ಪಕ್ಷದ ವೇದಿಕೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಬೇರೆ ಯಾರಾದರೂ ಪ್ರಯತ್ನ ನಡೆಸಿದ್ದರೆ ಅದು ಅವರ ವೈಯಕ್ತಿಕ ವಿಚಾರ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ಬೆಳಗಾವಿ (ಅ.09): ಪಕ್ಷದ ವೇದಿಕೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಬೇರೆ ಯಾರಾದರೂ ಪ್ರಯತ್ನ ನಡೆಸಿದ್ದರೆ ಅದು ಅವರ ವೈಯಕ್ತಿಕ ವಿಚಾರ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು. ಕಿತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಶಾಸಕರು ಹಾಗೂ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಅವರ ಜೊತೆಗಿದ್ದೇವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೆಲ ನಾಯಕರು ಭೇಟಿಯಾಗಿದ್ದಾರೆ. ಅವರವರ ಪ್ರಯತ್ನ, ಆಸೆ ಅದು ಅವರಿಗೆ ಬಿಟ್ಟದ್ದು. ಅದು ತಪ್ಪೇನೂ ಅಲ್ಲ.
ಆದರೆ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ ಅವರು ಪಕ್ಷದ ಉನ್ನತ ಮಟ್ಟದಲ್ಲಿದ್ದಾರೆ. ಇವರೆಲ್ಲಾ ನಾವು ಸಿಎಂ ಬೆನ್ನಿಗೆ ನಿಂತಿದ್ದೇವೆ ಎಂದು ನಮಗೆ ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಾಗಿ, ಸಿಎಂ ಬದಲಾವಣೆ ಎನ್ನುವುದು ಕೇವಲ ಊಹಾಪೋಹವಷ್ಟೇ ಎಂದು ಸ್ಪಷ್ಟಪಡಿಸಿದರು. ಜಮ್ಮುವಿನಲ್ಲಿ ಕಾಂಗ್ರೆಸ್ ನೇತೃತ್ವದ ಘಟಬಂಧನ್‌ಗೆ ಬಹುಮತ ಸಿಕ್ಕಿರುವುದು ಸಂತೋಷದ ವಿಷಯ. ರಾಹುಲ್ ಗಾಂಧಿ ಹಾಗೂ ಖರ್ಗೆಯವರಿಗೆ ಅಭಿನಂದನೆಗಳು. ಅವರ ನೇತೃತ್ವದಲ್ಲಿ ಹೋರಾಟ ನಡೆದು ಬಂದಿದೆ. ದೇಶದಲ್ಲಿ ಕೆಲವೇ ಕೆಲವು ಶ್ರೀಮಂತರಿಗೆ ಅನುಕೂಲ ಆದರೆ ಸಾಲದು. ಜನಸಾಮಾನ್ಯರಿಗೆ ಅನುಕೂಲ ಆಗಬೇಕು. ದೇಶದಲ್ಲಿ ಉದ್ಯೋಗ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಬಡವರು ಬಡವರಾಗಿಯೇ ಉಳಿದಿದ್ದಾರೆ.
undefined
'ಕೆಜಿಎಫ್ 3' ಸಿನಿಮಾದ ಬಿಗ್ ಅಪ್‌ಡೇಟ್ ಕೊಟ್ಟ ನಿರ್ಮಾಪಕ ವಿಜಯ್ ಕಿರಗಂದೂರು!
ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಇದರ ವಿರುದ್ಧ ರಾಹುಲ್ ಗಾಂಧಿ ಹೋರಾಟ ನಡೆಸಿದ್ದರು. ಕಳೆದ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಮಿತ್ರ ಪಕ್ಷಗಳಿಗೆ ನೀಡಿವೆ. ಅದಕ್ಕಿಂತಲೂ ಹೆಚ್ಚಿನ ಬೆಂಬಲ ಈ ಚುನಾವಣೆಯಲ್ಲಿ ದೊರೆತಿದೆ. ದೇಶದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ ಎಂದು ವಿಶ್ಲೇಷಿಸಿದರು. ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಬರುತ್ತಿದೆ. ಅಲ್ಲಿಯೂ ನಮಗೆ ಬಹುಮತ ಸಿಗುವ ನಿರೀಕ್ಷೆ ಇದೆ. ಒಟ್ಟಾರೆ ದೇಶದಲ್ಲಿ ಬಡವರ ವಿರೋಧಿ ಸರ್ಕಾರದ ಇದೆ. ಬಡವರು, ಯುವಕರಿಗೆ ಉದ್ಯೋಗ ಕೊಡುತ್ತಿಲ್ಲ. ಕೆಲವೇ ಕೆಲವು ಅಂಬಾನಿ, ಅದಾನಿಯಂತವರಿಗೆ ಬಿಜೆಪಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ವಿಕೋಪದಿಂದ ಸಾವು, ನೋವು ಸಂಭವಿಸಿದರೆ ಕ್ರಮ: ರಾಜ್ಯದಲ್ಲಿ ಭಾರಿ ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಪರಿಶೀಲಿಸಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ ವಿಡಿಯೊ ಕಾನ್ಫೆರೆನ್ಸ್ ನಡೆಯಿತು. ಈ ಸಂದರ್ಭ ಮಾತನಾಡಿದ ಸಚಿವರು, ರಾಜ್ಯದಲ್ಲಿ ಈಗಾಗಲೇ ಭಾರಿ ಮಳೆಯಿಂದ ಹಲವಾರು ಹಾನಿ ಉಂಟಾಗಿದ್ದು, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚಿಸಿದರು. ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ಸ್ಥಾಪಿಸಬೇಕು. ಶಿಥಿಲ ಅವಸ್ಥೆಯಲ್ಲಿರುವಂತಹ ಶಾಲೆಗಳು, ಅಂಗನವಾಡಿಗಳನ್ನು ಗುರುತಿಸಿ ಕೂಡಲೆ ಸ್ಥಳಾಂತರಿಸಬೇಕು ಹಾಗೂ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಶಿಥಿಲಾವಸ್ಥೆಯಲ್ಲಿರುವ ಕಾಲುಸಂಕ, ಸೇತುವೆಗಳನ್ನು ಗುರುತಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದರು.
ಕನ್ನಡದ ಅತ್ಯಂತ ದುಬಾರಿ ಸಿನಿಮಾ ಮಾರ್ಟಿನ್, ಧ್ರುವ ಸರ್ಜಾ ನಟನೆ ಭರ್ಜರಿ: ನಿರ್ಮಾಪಕ ಉದಯ್ ಮೆಹ್ತಾ
ಈಗಾಗಲೇ ರಾಜ್ಯದಲ್ಲಿ ನೀರಿನಿಂದ ಕೊಚ್ಚಿ ಹೋಗಿ ಸಾವು ನೋವು ಉಂಟಾದ ಘಟನೆಗಳು ಹಲವಾರು ನಡೆದಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಯಾವುದೇ ರೀತಿಯಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸದೆ ಸಾವು ನೋವು ಉಂಟಾದರೆ ಅವುಗಳ ಜವಾಬ್ದಾರಿ ವಹಿಸಿರುವವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷ್ಣ ಬೈರೇಗೌಡ ಎಚ್ಚರಿಸಿದರು. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಮಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದಂತೆ ಕೂಳೂರು ಸೇತುವೆ ಹಾಗೂ ಕೆತ್ತಿಕಲ್ಲು ಗುಡ್ಡದಿಂದ ಮುಂಬರುವ ದಿನಗಳಲ್ಲಿ ಉಂಟಾಗಬಹುದಾದ ಅಪಾಯದ ಬಗ್ಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಶೀಘ್ರದಲ್ಲೇ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳುವಂತೆ ಹಾಗೂ ಉನ್ನತ ಮಟ್ಟದ ತಾಂತ್ರಿಕತೆ ಬಳಸಿಕೊಂಡು ಕ್ರಮ ಕೈಗೊಳ್ಳಲು ಸೂಚಿಸಿದರು.