ಲೋಕಸಭೆ ಚುನಾವಣೆ ಹಿನ್ನಡೆಗೆ ಯಾರನ್ನೂ ಹೊಣೆ ಮಾಡಲು ಸಾಧ್ಯವಿಲ್ಲ: ಸಚಿವ ಎಂ.ಬಿ.ಪಾಟೀಲ್‌

By Govindaraj S  |  First Published Jun 9, 2024, 9:36 AM IST

ಚುನಾವಣೆ ಹಿನ್ನಡೆಗೆ ಯಾರನ್ನೂ ಹೊಣೆ ಮಾಡಲು ಸಾಧ್ಯವಿಲ್ಲ. ಸಚಿವರ ಅಥವಾ ಶಾಸಕರ ಮೌಲ್ಯಮಾಪನ ಕೂಡ ನಡೆಯುವುದಿಲ್ಲ. ಪಕ್ಷದ ಮುಂದಿನ ಕಾರ್ಯತಂತ್ರದ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. 


ಬೆಂಗಳೂರು (ಜೂ.09): ಚುನಾವಣೆ ಹಿನ್ನಡೆಗೆ ಯಾರನ್ನೂ ಹೊಣೆ ಮಾಡಲು ಸಾಧ್ಯವಿಲ್ಲ. ಸಚಿವರ ಅಥವಾ ಶಾಸಕರ ಮೌಲ್ಯಮಾಪನ ಕೂಡ ನಡೆಯುವುದಿಲ್ಲ. ಪಕ್ಷದ ಮುಂದಿನ ಕಾರ್ಯತಂತ್ರದ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ  ನಾವು ರಾಜ್ಯದಲ್ಲಿ ಕನಿಷ್ಠ ಪಕ್ಷ 14 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ 9 ಸ್ಥಾನಗಳಷ್ಟೇ ಬಂದಿವೆ. ಈ ಹಿನ್ನಡೆಗೆ ಕಾರಣಗಳೇನು ಎನ್ನುವ ಕುರಿತು ಕಾಂಗ್ರೆಸ್ ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳಲಿದೆ. 

ಕಳೆದ ಒಂದು ವರ್ಷದಲ್ಲಿ ರಾಜ್ಯ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು, ಜನರಿಗೆ ಅದರ ಲಾಭ ಸಿಗುವಂತೆ ಮಾಡಿತ್ತು. ಆದರೂ ನಾವು ಎಡವಿದ್ದೆಲ್ಲಿ ಎನ್ನುವುದನ್ನು ಕಂಡುಕೊಳ್ಳಲಿದ್ದೇವೆ ಎಂದರು. ಪ್ರಸ್ತುತ ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿ ಆಗುತ್ತಿದ್ದಾರೆ. ಕಳೆದ ಎರಡು ಬಾರಿಗಿಂತ ಈ ಸಲ ಬಿಜೆಪಿ ಬಲ ಕುಂದಿದೆ. ಹೀಗಾಗಿ ಈ ಸಮ್ಮಿಶ್ರ ಸರ್ಕಾರ ಎಷ್ಟು ದಿನ ಇರುತ್ತದೆಯೋ ಹೇಳಲು ಸಾಧ್ಯವಿಲ್ಲ. ಅದರಲ್ಲೂ ನಿತೀಶ್‌ಕುಮಾರ್‌ ಅವರಂತ ವ್ಯಕ್ತಿಯನ್ನು ಇಟ್ಟುಕೊಂಡು ಸರ್ಕಾರ ನಡೆಸುವುದು ಎಷ್ಟು ಕಷ್ಟ ಎನ್ನುವುದು ನಮಗೆ ಗೊತ್ತಿದೆ. ಮತ್ತೆ ಚುನಾವಣೆಯೂ ಬರಬಹುದು ಎಂದು ಹೇಳಿದರು.

Tap to resize

Latest Videos

undefined

ಶಾಸಕ ಸವದಿ, ಮಹೇಂದ್ರ ಪಕ್ಷದ ವಿರುದ್ಧ ಕೆಲಸ ಮಾಡಿದರು: ಸತೀಶ್‌ ಜಾರಕಿಹೊಳಿ

ಭೂ ಹಗರಣ ಸಿಒಡಿಗೆ ಒಪ್ಪಿಸುವಂತೆ ಎಂಬಿಪಾಗೆ ಮನವಿ: ಜಿಲ್ಲೆಯಲ್ಲಿ ನಡೆದಿದೆ ಎನ್ನಲಾದ ಭೂ ಹಗರಣ ಸಿಒಡಿ ತನಿಖೆ ನಡೆಸಲು ಸರ್ಕಾರಕ್ಕೆ ನಾನು ಸಹ ಮನವಿ ಮಾಡಿಕೊಳ್ಳುವೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಭರವಸೆ ನೀಡಿದರು. ಭೂ ಹಗರಣದ ವಿರುದ್ದ ಸಮರ ಸಾರಿರುವ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರು ಬೆಂಗಳೂರಿನಲ್ಲಿ ಸಚಿವ ಡಾ.ಎಂ.ಬಿ. ಪಾಟೀಲರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ಭರವಸೆ ನೀಡಿದರು.

ಭೂಗರಣಗಳ ಕುರಿತು ವಿವರಿಸಿದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ವಿಜಯಪುರ ನಗರದಲ್ಲಿ ನಕಲಿ ಭೂ-ದಾಖಲೆ ಸೃಷ್ಟಿ ಮಾಡಿ ಜನರನ್ನು ದೊಡ್ಡ ಪ್ರಮಾಣದಲ್ಲಿ ವಂಚನೆ ಮಾಡುತ್ತಿರುವ ಅನೇಕ ಪ್ರಕರಣಗಳು ನಡೆಯುತ್ತಿವೆ. ಇದರಿಂದ ಬಡಜನರು ನಿತ್ಯ ಶೋಷಣೆಗೆ ಒಳಗಾಗುತ್ತಿದ್ದಾರೆ. ಜಮೀನು ಹಾಗೂ ನಿವೇಶನಗಳ ಖೊಟ್ಟಿ ದಾಖಲೆ ಸೃಷ್ಟಿ ಮಾಡಿ ಉಪನೋಂದಣಿ ಅಧಿಕಾರಿಗಳ ಕಚೇರಿಯಲ್ಲಿ ಖರೀದಿ ಹಾಗೂ ಮಾರಾಟ ಮಾಡುವ ಕಾನೂನು ಬಾಹಿರ ಕೃತ್ಯಗಳು ಅವ್ಯಾಹತವಾಗಿ ನಡೆದಿವೆ ಎಂದರು.

ಮೋದಿ ಪ್ರಮಾಣ ವಚನಕ್ಕೆ ಎಚ್‌ಡಿಕೆ ಕುಟುಂಬ ದಿಲ್ಲಿಗೆ: ಬಿಜೆಪಿಯಿಂದ ಕರೆ?

ಜನರನ್ನು ವಂಚಿಸುವ ವ್ಯವಸ್ಥಿತ ಜಾಲವೇ ಜಿಲ್ಲೆಯಲ್ಲಿ ಹುಟ್ಟಿಕೊಂಡಿದೆ. ಈ ಜಾಲಕ್ಕೆ ಈಗಾಗಲೇ ನೂರಾರು ಜನ ಹಣ-ಆಸ್ತಿ ಕಳೆದುಕೊಂಡಿದ್ದಾರೆ. ಇಂತಹ ವಂಚಕರ ಜಾಲ ವಿಜಯಪುರ ಜಿಲ್ಲೆ ಹಾಗೂ ನಗರದಲ್ಲಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಸಾಕಷ್ಟು ಬಡ ಜನರು ಈಗಾಗಲೇ ಮೋಸ ಹೋಗಿದ್ದಾರೆ. ಕಷ್ಟಪಟ್ಟು ದುಡಿದು, ಸಾಲ-ಸೋಲ ಮಾಡಿ ನಿವೇಶನ, ಜಮೀನು ಖರೀದಿ ಮಾಡುವ ಬಡವರು, ಈ ರೀತಿಯ ವಂಚನೆಗೆ ಒಳಗಾಗಿ ತಮ್ಮ ಆಸ್ತಿ ಕಳೆದುಕೊಂಡು ಕಷ್ಟ ಅನುಭವಿಸುತ್ತಿದ್ದಾರೆ.ಈ ಜಾಲಕ್ಕೆ ಸಿಲುಕಿ ವಂಚನೆಗೊಳಗಾದವರು ಹಾಗೂ ಜಮೀನು ಕಳೆದುಕೊಂಡವರು ಪೊಲೀಸ್ ಠಾಣೆಗೆ ದೂರು ನೀಡಿದರೂ ಯಾವ ಪ್ರಯೋಜನವೂ ಆಗುತ್ತಿಲ್ಲ ಎಂದರು.

click me!