‘ಸೋತವರಿಗೆ ಮಂತ್ರಿಗಿರಿ ಇಲ್ಲ ಎಂದು ಸುಪ್ರೀಂ ಹೇಳಿದೆ’

By Kannadaprabha NewsFirst Published Jan 31, 2020, 11:42 AM IST
Highlights

ಚುನಾವಣೆಯಲ್ಲಿ ಪರಭಾವಗೊಂಡವರಿಗೆ ಸಚಿವ ಸ್ಥಾನ ನೀಡಲು ಅವಕಾಶ ಇಲ್ಲ ಎಂದು ಸುಪ್ರೀಂಕೋರ್ಟ್‌ ತೀರ್ಪಿನಲ್ಲಿ ತಿಳಿಸಲಾಗಿದೆ ಎಂದು ಉಪ ಮುಖ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ

ಬೆಂಗಳೂರು [ಜ.31]: ಚುನಾವಣೆಯಲ್ಲಿ ಸೋಲು ಅನುಭವಿಸಿದವರಿಗೆ ಸಚಿವ ಸ್ಥಾನ ನೀಡಲು ಅವಕಾಶ ಇಲ್ಲ ಎಂಬುದಾಗಿ ಸುಪ್ರೀಂಕೋರ್ಟ್‌ನ ತೀರ್ಪಿನಲ್ಲಿಯೂ ಸ್ಪಷ್ಟವಾಗಿ ತಿಳಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

"

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣೆಯಲ್ಲಿ ಪರಭಾವಗೊಂಡವರಿಗೆ ಸಚಿವ ಸ್ಥಾನ ನೀಡಲು ಅವಕಾಶ ಇಲ್ಲ ಎಂದು ಸುಪ್ರೀಂಕೋರ್ಟ್‌ ತೀರ್ಪಿನಲ್ಲಿ ತಿಳಿಸಲಾಗಿದೆ. ತೀರ್ಪು ನೋಡಬಹುದು. ಆದರೆ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಉಪಚುನಾವಣೆಯಲ್ಲಿ ಸೋಲನುಭವಿಸಿದ ವ್ಯಕ್ತಿಯೊಂದಿಗೆ ವೈಯಕ್ತಿಕವಾಗಿ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ತಿಳಿಸಿದರು.

ದೆಹಲಿಗೆ ತೆರಳಿರುವ ಮುಖ್ಯಮಂತ್ರಿಗಳು ನೂತನ ಅಧ್ಯಕ್ಷರಾಗಿರುವ ಜೆ.ಪಿ.ನಡ್ಡಾ ಅವರಿಗೆ ಅಭಿನಂದನೆ ತಿಳಿಸಿ, ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲಿದ್ದಾರೆ.

ಈಗ ಬಿಜೆಪಿಗೆ ಬಿಸಿತುಪ್ಪವಾದ ವಿಶ್ವನಾಥ್‌, ಎಂಟಿಬಿ

ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವವರ ಪೈಕಿ ಎಷ್ಟುಮಂದಿಗೆ ಸಚಿವ ಸ್ಥಾನ ನೀಡಬೇಕು ಎಂಬುದರ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ಎಲ್ಲರಿಗೂ ಸಚಿವ ಸ್ಥಾನ ನೀಡಬೇಕೇ ಅಥವಾ ಕೆಲವರಿಗೆ ನೀಡಬೇಕೇ ಎಂಬುದು ವರಿಷ್ಠರ ಸಮ್ಮುಖದಲ್ಲಿ ಚರ್ಚೆಯಾಗಲಿದೆ ಎಂದರು.

click me!