
ಬೆಂಗಳೂರು : ‘ನಾನು ಈಗಲೂ ಸಿದ್ದರಾಮಯ್ಯ ಅವರ ಪರ. ಡಿ.ಕೆ.ಶಿವಕುಮಾರ್ ಅವರು ಎಷ್ಟೇ ಪ್ರಯತ್ನ ಮಾಡಿದರೂ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಭೇಟಿ ಕುರಿತು ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಶಿವಕುಮಾರ್ ಅವರು ನನ್ನನ್ನು ಹುಡುಕಿಕೊಂಡು ಬಂದಿರಲಿಲ್ಲ. ಅವರು ಪಕ್ಷದ ಅಧ್ಯಕ್ಷರು. ಅವರು ಯಾರನ್ನಾದರೂ ಕರೆದು ಮಾತನಾಡಬಹುದು, ಚರ್ಚಿಸಬಹುದು. ಅದರಲ್ಲಿ ಯಾವುದೇ ರಾಜಕಾರಣ ಇಲ್ಲ. ಪಕ್ಷ ಸಂಘಟನೆ ಬಗ್ಗೆ ಹೇಳಿದರು. ಆಯ್ತಪ್ಪಾ ಮಾಡೋಣ ಎಂದಿದ್ದೇನೆ ಅಷ್ಟೇ’ ಎಂದು ಹೇಳಿದರು.
ಮುಖ್ಯಮಂತ್ರಿ ಹಾದಿ ಸುಗಮ ಮಾಡಿಕೊಳ್ಳುವ ಪ್ರಯತ್ನವೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಜಣ್ಣ, ಈಗಲೂ ನಾನು ಸಿದ್ದರಾಮಯ್ಯ ಅವರ ಪರ. ಅವರು (ಡಿ.ಕೆ. ಶಿವಕುಮಾರ್) ಏನೇ ಪ್ರಯತ್ನ ಮಾಡಿದರೂ ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ. ನಾನು ಈ ಕುರಿತು ಹಿಂದೆ ನೀಡಿರುವ ಎಲ್ಲಾ ಹೇಳಿಕೆಗಳಿಗೂ ಈಗಲೂ ಬದ್ಧನಿದ್ದೇನೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದರು.
ಇನ್ನು ಮುಖ್ಯಮಂತ್ರಿ ಗಾದಿ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ. ಸಿದ್ದರಾಮಯ್ಯ ಅವರು ಇದನ್ನು ಪದೇ ಪದೇ ಹೇಳುತ್ತಿದ್ದಾರೆ. ಹೈಕಮಾಂಡ್ ಹೇಳಿದಂತೆ ನಾನು ಕೇಳುತ್ತೇನೆ ಎಂದಿದ್ದಾರೆ. ಹೀಗಾಗಿ ಇದರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ರಾಜಣ್ಣ ಹೇಳಿದರು.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಡಿನ್ನರ್ ಸಭೆ ನಡೆಸಿದ ಬಗ್ಗೆ ಪ್ರತಿಕ್ರಿಯಿಸಿ, ಕೇವಲ ಸತೀಶ್ ಜಾರಕಿಹೊಳಿ ಅವರು ಮಾತ್ರವಲ್ಲ, ಬೆಳಗಾವಿಯಲ್ಲಿ ಎಲ್ಲರೂ ಊಟಕ್ಕೆ ಕರೆದಿದ್ದಾರೆ, ಹೋಗಿದ್ದಾರೆ. ಅದರಲ್ಲಿ ರಾಜಕೀಯ ಏನಿಲ್ಲ. ಸೌಜನ್ಯದ ಭೇಟಿಯಷ್ಟೇ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.