ಗುಜರಾತ್‌ ಇವಿಎಂ ರಾಜ್ಯಕ್ಕೆ ಬೇಡ: ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ನಿಂದ ಮನವಿ

By Kannadaprabha NewsFirst Published Mar 10, 2023, 1:27 PM IST
Highlights

ರಾಜ್ಯ ವಿಧಾನಸಭಾ ಚುನಾವಣೆಯನ್ನು ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸಬೇಕು. ಉತ್ತರ ಪ್ರದೇಶ ಹಾಗೂ ಗುಜರಾತ್‌ ಸೇರಿದಂತೆ ಬಿಜೆಪಿ ಗೆಲುವು ಸಾಧಿಸಿದ ರಾಜ್ಯಗಳಲ್ಲಿ ಬಳಸಿದ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳನ್ನು ರಾಜ್ಯದಲ್ಲಿ ಬಳಸಬಾರದು. 

ಬೆಂಗಳೂರು (ಮಾ.09): ರಾಜ್ಯ ವಿಧಾನಸಭಾ ಚುನಾವಣೆಯನ್ನು ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸಬೇಕು. ಉತ್ತರ ಪ್ರದೇಶ ಹಾಗೂ ಗುಜರಾತ್‌ ಸೇರಿದಂತೆ ಬಿಜೆಪಿ ಗೆಲುವು ಸಾಧಿಸಿದ ರಾಜ್ಯಗಳಲ್ಲಿ ಬಳಸಿದ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳನ್ನು ರಾಜ್ಯದಲ್ಲಿ ಬಳಸಬಾರದು. 224 ಕ್ಷೇತ್ರದಲ್ಲಿ ಒಂದೇ ಹಂತದಲ್ಲಿ ಚುನಾವಣೆ ಮಾಡಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್‌ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ವಿಧಾನಸೌಧದಲ್ಲಿ ಗುರುವಾರ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳ ತಂಡ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿತು. ಈ ವೇಳೆ, ಕಾಂಗ್ರೆಸ್‌ ನಾಯಕ, ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ನೇತೃತ್ವದ ಕಾಂಗ್ರೆಸ್‌ ನಿಯೋಗವು ಆಯೋಗಕ್ಕೆ ಪಕ್ಷದ ಮನವಿ ಸಲ್ಲಿಸಿತು.

ಬಳಿಕ ಮಾತನಾಡಿದ ಉಗ್ರಪ್ಪ ಅವರು, ರಾಜ್ಯದಲ್ಲಿ ಮುಕ್ತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸಲು ಮತಪಟ್ಟಿಯಿಂದ ಕೈಬಿಟ್ಟಿರುವ 33 ಲಕ್ಷ ಮತದಾರರನ್ನು ಮರು ಸೇರ್ಪಡೆ ಮಾಡಬೇಕು. ಸೂಕ್ಷ್ಮ ಮತಗಟ್ಟೆಗಳಲ್ಲಿ ಪ್ಯಾರಾ ಮಿಲಿಟರಿ ಪಡೆ ನಿಯೋಜಿಸಬೇಕು. ಮೂರು ವರ್ಷ ಒಂದೇ ಕಡೆ ಕೆಲಸ ಮಾಡಿದ ಅಧಿಕಾರಿಗಳನ್ನು ಬದಲಾವಣೆ ಮಾಡಬೇಕು. ಬಿಜೆಪಿ ಏಜೆಂಟ್‌ ರೀತಿ ಡಿಜಿಪಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ವರ್ಗಾವಣೆ ಮಾಡಬೇಕು. ಸಾಮಾಜಿಕ ಜಾಲತಾಣದಲ್ಲಿ ಪ್ರಚಾರದ ಖರ್ಚಿನ ಬಗ್ಗೆ ಮಾಹಿತಿ ಪಡೆಯಬೇಕು. ಬೇಕಾಬಿಟ್ಟಿಜಾಹೀರಾತಿಗೆ ಕಡಿವಾಣ ಹಾಕಬೇಕು. ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಲ್ಲಿ ಬಿಜೆಪಿ ಏಜೆಂಟರು ಇದ್ದಾರೆ. ಆರ್‌ಎಸ್‌ಎಸ್‌ ಶಾಖೆಗೆ ಹೋಗುವವರಿದ್ದಾರೆ. ಅವರನ್ನು ಹೊರಗೆ ಹಾಕಬೇಕೆಂದು ಕೋರಿದ್ದೇವೆ ಎಂದು ಹೇಳಿದರು.

Latest Videos

ಉಜ್ವಲ ಭವಿಷ್ಯ ಬಯಸುವವರು ಮೋದಿಗೆ ಮತ ಹಾಕ್ತಾರೆ: ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌

ಜತೆಗೆ ಚಿಲುಮೆ ಸಂಸ್ಥೆ ನಡೆಸಿರುವ ಅಕ್ರಮದ ಕುರಿತು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಾಗಿದೆ. ಚಿಲುಮೆ ಅಕ್ರಮದ ತನಿಖಾ ವರದಿಯನ್ನು ಬಹಿರಂಗಪಡಿಸಬೇಕು ಎಂದು ಕೋರಿದ್ದೇವೆ. ಮತ ಸೆಳೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸತತವಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ ಎಂಬುದನ್ನು ಗಮನಕ್ಕೆ ತಂದಿದ್ದೇವೆ. ಸರ್ಕಾರ ತರಾತುರಿಯಲ್ಲಿ ಟೆಂಡರ್‌ಗಳನ್ನು ಕರೆಯುತ್ತಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ನೀತಿ ಸಂಹಿತೆ ಜಾರಿಗೊಳಿಸಬೇಕು. ಮೂರು ವರ್ಷ ಒಂದೇ ಕಡೆ ಕೆಲಸ ಮಾಡಿದ ಅಧಿಕಾರಿಗಳನ್ನು ಬದಲಾವಣೆ ಮಾಡಬೇಕು. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರದ ಖರ್ಚಿನ ಬಗ್ಗೆ ಮಾಹಿತಿ ಪಡೆಯಬೇಕು. ಬೇಕಾಬಿಟ್ಟಿ ಜಾಹೀರಾತಿಗೆ ಕಡಿವಾಣ ಹಾಕಬೇಕು ಎಂದು ಹೇಳಿದರು.

ಅಸೆಂಬ್ಲಿ ಚುನಾವಣೆಗೆ ವಿಧ್ಯುಕ್ತ ಸಿದ್ಧತೆ ಆರಂಭ: ಮುಂದಿನ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸಂಬಂಧ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರ ನೇತೃತ್ವದ ತಂಡವು ವೇಳಾಪಟ್ಟಿಘೋಷಣೆಗೆ ಪೂರಕವಾಗಿ ಅಂತಿಮ ಹಂತದ ಸಿದ್ಧತೆಗಳನ್ನು ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಆಯೋಗದ ಮುಖ್ಯ ಆಯುಕ್ತ ರಾಜೀವ್‌ ಕುಮಾರ್‌ ನೇತೃತ್ವದಲ್ಲಿ ಚುನಾವಣಾ ಆಯುಕ್ತರಾದ ಅನೂಪ್‌ ಚಂದ್ರಪಾಂಡೆ, ಅರುಣ್‌ ಗೋಯಲ್‌ ಮತ್ತು ಉಪ ಆಯುಕ್ತರು ಸೇರಿದಂತೆ ಆಯೋಗದ ಹಿರಿಯ ಅಧಿಕಾರಿಗಳು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಮತ್ತಿತರ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಪರಿಸ್ಥಿತಿಯ ಮಾಹಿತಿ ಪಡೆದರು. ಅಲ್ಲದೆ, ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಚರ್ಚೆಯನ್ನೂ ನಡೆಸಿದರು.

400 ರೂಪಾಯಿ ಕುಕ್ಕರ್‌ಗೆ 1400 ರೂಪಾಯಿ ಸ್ಟಿಕ್ಕರ್‌, ಮತದಾರರನ್ನ ಕುರಿ ಮಾಡಿದ್ರಾ ರಾಜೇಗೌಡ್ರು!

ಮೂರು ದಿನಗಳ ಭೇಟಿಗಾಗಿ ಗುರುವಾರ ನಗರಕ್ಕೆ ಆಗಮಿಸಿದ ಆಯೋಗದ ತಂಡವು ವಿಕಾಸಸೌಧದಲ್ಲಿ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳ ಜತೆ ಚರ್ಚಿಸಿತು. ಈ ವೇಳೆ ರಾಜಕೀಯ ಪಕ್ಷಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದರ ಜತೆಗೆ ಕೆಲವು ಸಲಹೆಗಳನ್ನು ನೀಡಿದವು. ಮಧ್ಯಾಹ್ನ 2.30ಕ್ಕೆ ಈ ಸಭೆ ಆರಂಭಗೊಂಡಿತು. ಪ್ರತಿ ಪಕ್ಷಕ್ಕೂ 10 ನಿಮಿಷ ಕಾಲಾವಕಾಶ ನೀಡಿ ಸಂಜೆ 4 ಗಂಟೆಯವರೆಗೆ ಅಭಿಪ್ರಾಯಗಳನ್ನು ಸಂಗ್ರಹಿಸಲಾಯಿತು. ಅಖಿಲ ಭಾರತೀಯ ತೃಣಮೂಲ ಕಾಂಗ್ರೆಸ್‌, ಬಹುಜನ ಸಮಾಜ ಪಕ್ಷ, ಬಿಜೆಪಿ, ಕಮ್ಯೂನಿಸ್ಟ್‌ ಪಕ್ಷ (ಸಿಪಿಐ), ಸಿಪಿಐ(ಎಂ), ಕಾಂಗ್ರೆಸ್‌, ನಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷ, ರಾಷ್ಟ್ರೀಯ ಪೀಪಲ್ಸ್‌ ಪಕ್ಷ, ಜನತಾ ದಳದೊಂದಿಗೆ ಸಭೆ ನಡೆಸಲಾಯಿತು. ಆಯಾ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಪಡೆದುಕೊಂಡಿರುವ ಕೇಂದ್ರ ಚುನಾವಣಾ ಆಯೋಗವು ಮುಂದಿನ ಕ್ರಮ ಕೈಗೊಳ್ಳಲಿದೆ.

click me!