ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಚಂಡ ಬಹುಮತದೊಂದಿಗೆ ಆಯ್ಕೆಯಾಗಿ ಜನರ ಆಶೋತ್ತರಗಳಿಗೆ ಅನುಗುಣವಾಗಿ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಾ ಜನಪರ ಆಡಳಿತ ನೀಡುತ್ತಿದೆ. ಅದನ್ನು ಸಹಿಸದ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸೋಲಿನ ಹತಾಶೆಯಿಂದ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ
ದಾಬಸ್‌ಪೇಟೆ(ನ.11): 2024ರ ನಂತರ ಮೋದಿ ಸರ್ಕಾರ ಇರುವುದೇ ಗ್ಯಾರಂಟಿ ಇಲ್ಲ, ನಮ್ಮ ರಾಜ್ಯ ಸರ್ಕಾರದ ಬಗ್ಗೆ ಹಗುರವಾಗಿ ಮಾತನಾಡುವುದಕ್ಕಿಂತ ಮೊದಲು ಅವರ ಪಕ್ಷದ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡುವ ಬಗ್ಗೆ ಗಮನಹರಿಸಲಿ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಎಂದು ತಿಳಿಸಿದರು.
ಪಟ್ಟಣದ ಮಾರುತಿ ಕಾಂಪ್ಲೆಕ್ಸ್ ನಲ್ಲಿ ನಿರ್ಮಿಸುತ್ತಿರುವ ಕಾಂಗ್ರೆಸ್ ಕಚೇರಿ ಪರಿಶೀಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಚಂಡ ಬಹುಮತದೊಂದಿಗೆ ಆಯ್ಕೆಯಾಗಿ ಜನರ ಆಶೋತ್ತರಗಳಿಗೆ ಅನುಗುಣವಾಗಿ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಾ ಜನಪರ ಆಡಳಿತ ನೀಡುತ್ತಿದೆ. ಅದನ್ನು ಸಹಿಸದ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸೋಲಿನ ಹತಾಶೆಯಿಂದ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದರು.
undefined
ಡಿಕೆಶಿ ಮೇಲೆ ಸಿಬಿಐ ತನಿಖೆ ರಾಜಕೀಯ ಪ್ರೇರಿತ: ವೀರಪ್ಪ ಮೊಯ್ಲಿ
ಎಚ್‌ಡಿಕೆಗೆ ಮೈಂಡ್ ಇಲ್ಲ:
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರ ಬೀಳಿಸಲು ಮಾಸ್ಟರ್ ಮೈಂಡ್ ಯೋಜನೆಯ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಕುಮಾರಸ್ವಾಮಿಯವರಿಗೆ ಮೈಂಡೇ ಇಲ್ಲ, ಇನ್ನೂ ಮಾಸ್ಟರ್‌ಮೈಂಡ್ ಎಲ್ಲಿಂದ ಎಂದು ಟೀಕಿಸಿದರು.
ಲೋಕಸಭಾ ಚುನಾವಣೆಗೆ ಸಹಕಾರಿ:
ದಾಬಸ್‌ಪೇಟೆ ಹೋಬಳಿ ಕೇಂದ್ರವಾದರೂ ಯಾವುದೇ ಜಿಲ್ಲಾ ಕಚೇರಿಗೆ ಕಡಿಮೆ ಇಲ್ಲದಂತೆ ಕಾಂಗ್ರೆಸ್ ಮುಖಂಡ ಗೋವಿಂದರಾಜು ನೇತೃತ್ವದಲ್ಲಿ ಕಚೇರಿ ನಿರ್ಮಾಣವಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಕಾಂಗ್ರೆಸ್ ಅವಧಿಯಲ್ಲೇ ಮುಕ್ತಾಯ:
ಕಾಂಗ್ರೆಸ್ ಸರ್ಕಾರವಿದ್ದಾಗಲೇ ಎತ್ತಿನಹೊಳೆ ಯೋಜನೆ ಪ್ರಾರಂಭವಾಗಿದ್ದು, ಈ ಸರ್ಕಾರದ ಅವಧಿಯಲ್ಲೇ ಮುಕ್ತಾಯವಾಗಲಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 3 ಸಾವಿರ ಕೋಟಿ ರು.ಗಳನ್ನು ಬಿಡುಗಡೆ ಮಾಡಿದ್ದು, ಇಡೀ ಲೋಕಸಭಾ ಕ್ಷೇತ್ರದ ರೈತರಿಗೆ ಹಾಗೂ ಕುಡಿಯುವ ನೀರಿಗೆ ಅನುಕೂಲವಾಗಲಿದೆ ಎಂದರು.
ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿರುವ ವಿಚಾರವಾಗಿ ಕೇಳಲಾದ ಪ್ರಶ್ನೆಗೆ, ಮುಖ್ಯಮಂತ್ರಿ ಯಾರಾಗಬೇಕೆಂದು ಹೈಕಮಾಂಡ್ ಈಗಾಗಲೇ ತೀರ್ಮಾನಿಸಿ ಸುಭದ್ರ ಸರ್ಕಾರ ನಿರ್ಮಿಸಿದ್ದು, ಮುಂದಿನ ಕ್ರಮಗಳನ್ನು ಅವರೇ ಕೈಗೊಳ್ಳಲಿದ್ದಾರೆ ಎಂದರು.
ಕಾಂಗ್ರೆಸ್ ಮುಖಂಡ ಗೋವಿಂದರಾಜು ಮಾತನಾಡಿ, ನುಡಿದಂತೆ ನಡೆದ ಸರ್ಕಾರವೆಂದೇ ರಾಜ್ಯ ಸರ್ಕಾರ ಖ್ಯಾತಿ ಗಳಿಸಿದ್ದು, ಇದೇ ಮಾದರಿಯಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಬೇರಿ ಭಾರಿಸಲಿದೆ. ಶಾಸಕರು ಸಾರ್ವಜನಿಕರ ಕುಂದುಕೊರತೆ ಹಾಗೂ ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸಲು ಹಾಗೂ ಚರ್ಚಿಸಲು ಈ ಕಚೇರಿ ಅನುಕೂಲವಾಗಲಿದೆ. ಶೀಘ್ರವೇ ರಾಜ್ಯದ ಮಂತ್ರಿಗಳ ನೇತೃತ್ವದಲ್ಲಿ ಉದ್ಟಾಟನೆ ಮಾಡಲಿಸಲಾಗುವುದು ಎಂದರು.
ಎಚ್‌ಡಿಕೆ, ಮೋದಿ ಹಾಗೂ ಬಿಜೆಪಿಯವರು ಬರೀ ಹುಲ್ಲು ಮೇಯುತ್ತಾರಾ: ವೀರಪ್ಪ ಮೊಯ್ಲಿ
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸಿ.ಆರ್.ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್, ಮುಖಂಡರಾದ ಗೋವಿಂದರಾಜು, ಅಂಚೆಮನೆ ರುದ್ರಪ್ಪ, ಶಿವಕುಮಾರ್, ಹೊಸನಿಜಗಲ್ ಸಿದ್ದರಾಜು, ಲಕ್ಕೂರು ಸಿದ್ದರಾಜು, ಯೋಗನಂದೀಶ್, ಹನುಮಂತರಾಜು, ರಾಜಣ್ಣ, ಬರಗೇನಹಳ್ಳಿ ನಾರಾಯಣ್, ದಿನೇಶ್ ನಾಯಕ್, ಮನು, ಪಾರ್ಥ, ಚಿಕ್ಕಣ್ಣ ಕಾರ್ಯಕರ್ತರು ಉಪಸ್ಥಿತರಿದ್ದರು.
ಟಿಕೆಟ್ ನೀಡುವ ಭರವಸೆ ಇದೆ
2024ರ ಲೋಕಸಭಾ ಚುನಾವಣೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದೇನೆ. ಈಗಾಗಲೇ ನಾನು ಕೂಡ ಚುನಾವಣೆಗೆ ಪೂರ್ವ ತಯಾರಿ ನಡೆಸುತ್ತಿದ್ದೇನೆ. ಕೇಂದ್ರ ಕಾಂಗ್ರೆಸ್ ವರಿಷ್ಠರು ಲೋಕಸಭಾ ಚುನಾವಣೆಗೆ ಟಿಕೆಟ್ ನೀಡುವ ಭರವಸೆ ಇದೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ವಿಶ್ವಾಸ ವ್ಯಕ್ತಪಡಿಸಿದರು.