ಜಾತಿಗಣತಿ ವಿಚಾರದಲ್ಲಿ ಆತುರದ ನಿರ್ಧಾರವಿಲ್ಲ: ಡಿ.ಕೆ.ಶಿವಕುಮಾರ್‌

Published : Apr 14, 2025, 06:42 AM ISTUpdated : Apr 14, 2025, 07:32 AM IST
ಜಾತಿಗಣತಿ ವಿಚಾರದಲ್ಲಿ ಆತುರದ ನಿರ್ಧಾರವಿಲ್ಲ: ಡಿ.ಕೆ.ಶಿವಕುಮಾರ್‌

ಸಾರಾಂಶ

‘ಜಾತಿವಾರು ಸಮೀಕ್ಷಾ ವರದಿಯನ್ನು ನಾನು ಇನ್ನೂ ನೋಡಿಲ್ಲ. ಈ ವಿಚಾರದಲ್ಲಿ ಆತುರದ ನಿರ್ಧಾರ ಮಾಡುವುದಿಲ್ಲ. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ಕೇವಲ ಒಂದು ಸಮುದಾಯಕ್ಕೆ ಅಲ್ಲ, ಎಲ್ಲರಿಗೂ ನ್ಯಾಯ ಕೊಡಿಸಬೇಕಿರುವುದು ನನ್ನ ಹೊಣೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. 

ಬೆಂಗಳೂರು (ಏ.14): ‘ಜಾತಿವಾರು ಸಮೀಕ್ಷಾ ವರದಿಯನ್ನು ನಾನು ಇನ್ನೂ ನೋಡಿಲ್ಲ. ಈ ವಿಚಾರದಲ್ಲಿ ಆತುರದ ನಿರ್ಧಾರ ಮಾಡುವುದಿಲ್ಲ. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ಕೇವಲ ಒಂದು ಸಮುದಾಯಕ್ಕೆ ಅಲ್ಲ, ಎಲ್ಲರಿಗೂ ನ್ಯಾಯ ಕೊಡಿಸಬೇಕಿರುವುದು ನನ್ನ ಹೊಣೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಸಮೀಕ್ಷಾ ವರದಿಯಲ್ಲಿ ಒಕ್ಕಲಿಗರನ್ನು ಆರನೇ ಸ್ಥಾನದಲ್ಲಿ ತೋರಿಸಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷ. ಹೀಗಾಗಿ ಒಂದು ಸಮುದಾಯವಷ್ಟೇ ಅಲ್ಲ, ಎಲ್ಲರಿಗೂ ನ್ಯಾಯ ಕೊಡಿಸುವುದು ನನ್ನ ಹೊಣೆ. ಇದೇ ನನ್ನ ನಿಲುವು, ಬದ್ಧತೆ ಎಲ್ಲವೂ ಆಗಿರುತ್ತದೆ ಎಂದರು.

ಒಕ್ಕಲಿಗ ಸಮುದಾಯಕ್ಕೆ ನೀವು ನನ್ನ ಕೈಗೆ ಪೆನ್ನು ಕೊಡಿ ಎಂದು ಕೇಳಿದ್ದಿರಿ ಎಂಬ ಪ್ರಶ್ನೆಗೆ, ಅದೇ ಬೇರೆ ವಿಚಾರ ಇದೇ ಬೇರೆ ವಿಚಾರ. ನಾನು ಈ ವಿಚಾರದಲ್ಲಿ ಏನೂ ಹೇಳಿರಲಿಲ್ಲ. ವರದಿ ಭಾನುವಾರವಷ್ಟೇ ನನಗೆ ತಲುಪಿದೆ. ಪೂರ್ಣ ಪ್ರಮಾಣದಲ್ಲಿ ಓದಿ ಬಳಿಕ ಈ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದರು. ಲಿಂಗಾಯತರು ವರದಿ ಪರಿಶೀಲನೆಗೆ ತಜ್ಞರ ಸಮಿತಿ ರಚನೆ ಮಾಡುವ ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರವರ ಸಮಾಜ ರಕ್ಷಣೆ ಮಾಡಿಕೊಳ್ಳಲು ಹಾಗೂ ತಮ್ಮ ಹಕ್ಕು ಪ್ರತಿಪಾದನೆ ಮಾಡಿಕೊಳ್ಳಲು ಎಲ್ಲರಿಗೂ ಅವಕಾಶವಿದೆ. ಅದಕ್ಕೆ ನಮ್ಮ ವಿರೋಧವಿಲ್ಲ ಎಂದಷ್ಟೇ ಹೇಳಿದರು.

ಶೇ.70ರಷ್ಟಿರುವ ಒಬಿಸಿ ಮೀಸಲು ಶೇ.51ಕ್ಕೆ ಹೆಚ್ಚಿಸಲು ಶಿಫಾರಸು

ವರದಿ ಬಗ್ಗೆ ಚರ್ಚೆಗೆ ಅವಕಾಶ: ವರದಿ ಬಗ್ಗೆ ಜನಪ್ರತಿನಿಧಿಗಳ ಅಭಿಪ್ರಾಯವನ್ನೂ ಪಡೆಯಲಾಗುವುದು. ಇದಕ್ಕಾಗಿ ಅಧಿವೇಶನದಲ್ಲಿ ವರದಿ ಮಂಡಿಸಿ ಚರ್ಚೆಗೆ ಅವಕಾಶ ನೀಡುವುದಾಗಿ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಹೀಗಾಗಿ ಈ ವಿಚಾರದಲ್ಲಿ ಆತುರದ ನಿರ್ಧಾರ ಮಾಡುವುದಿಲ್ಲ. ಏ.17 ರಂದು ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ಮಾಡಲಾಗುವುದು. ಹೀಗಾಗಿ ಈ ಬಗ್ಗೆ ಅನಗತ್ಯ ಗೊಂದಲಗಳು ಬೇಡ. ಬಿಜೆಪಿಯವರು ರಾಜಕೀಯ ಕಾರಣಕ್ಕೆ ನೀಡುವ ಹೇಳಿಕೆಗಳಿಗೆ ಆದ್ಯತೆ ಕೊಡಬೇಕಾಗಿಲ್ಲ ಎಂದು ಇದೇ ವೇಳೆ ಶಿವಕುಮಾರ್‌ ಹೇಳಿದರು.

ನಿತ್ಯ ನಾವು ಚದುರಂಗದ ದಾಳಿ ಉರುಳಿಸುತ್ತಿರುತ್ತೇವೆ: ‘ರಾಜಕೀಯ ಚದುರಂಗ ಆಟವಿದ್ದಂತೆ. ನಾವು ನಿತ್ಯ ನಮ್ಮ ಚದುರಂಗದ ದಾಳ ಉರುಳಿಸುತ್ತಿರುತ್ತೇವೆ. ಹೀಗಾಗಿ ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು, ರಾಜಕೀಯ ಎದುರಾಳಿಗಳ ವಿರುದ್ಧ ಆಕ್ರಮಣ ಮಾಡುತ್ತಿರಬೇಕು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 2ನೇ ಆವೃತ್ತಿಯ ನಮ್ಮ ಬೆಂಗಳೂರು ಇಂಟರ್ ನ್ಯಾಷನಲ್ ಗ್ರ್ಯಾಂಡ್ ಮಾಸ್ಟರ್ ಒಪನ್ ಚೆಸ್ ಟೂರ್ನಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. 

ಗದಗ ಗ್ರಾಮೀಣ ವಿವಿಗೆ ಸಾರಥಿಯೂ ಇಲ್ಲ, ದುಡ್ಡೂ ಇಲ್ಲ: ಸರ್ಕಾರದಿಂದ ಅಲ್ಪಸ್ವಲ್ಪ ಅನುದಾನ

ರಾಜಕೀಯದಲ್ಲಿ ಪ್ರತಿನಿತ್ಯ ನಮ್ಮ ದಾಳ ಉರುಳಿಸುತ್ತಿರಬೇಕು. ನಮ್ಮ ರಾಜಕೀಯ ಎದುರಾಳಿಗಳ ವಿರುದ್ಧ ಆಕ್ರಮಣ ಮಾಡುತ್ತಿರಬೇಕು ಎಂದು ಹೇಳಿದರು. ಈ ಟೂರ್ನಿಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಚೆಸ್ ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ನೀವು ಗ್ರಾಮೀಣ ಭಾಗದಲ್ಲೂ ಇಂತಹ ಟೂರ್ನಿ ಆಯೋಜಿಸಿ ಆ ಭಾಗದ ಮಕ್ಕಳಿಗೂ ಪ್ರೋತ್ಸಾಹ ನೀಡಬೇಕು. ನೀವು ನಮ್ಮ ಜಿಲ್ಲೆಯಲ್ಲೂ ಟೂರ್ನಿ ಆಯೋಜಿಸಿ.ಇಂತಹ ಯುವ ಕ್ರೀಡಾಪಟುಗಳ ಜತೆಗೆ ನಮ್ಮ ಸರ್ಕಾರ ಸದಾ ನಿಲ್ಲಲಿದೆ ಎಂದು ಡಿ.ಕೆ. ಶಿವಕುಮಾರ್‌ ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದತ್ತಪೀಠ ವಿಚಾರದಲ್ಲಿ ರಾಜ್ಯ ಸರ್ಕಾರ ನ್ಯಾಯ ಒದಗಿಸಲಿ: ಸಿ.ಟಿ.ರವಿ ಆಗ್ರಹ
ಕರಾವಳಿಯಲ್ಲಿ ಶಿವಗಿರಿ ಮಠ ಶಾಖೆಗೆ 5 ಎಕರೆ: ಸಿಎಂ ಸಿದ್ದರಾಮಯ್ಯ ಭರವಸೆ