BJP Politics: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಸಚಿವ ಜೋಶಿ ಹೇಳಿದ್ದಿಷ್ಟು

By Kannadaprabha NewsFirst Published Jan 22, 2022, 4:28 AM IST
Highlights

*  2023ವರೆಗೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ
*  ಮುಂದಿನ ಚುನಾವಣೆಗೂ ಬೊಮ್ಮಾಯಿಯದ್ದೇ ನೇತೃತ್ವ 
*  ಪಂಚರಾಜ್ಯ ಚುನಾವಣೆ ಬಳಿಕ ಸಂಪುಟ ವಿಸ್ತರಣೆ
 

ನವದೆಹಲಿ(ಜ.22):  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ನಾಯಕತ್ವಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ(Pralhad Joshi) ಮತ್ತೆ ಬೆಂಬಲ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ(Karnataka) 2023ರವರೆಗೂ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದ್ದಾರೆ. ಜತೆಗೆ, ರಾಜ್ಯ ಸಂಪುಟ ಪುನರ್‌ ರಚನೆಯೇನಿದ್ದರೂ ಪಂಚ ರಾಜ್ಯಗಳ ಚುನಾವಣೆ ಬಳಿಕವಷ್ಟೆ ಎಂಬ ಸುಳಿವನ್ನೂ ನೀಡಿದ್ದಾರೆ.

ಹೈಕಮಾಂಡ್‌(BJP High Command) ಸೂಚನೆ ಹೊರತಾಗಿಯೂ ರಾಜ್ಯ ಸರ್ಕಾರದಲ್ಲಿನ(Government of Karnataka) ಬದಲಾವಣೆ ವಿಚಾರವಾಗಿ ಬಿಜೆಪಿಯ ಕೆಲ ಮುಖಂಡರು ನೀಡುತ್ತಿರುವ ಹೇಳಿಕೆಗಳ ಬಗ್ಗೆ ಶುಕ್ರವಾರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, 2023ರವರೆಗೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲ. ಮುಂದಿನ ಚುನಾವಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

Karnataka Politics: ಸಿದ್ದರಾಮಯ್ಯ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಜೋಶಿ

ಮಾಧ್ಯಮಗಳಿಗೆ ಹೇಳಿಕೆ ಬೇಡ:

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ(Cabinet Expansion) ಕುರಿತ ಪ್ರಶ್ನೆಗೂ ಪ್ರತಿಕ್ರಿಯಿಸಿದ ಜೋಶಿ, ಈ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಹೈಕಮಾಂಡ್‌ ನಾಯಕರು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸದ್ಯ ಹೈಕಮಾಂಡ್‌ ನಾಯಕರು ಪಂಚರಾಜ್ಯಗಳ ಚುನಾವಣೆಯಲ್ಲಿ(Election of the Five States) ಬ್ಯುಸಿಯಾಗಿದ್ದಾರೆ. ಆ ಬಳಿಕ ಪಕ್ಷದ ರಾಷ್ಟ್ರೀಯ ಮುಖಂಡರು ಬೊಮ್ಮಾಯಿ ಅವರ ಜೊತೆಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.

ಈ ವಿಚಾರವಾಗಿ ಏನೇ ಗೊಂದಲಗಳಿದ್ದರೂ ರಾಜ್ಯ ನಾಯಕರು ಹೈಕಮಾಂಡ್‌ ನಾಯಕರ ಜೊತೆಗೆ ಚರ್ಚಿಸಲಿ. ಅದನ್ನು ಬಿಟ್ಟು ಮಾಧ್ಯಮಗಳಿಗೆ ಹೇಳಿಕೆ ನೀಡುವುದರಿಂದ ಏನೂ ಆಗದು ಎಂದು ಸಂಪುಟ ವಿಸ್ತರಣೆ ವಿಚಾರ ಪದೇ ಪದೆ ಮಾಧ್ಯಮಗಳ ಮುಂದೆ ಹೋಗುತ್ತಿರುವ ಮುಖಂಡರಿಗೆ ಎಚ್ಚರಿಕೆ ಸಂದೇಶ ರವಾನಿಸಿದರು.

ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಹೈಕಮಾಂಡ್‌ ನಾಯಕರು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸದ್ಯ ಹೈಕಮಾಂಡ್‌ ನಾಯಕರು ಪಂಚರಾಜ್ಯಗಳ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ. ಆ ಬಳಿಕವೇ ಸಂಪುಟದ ಬಗ್ಗೆ ನಿರ್ಧರಿಸುತ್ತಾರೆ ಅಂತ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ. 

ಕಾಂಗ್ರೆಸ್‌ ಬೇರೆ ಪಕ್ಷದೆದುರು ಅಂಗಲಾಚುತ್ತಿದೆ

ಹುಬ್ಬಳ್ಳಿ: ಕಾಂಗ್ರೆಸ್‌(Congress) ದೇಶದಿಂದ ದಿವಾಳಿಯಾಗಿದ್ದಕ್ಕೆ ಬೇರೆ ಪಕ್ಷದವರ ಸಹಕಾರಕ್ಕೆ ಅಂಗಲಾಚುತ್ತಿದೆ. ಗೋವಾದಲ್ಲಿ ಹತ್ತು ವಿರೋಧ ಪಕ್ಷಗಳು ಸೇರಿದರು ಬಿಜೆಪಿ(BJP) ಸೋಲಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವ್ಯಂಗ್ಯವಾಡಿದ್ದಾರೆ.

MLC Election: ಮೇಲ್ಮನೆ ಬೇಕೋ ಬೇಡವೋ ರಾಜಕೀಯ ಪಕ್ಷಗಳು ಚಿಂತಿಸಲಿ, ಜೋಶಿ

ಜ.18 ರಂದು ನಗರದಲ್ಲಿ ಮಾಧ್ಯಮದ ಜತೆಗೆ ಮಾತನಾಡಿದ್ದ ಅವರು, ಮೋದಿ ಮತ್ತು ಬಿಜೆಪಿ ಸೋಲಿಸಲು ಕಾಂಗ್ರೆಸ್‌ ಸೇರಿ ಎಲ್ಲ ವಿರೋಧ ಪಕ್ಷಗಳು ಒಗ್ಗಟ್ಟಿನ ಹೋರಾಟ ಮಾಡುತ್ತಿರುವುದನ್ನು ನೋಡಿದರೆ ಆ ಪಕ್ಷಗಳ ಸ್ಥಿತಿ ಏನಾಗಿದೆ ಎಂಬುದಕ್ಕೆ ನಿದರ್ಶನ. ಗೋವಾದಲ್ಲಿ(Goa) ಬಿಜೆಪಿಯವರು ಟಿಎಂಸಿ(TMC) ನಾಯಕರ ಖರೀದಿಸಿದ್ದಾರೆ ಎಂಬ ವಿರೋಧ ಪಕ್ಷದವರ ಆರೋಪ ಸತ್ಯಕ್ಕೆ ದೂರ. ಕಾಂಗ್ರೆಸ್‌ ಗೋವಾ ಉಸ್ತುವಾರಿ ದಿನೇಶ ಗುಂಡೂರಾವ್‌(Dinesh Gundurao) ಅವರು ಸಹ ನಾಯಕರ ಖರೀದಿಸಿದ್ದಾರೆ ಎಂದು ಅಪವಾದ ಮಾಡಿದ್ದು, ಗಂಭೀರವಾದ ವಿಚಾರ. ಇದು ತನಿಖೆಯಾದರೆ ಖರೀಸಿದವರು ಮತ್ತು ಖರೀದಿಯಾದವರು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದರು.

ಬಹುಶಃ ಕಾಂಗ್ರೆಸ್‌ ಸೇರಿ ಇತರ ವಿರೋಧ ಪಕ್ಷದವರು ಮುಂದೆ ಎಂದಿಗೂ ಅಧಿಕಾರಕ್ಕೆ ಬರುವುದಿಲ್ಲ ಎಂಬ ಮನಸ್ಥಿತಿಯಲ್ಲಿದ್ದಾರೆ. ಅದಕ್ಕಾಗಿ ಬಿಜೆಪಿಯವರು ತರುವ ಎಲ್ಲ ಕಾಯ್ದೆಗಳನ್ನು ವಿರೋಧಿಸುತ್ತಿದ್ದಾರೆ. ಪ್ರತಿ ಹೆಜ್ಜೆಯನ್ನೂ ವಿರೋಧಿಸುತ್ತಿದ್ದಾರೆ. ಅದಕ್ಕಾಗಿಯೇ ಕಾಂಗ್ರೆಸ್‌ ಪಕ್ಷ ದೇಶದಿಂದ ದಿವಾಳಿ ಆಗುತ್ತಿದೆ ಎಂದು ಹರಿಹಾಯ್ದಿದ್ದರು. 
 

click me!