂದ ಪಶ್ಚಿಮ ಚಂಪಾರನ್‌ವರೆಗೆ ಸುಮಾರು 3500 ಕಿ.ಮೀ. ದೂರದವರೆಗೆ ಈ ಪಾದಯಾತ್ರೆ ಸಂಚರಿಸಲಿದೆ.  ಇತ್ತ ನಿತೀಶ್‌ ಕುಮಾರ್‌ ನೇತೃತ್ವದ ಬಿಹಾರದ ನೂತನ ಸರ್ಕಾರದ ಬಗ್ಗೆ ಟ್ವೀಟರ್‌ನಲ್ಲಿ ಆನ್ಲೈನ್‌ ಸಮೀಕ್ಷೆ ಆರಂಭಿಸಿದ್ದಾರೆ. ತಮ್ಮ ಅಧಿಕೃತ ಟ್ವೀಟರ್‌ ಖಾತೆಯಲ್ಲೇ ಕಿಶೋರ್‌, ‘ಕಳೆದ 10 ವರ್ಷಗಳಲ್ಲಿ ನಿತೀಶ್‌ ಕುಮಾರ್‌ ಸರ್ಕಾರ ರಚಿಸಲು 6ನೇ ಬಾರಿ ಪ್ರಯೋಗ ಮಾಡಿದ್ದಾರೆ. ಈ ಸರ್ಕಾರದಿಂದ ಒಳ್ಳೆಯದಾಗುತ್ತಾ?’ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಹೌದು ಅಥವಾ ಇಲ್ಲ ಎಂಬ 2 ಆಯ್ಕೆ ನೀಡಿದ್ದು, ಜನರು ಈ ಸಮೀಕ್ಷೆಯಲ್ಲಿ ಭಾಗಿಯಾಗಿ ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ಆಹ್ವಾನಿಸಿದ್ದಾರೆ. ಈ ಹಿಂದೆ 2015ರಲ್ಲಿ ಬಿಹಾರದಲ್ಲಿ ‘ಮಹಾಘಟ್‌ಬಂಧನ’ ಸರ್ಕಾರ ನಿರ್ಮಿಸುವಲ್ಲಿ ಪ್ರಶಾಂತ್‌ ಕಿಶೋರ್‌ ಮಹತ್ವದ ಪಾತ್ರ ವಹಿಸಿದ್ದರು.

9ನೇ ಕ್ಲಾಸ್ ಫೇಲ್ ಆದ್ರೆ ಗುಮಾಸ್ತನಾಗಲು ಸಾಧ್ಯವಿಲ್ಲ, ಆದರೆ ತೇಜಸ್ವಿ ಬಿಹಾರದ ಉಪಮುಖ್ಯಮಂತ್ರಿ!

ಕಾಂಗ್ರೆಸ್‌ ಪಕ್ಷ ಸೇರುವ ಆಹ್ವಾನವನ್ನು ಇತ್ತೀಚೆಗಷ್ಟೇ ತಿರಸ್ಕರಿಸಿದ್ದ ಪ್ರಶಾಂತ್‌ ಕಿಶೋರ್‌ ಬಿಹಾರದಲ್ಲಿ ಸಕ್ರಿಯ ರಾಜಕಾರಣಕ್ಕೆ ಧುಮುಕಲಿದ್ದಾರೆ ಎಂದು ಹೇಳಲಾಗಿತ್ತು. ಈ ಬಗ್ಗೆ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ದೇಶದ ರಾಜಕಾರಣದಲ್ಲಿ ಹಿಂಬದಿಯ ಆಟಗಾರನಾಗಿ ಸಾಕಷ್ಟುಕೆಲಸ ಮಾಡಿದ್ದಾಗಿದೆ. ಈಗ ಸಮಾನಮನಸ್ಕರ ಜೊತೆ ಸೇರಿ ನನ್ನ ತವರು ರಾಜ್ಯ ಬಿಹಾರವನ್ನು ಅಭಿವೃದ್ಧಿಗೊಳಿಸಲು ಜನ ಸುರಾಜ್‌ ವೇದಿಕೆ ಸ್ಥಾಪಿಸುತ್ತಿದ್ದೇನೆ. ಸುಮಾರು 18 ಸಾವಿರ ಜನ ನನ್ನೊಂದಿಗಿದ್ದಾರೆ. ಅ.2ರಿಂದ ರಾಜ್ಯದಲ್ಲಿ 3000 ಕಿ.ಮೀ. ಪಾದಯಾತ್ರೆ ನಡೆಸಿ, ಸಮಾನಮನಸ್ಕರೊಂದಿಗೆ ಸಂವಾದ ನಡೆಸುವ ಮೂಲಕ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದು ಹೇಳಿದರು. ಎರಡು ವರ್ಷಗಳ ಹಿಂದೆ ಜೆಡಿಯುದಿಂದ ಉಚ್ಚಾಟನೆಗೊಂಡಾಗ ಪ್ರಶಾಂತ್‌ ಕಿಶೋರ್‌ ಇಂತಹುದೇ ‘ಬಾತ್‌ ಬಿಹಾರ್‌ ಕಿ’ ಎಂಬ ಆಂದೋಲನ ಘೋಷಿಸಿದ್ದರು. ಆದರೆ ಕೋವಿಡ್‌ನಿಂದಾಗಿ ಅದು ಸ್ಥಗಿತಗೊಂಡಿತ್ತು.
 

click me!