ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಪರಿಷತ್ತಿನಲ್ಲಿ ಅಂಗೀಕಾರ ದೊರೆಯಿತು. ವಿಧೇಯಕ ಮಂಡಿಸಿ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯಿಂದ ಅನೇಕರು ಸಚಿವರಾಗಿದ್ದಾರೆ.
ವಿಧಾನಪರಿಷತ್ (ಮಾ.22): ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಪರಿಷತ್ತಿನಲ್ಲಿ ಅಂಗೀಕಾರ ದೊರೆಯಿತು. ವಿಧೇಯಕ ಮಂಡಿಸಿ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯಿಂದ ಅನೇಕರು ಸಚಿವರಾಗಿದ್ದಾರೆ. ಆದರೆ, ಯಾರೊಬ್ಬರು ಕೃಷಿ ಸಚಿವರಾಗಿಲ್ಲ. ನನಗೆ ಅವಕಾಶ ಸಿಕ್ಕಿದೆ. ಕೃಷಿ ಕ್ಷೇತ್ರಕ್ಕೆ ಕೊಡುಗೆ ನೀಡಬೇಕು ಎನ್ನುವ ದೃಷ್ಟಿಯಿಂದ ಮಂಡ್ಯದ ಕೃಷಿ ಮಹಾವಿದ್ಯಾಲಯದಲ್ಲಿ (ವಿ.ಸಿ.ಫಾರ್ಮ್) ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಸ್ಥಾಪನೆಗಾಗಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ವಿಧೇಯಕಕ್ಕೆ ತಿದ್ದುಪಡಿ ತರಲಾಗಿದೆ.
ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಸೇರಿ ಯಾವುದೇ ವಿಶ್ವವಿದ್ಯಾಲಯಗಳನ್ನು ಮುಚ್ಚುವುದಿಲ್ಲ. ವಿಲೀನ ಮಾಡುವುದಿಲ್ಲ ಎಂದು ತಿಳಿಸಿದರು. ಬೆಳೆಗಳ ಉತ್ಪಾದನೆಯ ಕ್ಷೇತ್ರದಲ್ಲಿ ಅಧ್ಯಯನ ನಡೆಸುವ ಪ್ರಮುಖ ಉದ್ದೇಶವಿದೆ. ತೋಟಗಾರಿಕೆಯಲ್ಲಿ ನಾವೀನ್ಯತೆ, ಆಧುನಿಕ ವ್ಯವಸ್ಥೆಗಳ ಅಳವಡಿಕೆ ಮೂಲಕ ಮುಂದಿನ ಪೀಳಿಗೆಗೆ ಕೃಷಿ, ತೋಟಗಾರಿಕೆ ಕ್ಷೇತ್ರದ ಬಗ್ಗೆ ಇನ್ನೂ ಹೆಚ್ಚಿನ ಒಲವು ಬೆಳೆಸಲು ಹೊಸ ವಿಶ್ವವಿದ್ಯಾಲಯ ಕೊಡುಗೆ ನೀಡುತ್ತದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.
ಒಬ್ಬರೇ ಇದ್ದರೆ ಹನಿಟ್ರ್ಯಾಪ್ ಆಗುತ್ತಾ ಸಚಿವ ಕೆ.ಎನ್ ರಾಜಣ್ಣ ತಪ್ಪು ಮಾಡಿದ್ದಾರೆ: ಡಿ.ಕೆ.ಶಿವಕುಮಾರ್
ಹಾಲಿ ವಿವಿ ಮುಚ್ಚುವುದು, ವಿಲೀನ ಬೇಡ: ರಾಜ್ಯದ ಬೇರೆ ಬೇರೆ ಕೃಷಿ ಮತ್ತು ತೋಟಗಾರಿಕೆ ವಿವಿಗಳಲ್ಲಿನ ವಿಭಾಗಗಳನ್ನು ಮಂಡ್ಯದ ಹೊಸ ವಿವಿಗೆ ಸೇರಿಸಿದರೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂದು ವಿಪಕ್ಷಗಳ ಸದಸ್ಯರು ಆತಂಕ ವ್ಯಕ್ತಪಡಿಸಿದರು. ಉತ್ತರ ಕರ್ನಾಟಕ ಭಾಗದವರಿಗೆ ಬಾಗಲಕೋಟೆ ತೋಟಗಾರಿಕೆ ವಿವಿ ಹತ್ತಿರವಾಗುತ್ತದೆ. ಮಂಡ್ಯ ದೂರವಾಗುತ್ತದೆ. ಹೀಗಾಗಿ, ನೂತನ ವಿವಿಯೊಂದಿಗೆ ಬೇರೆ ವಿವಿಗಳನ್ನು ವಿಲೀನ ಮಾಡಬಾರದು ಎಂದು ಬಿಜೆಪಿ ಸದಸ್ಯ ಎಸ್.ವಿ.ಸಂಕನೂರ ಸೇರಿ ಇನ್ನಿತರ ಸದಸ್ಯರು ಎಂದು ಸರ್ಕಾರಕ್ಕೆ ಮನವಿ ಮಾಡಿದರು.
5 ಕೋಟಿ ರು. ಮಂಜೂರು: ಪಟ್ಟಣದಲ್ಲಿನ ತಾಪಂ ಹಳೆಯ ಕಟ್ಟಡವನ್ನು ನೆಲಸಮಗೊಳಿಸಿ ಅದೇ ಸ್ಥಳದಲ್ಲಿ ಸುಸಜ್ಜಿತ ತಾಪಂ ನೂತನ ಕಟ್ಟಡ ನಿರ್ಮಿಸಲು ಸರ್ಕಾರದಿಂದ 5 ಕೋಟಿ ರು. ಮಂಜೂರು ಮಾಡಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ತಾಪಂ ಕಟ್ಟಡ ನಿರ್ಮಾಣಕ್ಕೆ ಮೊದಲ ಹಂತವಾಗಿ 1 ಕೋಟಿ ರು. ಹಣ ಬಿಡುಗಡೆಯಾಗಿದೆ ಎಂದರು.
ಸರ್ಕಾರ ಖಜಾನೆಯಿಂದ ಒಂದು ಪೈಸೆ ಕೊಡಬೇಕಿಲ್ಲ, ಸರ್ಟಿಫಿಕೇಟ್ ಕೊಟ್ಟರೆ ಸಾಕು: ಸಂಸದ ಯದುವೀರ್
ಹಲವು ವರ್ಷಗಳಿಂದ ತಾಪಂ ಕಚೇರಿ ಕಟ್ಟಡವು ಶಿಥಿಲಾವಸ್ಥೆಯಲ್ಲಿದೆ. ಅಧಿಕಾರಿಗಳ ಸಭೆ ನಡೆಸಲು ಸೂಕ್ತ ಸಭಾಂಗಣವಿಲ್ಲ. ಶಾಸಕರು ಕೂರಲು ಒಂದು ಕೊಠಡಿ ಇಲ್ಲ. ಹಾಗಾಗಿ ಈ ಕಟ್ಟಡವನ್ನು ಕೆಡವಿ ಅದೇ ಜಾಗದಲ್ಲಿ ಸುಸಜ್ಜಿತವಾಗಿ ಕಟ್ಟಡ ನಿರ್ಮಿಸಬೇಕೆಂದು ತೀರ್ಮಾನಿಸಿ ಸರ್ಕಾರದಿಂದ ಅಗತ್ಯ ಅನುದಾನ ಮಾಡಿಸಿದ್ದೇನೆ ಎಂದರು. ಜಿಪಂ ಸಿಇಒ ಅವರೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಕಟ್ಟಡದ ನೀಲಿನಕ್ಷೆಯಲ್ಲಿರುವ ಸಣ್ಣ ಪುಟ್ಟ ವ್ಯತ್ಯಾಸಗಳನ್ನು ಸರಿಪಡಿಸಿ ಸುಸಜ್ಜಿತವಾದ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸುವಂತೆ ಸೂಚಿಸಿರುವುದಾಗಿ ತಿಳಿಸಿದರು.