ವಾಲ್ಮೀಕಿ ನಿಗಮ ಕೇಸ್‌ ತನಿಖೆಗೆ ಸಿಬಿಐನಿಂದ ಪತ್ರ ಬಂದಿಲ್ಲ: ಸಚಿವ ಪರಮೇಶ್ವರ್‌

Published : Jun 09, 2024, 04:48 AM IST
ವಾಲ್ಮೀಕಿ ನಿಗಮ ಕೇಸ್‌ ತನಿಖೆಗೆ ಸಿಬಿಐನಿಂದ ಪತ್ರ ಬಂದಿಲ್ಲ: ಸಚಿವ ಪರಮೇಶ್ವರ್‌

ಸಾರಾಂಶ

ವಾಲ್ಮೀಕಿ ನಿಗಮದ ಭ್ರಷ್ಟಾಚಾರದ ತನಿಖೆಯನ್ನು ತಮಗೆ ವಹಿಸುವಂತೆ ಸಿಬಿಐನಿಂದ ಸರ್ಕಾರಕ್ಕೆ ಯಾವುದೇ ಪತ್ರ ಬಂದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. 

ಬೆಂಗಳೂರು (ಜೂ.09): ವಾಲ್ಮೀಕಿ ನಿಗಮದ ಭ್ರಷ್ಟಾಚಾರದ ತನಿಖೆಯನ್ನು ತಮಗೆ ವಹಿಸುವಂತೆ ಸಿಬಿಐನಿಂದ ಸರ್ಕಾರಕ್ಕೆ ಯಾವುದೇ ಪತ್ರ ಬಂದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ವಾಲ್ಮೀಕಿ ನಿಗಮದಲ್ಲಿ ಆಗಿರುವ ಭ್ರಷ್ಟಾಚಾರದಲ್ಲಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೆಸರು ತಳುಕು ಹಾಕಿರುವ ವಿಚಾರದ ಕುರಿತು ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣದ ತನಿಖೆ ನಡೆಯುತ್ತಿರುವಾಗ ಅನೇಕ ವಿಚಾರಗಳು ಬರುತ್ತವೆ. ಆರೋಪಿಗಳು ನೀಡುವ ಹೇಳಿಕೆಗಳಲ್ಲಿ ಹಲವರ ಹೆಸರುಗಳು ಪ್ರಸ್ತಾಪವಾಗುತ್ತವೆ. 

ಆ ಕುರಿತು ಎಸ್‌ಐಟಿ ತನಿಖೆ ನಡೆಸಿ ವಿಚಾರಣೆ ಮಾಡುತ್ತದೆ. ನಾವು ಅದರ ಬಗ್ಗೆ ವ್ಯಾಖ್ಯಾನ ಮಾಡುವುದು ಸರಿಯಲ್ಲ. ಪ್ರಕರಣ ವಿಚಾರಣೆಯಲ್ಲಿರುವಾಗ ಹೇಳಿಕೆ ಕೊಡಲು ಆಗಲ್ಲ ಎಂದು ಹೇಳಿದರು. ಈ ಪ್ರಕರಣವನ್ನು ತನಿಖೆಗೆ ವಹಿಸುವಂತೆ ಸಿಬಿಐನಿಂದ ಸರ್ಕಾರಕ್ಕೆ ಯಾವುದೇ ಪತ್ರ ಬಂದಿಲ್ಲ. ಮುಂದಿನ ಗುರುವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ಇದರ ಅಜೆಂಡಾ ಇದೆಯೋ ಇಲ್ಲವೋ ಗೊತ್ತಿಲ್ಲ ಎಂದರು.

ಎಲ್ಲಾ ಇಲಾಖಾ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.2 ಮೀಸಲು: ಸಚಿವ ಪರಮೇಶ್ವರ್

ಪೊಲೀಸರ ತಲೆ ಕಡೀತೇವೆ ಅನ್ನುವವರ ಬಿಡಲ್ಲ: ಚನ್ನಗಿರಿಯಲ್ಲಿ ವ್ಯಕ್ತಿಯನ್ನು ಬಂಧಿಸಿದ ಏಳು ನಿಮಿಷದಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಕಾರಣ ತಿಳಿದುಬರುತ್ತದೆ. ಆದರೆ ಪೊಲೀಸ್ ಠಾಣೆಗೆ ಬಂದು ಧಮ್ಕಿ ಹಾಕುವುದು, ಪೊಲೀಸರ ತಲೆ ಕಡೆಯುತ್ತೇವೆ ಎನ್ನುವವರನ್ನು ಬಿಡಲು ಆಗುವುದಿಲ್ಲ. ಅಂತಹವರ ಮೇಲೆ ಮುಲಾಜಿಲ್ಲದೇ ಕ್ರಮ ಆಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಗಿರಿ ಪೊಲೀಸ್‌ ಠಾಣೆಯಲ್ಲಿ ವ್ಯಕ್ತಿ ಸಾವನ್ನಪ್ಪಿರುವುದನ್ನು ಲಾಕಪ್‌ ಡೆತ್‌ ಎಂದು ಆರೋಪಿಸಲಾಗಿದೆ. ಆ ವ್ಯಕ್ತಿ ಮೇಲೆ ದೂರು ಬಂದಿದ್ದರಿಂದ ಪೊಲೀಸರು ವಿಚಾರಣೆಗೆ ಕರೆ ತಂದಿದ್ದರು. ಏಳು‌ ನಿಮಿಷದಲ್ಲಿ ಆರೋಗ್ಯದಲ್ಲಿ ಸಮಸ್ಯೆಯಾಗಿ ತೀರಿಕೊಂಡಿದ್ದಾರೆ. ಪೊಲೀಸರೇ ಹೊಡೆದು ಸಾಯಿಸಿದ್ದಾರೆ ಅಂತ ತಿಳಿದುಕೊಂಡು ಪ್ರತಿಭಟನೆ ಮಾಡಿದ್ದಾರೆ. ಪೊಲೀಸ್ ಠಾಣೆಗೆ ನುಗ್ಗುವ ಪ್ರಯತ್ನ ಮಾಡಿದ್ದಾರೆ. ಇಂತಹ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಮೊದಲು ಕಾನೂನು ಸುವ್ಯವಸ್ಥೆಯ ಡೆಫಿನೆಷನ್ ಹೇಳಲಿ: ಗೃಹಸಚಿವ ಪರಮೇಶ್ವರ್

ಡಿಜೆ ಹಳ್ಳಿ ರೀತಿ ಗಲಭೆಗೆ ಪ್ರಯತ್ನಿಸಿದ ಎನ್ನಲಾಗಿದೆ. ಪೊಲೀಸರು ತಕ್ಷಣ ಟಿಯರ್ ಗ್ಯಾಸ್ ಸಿಡಿಸಿದ್ದಾರೆ. ಸಹಜವಾಗಿ ಕಲ್ಲು ತೂರಾಟದಿಂದ ಪೊಲೀಸರಿಗೂ ಗಾಯಗಳು ಆಗಿವೆ. ಏನು ಬೇಕಾದರೂ ಮಾಡಬಹುದು ಎಂಬುವವರನ್ನು ನಾವು ಬಿಡುವುದಿಲ್ಲ. ಪೊಲೀಸರು ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!