ಅರಮನೆ ವಿಚಾರದಲ್ಲಿ ಯಾರ ವಿರುದ್ಧವೂ ದ್ವೇಷವಿಲ್ಲ: ಸಿಎಂ ಸಿದ್ದರಾಮಯ್ಯ

Published : Jan 26, 2025, 07:15 AM IST
ಅರಮನೆ ವಿಚಾರದಲ್ಲಿ ಯಾರ ವಿರುದ್ಧವೂ ದ್ವೇಷವಿಲ್ಲ: ಸಿಎಂ ಸಿದ್ದರಾಮಯ್ಯ

ಸಾರಾಂಶ

ರಾಜ್ಯ ಸರ್ಕಾರವು ಯಾರ ಮೇಲೂ ದ್ವೇಷ ಸಾಧಿಸುವ ಪ್ರಶ್ನೆಯೇ ಇಲ್ಲ. ರಸ್ತೆ ಅಗಲೀಕರಣಕ್ಕೆ ಸ್ವಾಧೀನ ಮಾಡಿಕೊಂಡಿರುವ 15.37 ಎಕರೆಗೆ ₹3,014 ಕೋಟಿ ಟಿಡಿಆರ್‌ ಪರಿಹಾರ ನೀಡಲು ಸಾಧ್ಯವೇ? ಇದರಿಂದ ಸಾರ್ವಜನಿಕರಿಗೆ ಭಾರ ಆಗುವುದಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ. 

ಬೆಂಗಳೂರು (ಜ.26): ರಾಜ್ಯ ಸರ್ಕಾರವು ಯಾರ ಮೇಲೂ ದ್ವೇಷ ಸಾಧಿಸುವ ಪ್ರಶ್ನೆಯೇ ಇಲ್ಲ. ರಸ್ತೆ ಅಗಲೀಕರಣಕ್ಕೆ ಸ್ವಾಧೀನ ಮಾಡಿಕೊಂಡಿರುವ 15.37 ಎಕರೆಗೆ ₹3,014 ಕೋಟಿ ಟಿಡಿಆರ್‌ ಪರಿಹಾರ ನೀಡಲು ಸಾಧ್ಯವೇ? ಇದರಿಂದ ಸಾರ್ವಜನಿಕರಿಗೆ ಭಾರ ಆಗುವುದಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1996ರಲ್ಲೇ ಈ ಜಾಗ ಸ್ವಾಧೀನ ಆಗಿದೆ. ಬೆಂಗಳೂರು ಅರಮನೆ ಸ್ವಾಧೀನಕ್ಕೆ ಪಡೆದಿರುವ ಕಾಯಿದೆಯನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ಅದರ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗಿದ್ದು ಇನ್ನೂ ಇತ್ಯರ್ಥ ಆಗಿಲ್ಲ ಎಂದರು.

ಇದೀಗ ಸಾರ್ವಜನಿಕರಿಗೆ ಅನುಕೂಲಕ್ಕಾಗಿ ರಸ್ತೆ ಅಗಲೀಕರಣಕ್ಕೆ 15.37 ಎಕರೆ ಜಾಗ ಪಡೆಯಲಾಗಿದೆ. ಇದಕ್ಕೆ 3,014 ಕೋಟಿ ರು. ನೀಡಿದರೆ ಎಕರೆಗೆ 200 ಕೋಟಿ ರು. ನೀಡಬೇಕು. ಬೆಂಗಳೂರಿನಲ್ಲಿ ಎಲ್ಲಾದರೂ ಈ ಬೆಲೆ ಇದೆಯೇ? ಸರ್ಕಾರ ಹಾಗೂ ಜನರು, ಅಭಿವೃದ್ಧಿ ಮೇಲೆ ಇದು ದುಷ್ಪರಿಣಾಮ ಬೀರುವುದಿಲ್ಲವೇ? ಟಿಡಿಆರ್‌ ಕೊಡಬಾರದು ಎಂಬುದು ನಮ್ಮ ಉದ್ದೇಶವಲ್ಲ. ಕೊಡುತ್ತೇವೆ ಎಂದು ಹೇಳಿದ್ದೂ ನಿಜ. ಆದರೆ ಇಷ್ಟು ಪ್ರಮಾಣದಲ್ಲಿ ನೀಡಲು ಸಾಧ್ಯವೇ? ಯದ್ವಾ ತದ್ವಾ ಟಿಡಿಆರ್‌ ಹಾಕಿದರೆ ಭಾರ ಆಗಲ್ಲವೇ ಎಂದು ಪ್ರಶ್ನಿಸಿದರು. ಟಿಡಿಆರ್ ಕೊಡಲು ಆಗದೇ ಇದ್ದರೆ ರಸ್ತೆ ಅಗಲೀಕರಣ ಯೋಜನೆಯನ್ನೇ ಕೈ ಬಿಡುತ್ತೇವೆ ಎಂದು ಹೇಳಿದ್ದೇವೆ. ಯಾರ ವಿರುದ್ಧವೂ ದ್ವೇಷ ಇಲ್ಲ. ಅಭಿವೃದ್ಧಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಸುಗ್ರೀವಾಜ್ಞೆ ತರುತ್ತಿದ್ದೇವೆ ಅಷ್ಟೇ ಎಂದು ತಿಳಿಸಿದರು.

ಸ್ವತಂತ್ರಕ್ಕಾಗಿ ಪ್ರಾಣ ತ್ಯಾಗ ಮಾಡಿದ ದೇಶಭಕ್ತ ಬೋಸ್‌: ಭಾರತವನ್ನು ಬ್ರಿಟಿಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟಿಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ಅವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದ ಅಂಗವಾಗಿ ಗುರುವಾರ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೇತಾಜಿ ಸುಭಾಷ್ ಚಂದ್ರ ಬೋಸ್ ರ ಜನ್ಮದಿಂದು ಅವರ ಜೀವನ-ಸಾಧನೆಗಳನ್ನು ಸ್ಮರಿಸುವ ಜೊತೆಗೆ ಅವರ ಆದರ್ಶಗಳ ಹಾದಿಯಲ್ಲಿ ನಡೆಯುವ ಸಂಕಲ್ಪ ಮಾಡಬೇಕಿದೆ. 

ಸಿದ್ದರಾಮಯ್ಯ ಸಿಎಂ ಆದಾಗಲೆಲ್ಲಾ ಅರಮನೆ ಗೊಂದಲ ಸೃಷ್ಟಿ: ಎಚ್‌.ವಿಶ್ವನಾಥ್

ಈ ದಿಸೆಯಲ್ಲಿ ಸರ್ಕಾರ ಈ ಮಹಾನ್ ನಾಯಕನಿಗೆ ಗೌರವ ಸಲ್ಲಿಸಿದೆ ಎಂದರು. ದೇಶದ ಬಗ್ಗೆ ಅಪಾರ ಗೌರವಾಭಿಮಾನ ಹೊಂದಿದ್ದ ಮಹಾನ್ ದೇಶಭಕ್ತ. ಈಗಿನ ಐಎಎಸ್ ನಂತೆ ಬ್ರಿಟಿಷರ ಕಾಲದಲ್ಲಿದ್ದ ಐಸಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಮಹಾತ್ಮಾ ಗಾಂಧಿಯವರು ಪ್ರತಿಪಾದಿಸುತ್ತಿದ್ದ ಸತ್ಯ ಹಾಗೂ ಅಹಿಂಸೆಯ ಮಾರ್ಗದಲ್ಲಿ ನಡೆದು ಭಾರತ ಸ್ವಾತಂತ್ರ್ಯ ಹೊಂದುವುದು ಕಷ್ಟಸಾಧ್ಯ ಎಂಬುದು ಸುಭಾಷರ ಅಭಿಪ್ರಾಯವಾಗಿತ್ತು. ಆದ್ದರಿಂದ ಶಸ್ತ್ರಾಸ್ತ್ರಗಳನ್ನು ಬಳಸಿಯೇ ಬ್ರಿಟೀಷರನ್ನು ಭಾರತದಿಂದ ಹೊರದೂಡುವ ಉದ್ದೇಶದಿಂದ ಐಎನ್ಎ (ಇಂಡಿಯನ್ ನ್ಯಾಷನಲ್ ಆರ್ಮಿ) ಸ್ಥಾಪಿಸಿದರು ಎಂದು ಸ್ಮರಿಸಿಕೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ