ಅರ್ಧ ಅವಧಿಗೆ ಸಿದ್ದರಾಮಯ್ಯ ಸಿಎಂ ಎಂದು ಯಾರೂ ಹೇಳಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

By Kannadaprabha News  |  First Published Jun 19, 2023, 2:00 AM IST

ಸಿದ್ದರಾಮಯ್ಯನವರು ಅರ್ಧ ಅವಧಿಗೆ ಮುಖ್ಯಮಂತ್ರಿ ಎಂದು ಯಾರೂ ಹೇಳಿಲ್ಲ. ಅಲ್ಲದೆ, ಸಿದ್ದರಾಮಯ್ಯನವರೇ ಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ಇದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. 


ದಾವಣಗೆರೆ/ಹಾವೇರಿ (ಜೂ.19): ಸಿದ್ದರಾಮಯ್ಯನವರು ಅರ್ಧ ಅವಧಿಗೆ ಮುಖ್ಯಮಂತ್ರಿ ಎಂದು ಯಾರೂ ಹೇಳಿಲ್ಲ. ಅಲ್ಲದೆ, ಸಿದ್ದರಾಮಯ್ಯನವರೇ ಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ಇದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಅದು ಪಕ್ಷದ ತೀರ್ಮಾನಕ್ಕೆ ಬಿಟ್ಟವಿಚಾರ ಎನ್ನುವ ಮೂಲಕ ಸಿದ್ದರಾಮಯ್ಯ ಪರ ಬ್ಯಾಟ್‌ ಬೀಸಿದರು. ಅಲ್ಲದೆ, ‘ನಾನು ಈ ಅವಧಿಗೆ ಸಿಎಂ ಆಕಾಂಕ್ಷಿಯಲ್ಲ. ಮುಂದಿನ ಅವಧಿಗೆ’ ಎಂದರು.

ಗ್ಯಾರಂಟಿ ಯೋಜನೆಯಡಿ ಬಡವರಿಗೆ ಅಕ್ಕಿ ವಿತರಿಸುವ ಕೆಲಸವನ್ನು ನಾವು ಖಂಡಿತಾ ಮಾಡುತ್ತೇವೆ. ಬಿಜೆಪಿಯವರು ಪ್ರತಿಭಟನೆ ನಡೆಸುತ್ತೇವೆ ಎಂಬುದಾಗಿ ಹೇಳುತ್ತಿದ್ದಾರೆ. ಜನತೆಗೆ ಅಕ್ಕಿ ನೀಡುವುದು ಬಿಜೆಪಿಗೆ ಸಂಬಂಧಿಸಿದ ವಿಚಾರವಲ್ಲ. ನಮ್ಮ ಕೆಲಸವನ್ನು ನಾವು ಮಾಡುತ್ತೇವೆ. ಇನ್ನೂ ಕಾಲಾವಕಾಶಬೇಕು. ಎಲ್ಲವನ್ನೂ ಸರಿ ಮಾಡುತ್ತೇವೆ ಎಂದು ತಿಳಿಸಿದರು. ಇದೇ ವೇಳೆ, ಕ್ರೀಡಾ ಸಚಿವ ಬಿ.ನಾಗೇಂದ್ರ ವಿಷಯ ಪ್ರಸ್ತಾಪಿಸಿದ ಸಚಿವರು, ನಾಗೇಂದ್ರ ಅವರು ಮಾಮ..ಮಾಮ..ಎಂದುಕೊಂಡೆ ಬಳ್ಳಾರಿ ಜಿಲ್ಲೆಯಲ್ಲ ಬಿಜೆಪಿಯ ಸಚಿವರಾಗಿದ್ದ ಶ್ರೀರಾಮುಲು ಅವರನ್ನು ಸೋಲಿಸಿದರು. ಅಂತಹ ಪ್ರಬಲ ಅಭ್ಯರ್ಥಿಯನ್ನು ಸೋಲಿಸಿದ ನಾಗೇಂದ್ರ ಕಾಂಗ್ರೆಸ್‌ ಸರ್ಕಾರದಲ್ಲಿ ಸಚಿವರಾಗಿದ್ದಾರೆ ಎಂದರು.

Tap to resize

Latest Videos

ಗ್ರಾಮದ ಅಭಿವೃದ್ಧಿ ವಿಚಾರದಲ್ಲಿ ಎಲ್ಲ ಒಂದಾಗಿರಬೇಕು: ಶಾಸಕ ಗಣೇಶ್‌ ಪ್ರಸಾದ್‌

ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು: ನಮ್ಮ ಸರ್ಕಾರ ಬಂದು 15 ದಿನಗಳಷ್ಟೇ ಆಗಿದೆ. ಐದು ವರ್ಷ ಅಭಿವೃದ್ಧಿ ಬಗ್ಗೆ ಗಮನ ಕೊಡುತ್ತೇವೆ. ಸಿಎಂ ಬದಲಾವಣೆ ವಿಚಾರ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಅದೇನಿದ್ದರೂ ಹೈಕಮಾಂಡ್‌ಗೆ ಬಿಟ್ಟ ವಿಷಯ. ನಾನು ಈ ಅವಧಿಗೆ ಸಿಎಂ ಆಕಾಂಕ್ಷಿಯಲ್ಲ. ಮುಂದಿನ ಅವಧಿಗೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭವಿಷ್ಯದಲ್ಲಿ ಸತೀಶ ಜಾರಕಿಹೋಳಿ ಸಿಎಂ ಆಗ್ತಾರೆ ಎಂದು ರಾಜಣ್ಣ ಹೇಳಿದ್ದಾರೆ. ಅದು ಅವರವರ ವೈಯಕ್ತಿಕ ವಿಚಾರ. ಎಲ್ಲರ ಅಭಿಮಾನಿಗಳೂ ಹೀಗೆ ಹೇಳುವುದು ಸಹಜ. ಆದರೆ, ಈಗ ಆ ವಿಚಾರದ ಅಗತ್ಯವಿಲ್ಲ ಎಂದು ಹೇಳಿದರು.

ಸಾಂಸ್ಕೃತಿಕ, ಚಾರಿತ್ರಿಕ, ಬೌದ್ಧಿಕ ನೆಲೆಗಟ್ಟಿನಲ್ಲಿ ಮೈಸೂರು ಅಭಿವೃದ್ಧಿ: ಸಚಿವ ಮಹದೇವಪ್ಪ

ಗೃಹಜ್ಯೋತಿ ನೋಂದಣಿಯಲ್ಲಿ ತಾಂತ್ರಿಕ ತೊಂದರೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಣ್ಣಪುಟ್ಟತಾಂತ್ರಿಕ ತೊಂದರೆ ಇದೆ. ಇನ್ನೆರಡು ದಿನಗಳಲ್ಲಿ ಸಮಸ್ಯೆ ಪರಿಹಾರವಾಗುತ್ತದೆ. ನೋಂದಣಿ ಮಾಡಿಕೊಳ್ಳಲು ಗಡುವು ಹಾಕಿಲ್ಲ. ಆರು ತಿಂಗಳು ಬಿಟ್ಟು ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳಿದರು. ಅಕ್ಕಿ ಖರೀದಿ ಬಗ್ಗೆ ಮಾತನಾಡಿದ ಅವರು, ಬೇರೆ ಬೇರೆ ರಾಜ್ಯದಿಂದ ಸರ್ಕಾರ ಅಕ್ಕಿ ಖರೀದಿಗೆ ಸರ್ಕಾರ ಮುಂದಾಗಿದೆ. ಎಥೆನಾಲ್‌ಗೆ ಅಕ್ಕಿ ಹೆಚ್ಚು ಹೋಗುತ್ತಿದೆ. ಕೇಂದ್ರ ಸರ್ಕಾರ ಇದಕ್ಕೆ ಹೆಚ್ಚು ಪ್ರೋತ್ಸಾಹ ಕೊಡುತ್ತಿದೆ ಎಂದ ಅವರು, ವಿದ್ಯುತ್‌ ಬಿಲ್‌ ಏರಿಕೆ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುವುದನ್ನು ಬೆಂಬಲಿಸಿದರು. ಇದು ಹಿಂದಿನ ಸರ್ಕಾರದ ನಿರ್ಣಯ. ಬಿಲ್‌ ಜಾಸ್ತಿ ಆಗಿದ್ದರೆ ಅವರನ್ನೇ ಪ್ರಶ್ನೆ ಮಾಡಿ ಎಂದು ತಿರುಗೇಟು ನೀಡಿದರು.

click me!