ಮಹದಾಯಿ, ಕಳಸಾ ಬಂಡೂರಿ ಯೋಜನೆಯ ವಿಷಯದಲ್ಲಿ ಬಿಜೆಪಿ ಸರ್ಕಾರ ಎಂದಿಗೂ ರಾಜಕಾರಣ ಮಾಡಿಲ್ಲ. ಮೋದಿ ನೇತೃತ್ವದ ಬಿಜೆಪಿ ಸರ್ಕಾರವೇ ಡಿಪಿಆರ್‌ಗೆ ಅನುಮತಿ ನೀಡಿದೆ. ಯಾವುದೇ ಕಾರಣಕ್ಕೂ ಯೋಜನೆ ಜಾರಿಗೆ ನಾವು ಬದ್ಧ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದರು.
ಹುಬ್ಬಳ್ಳಿ (ಆ.20): ಮಹದಾಯಿ, ಕಳಸಾ ಬಂಡೂರಿ ಯೋಜನೆಯ ವಿಷಯದಲ್ಲಿ ಬಿಜೆಪಿ ಸರ್ಕಾರ ಎಂದಿಗೂ ರಾಜಕಾರಣ ಮಾಡಿಲ್ಲ. ಮೋದಿ ನೇತೃತ್ವದ ಬಿಜೆಪಿ ಸರ್ಕಾರವೇ ಡಿಪಿಆರ್‌ಗೆ ಅನುಮತಿ ನೀಡಿದೆ. ಯಾವುದೇ ಕಾರಣಕ್ಕೂ ಯೋಜನೆ ಜಾರಿಗೆ ನಾವು ಬದ್ಧ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದರು. ರೈತರಿಂದ ಮನವಿ ಸ್ವೀಕರಿಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರವೇ ಡಿಪಿಆರ್‌ಗೆ ಅನುಮತಿ ನೀಡಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಮಹದಾಯಿ ನೋಟಿಫಿಕೇಶನ್ ನಾವೇ ಮಾಡಿಸಿದೆವು. ಪರಿಸರ ವಿನಾಯಿತಿಯನ್ನೂ ಕೊಡಿಸಿದೆವು. ಗೆಜೆಟ್ ನೋಟಿಫಿಕೇಶನ್ ಜತೆ ಡಿಪಿಆರ್ ಅನುಮೋದನೆ ಪಡೆದುಕೊಳ್ಳಲಾಗಿದೆ. ಟೈಗರ್ ಕಾರಿಡಾರ್ ಮತ್ತು ಇಕೋ ಸೆನ್ಸಿಟಿವ್ ಝೋನ್ ಕಾರಣಕ್ಕಾಗಿ ಕಾಮಗಾರಿ ಆರಂಭಕ್ಕೆ ವಿಳಂಬವಾಗಿದೆ ಎಂದರು.
ಕೊಡಗು-ಮೈಸೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ನಾನೇ: ಪ್ರತಾಪ್ ಸಿಂಹ
ಈಗ ಹಸಿರು ನ್ಯಾಯಾಧಿಕರಣದ ಅನುಮತಿ ಸಿಗಬೇಕಿದೆ. ಕೇಂದ್ರದ ಅರಣ್ಯ ಮತ್ತು ಪರಿಸರ ಇಲಾಖೆ ಕೆಲ ಸ್ಪಷ್ಟೀಕರಣ ಕೇಳಿದೆ. ರಾಜ್ಯಮಟ್ಟದಲ್ಲಿ ವೈಲ್ಡ್‌ಲೈಫ್‌ಗೆ ಅನುಮತಿ ಕೊಟ್ಟು ಕೇಂದ್ರಕ್ಕೆ ಕಳುಹಿಸಬೇಕಿದೆ. ರಾಜ್ಯ ಸರ್ಕಾರ ಅನುಮತಿ ಕೊಡುವುದು ಬಾಕಿ ಇದೆ. ಕಳಸಾ- ಬಂಡೂರಿ ಯೋಜನೆ ವಿಚಾರದಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನಿಲುವು ಹೊಂದಿದೆ. ಯೋಜನೆ ಜಾರಿಗೆ ನಾವು ಎಲ್ಲ ರೀತಿಯ ತಯಾರಿಯಲ್ಲಿದ್ದೇವೆ. ಟ್ರಿಬ್ಯುನಲ್ ಆದೇಶದ ವಿರುದ್ಧ ಕರ್ನಾಟಕ ಸರ್ಕಾರದ ಜತೆ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿರುವುದು ವಿಳಂಬಕ್ಕೆ ಕಾರಣವಾಗಿದೆ ಎಂದು ವಿವರಿಸಿದರು.
ಸೌಜನ್ಯಾ ಅತ್ಯಾಚಾರಿಗಳಿಗೆ ‘ದೈವದ ಶಿಕ್ಷೆ’ ಕಾದಿದೆ: ಮಹೇಶ ಶೆಟ್ಟಿ
ನಾವು ಡಿಪಿಆರ್ ಅನುಮತಿ ನೀಡಿದ್ದನ್ನು ಗೋವಾ ಸರ್ಕಾರ ಆಕ್ಷೇಪಿಸಿದೆ. ಇದರಲ್ಲಿ ರಾಜಕೀಯದ ಪ್ರಶ್ನೆಯೇ ಇಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥವಾಗಿ ವಾದ ಮಂಡಿಸಲು ರಾಜ್ಯ ಸರ್ಕಾರಕ್ಕೂ ವಿನಂತಿಸಿದ್ದೇನೆ. ಕರ್ನಾಟಕ ವೈಲ್ಡ್‌ಲೈಫ್ ಬೋರ್ಡ್‌ನಲ್ಲಿ ಶಿಫಾರಸು ಮಾಡಬೇಕು. ಇದನ್ನು ಕೇಂದ್ರಕ್ಕೆ ಕಳುಹಿಸಿದರೆ ನಾವು ಖಂಡಿತ ಅನುಮತಿ ನೀಡುತ್ತೇವೆ. ಕೇಂದ್ರದಿಂದ ಯಾವುದೇ ಮೀನಮೇಷ ನಡೆಯುತ್ತಿಲ್ಲ. ಗ್ರೀನ್ ಟ್ರಿಬ್ಯುನಲ್ ಅಸ್ತಿತ್ವಕ್ಕೆ ಬಂದ ನಂತರ ಇದಕ್ಕೆ ನಿಬಂಧನೆಗಳು ಹೆಚ್ಚಾಗಿವೆ. ಯೋಜನೆ ಅನುಷ್ಠಾನಕ್ಕೆ ಎಲ್ಲ ರೀತಿಯ ಪ್ರಯತ್ನ ಮಾಡುತ್ತೇವೆ. ಮಹದಾಯಿ ಯೋಜನೆ ಜಾರಿಗೆ ನಾವು ಬದ್ಧರಿದ್ದೇವೆ ಎಂದು ಸಚಿವ ಜೋಷಿ ಸ್ಪಷ್ಟಪಡಿಸಿದರು.