ಕೇಂದ್ರದಲ್ಲಿ ರಚನೆಯಾಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ನೀಡುವಂತೆ ಯಾವುದೇ ಒತ್ತಡ ಹಾಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಮಂಡ್ಯ ಲೋಕಸಭಾ ಕ್ಷೇತ್ರದ ನೂತನ ಸಂಸದ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ನವದೆಹಲಿ (ಜೂ.08): ಕೇಂದ್ರದಲ್ಲಿ ರಚನೆಯಾಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ನೀಡುವಂತೆ ಯಾವುದೇ ಒತ್ತಡ ಹಾಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಮಂಡ್ಯ ಲೋಕಸಭಾ ಕ್ಷೇತ್ರದ ನೂತನ ಸಂಸದ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶುಕ್ರವಾರ ದೆಹಲಿಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ, ಸಚಿವ ಸ್ಥಾನದ ಕುರಿತು ನನಗೆ ಅಧಿಕೃತ ಮಾಹಿತಿ ಬಂದಿಲ್ಲ. ಆದರೂ ಸಹಯೋಗಿ ಪಕ್ಷಗಳಿಗೆ, ನಮಗೂ ಖಾತೆ ನೀಡುತ್ತಾರೆ ಎಂಬ ಮಾಹಿತಿ ಇದೆ.
ನಮ್ಮಿಂದ ಒಳ್ಳೆಯ ಕೆಲಸ ಮಾಡಲು ಸಾಧ್ಯ ಎಂಬುದು ಹೈಕಮಾಂಡ್‌ಗೆ ಗೊತ್ತಿದೆ. ರಾಜ್ಯ ಜನರಿಗೂ ವಿಶ್ವಾಸ ಇದೆ. ನಾಡಿನ ಜನತೆ, ದೇಶಕ್ಕೆ ಒಳಿತಾಗುವ ಖಾತೆ ಸಿಕ್ಕರೆ ಉತ್ತಮವಾಗಿ ಕೆಲಸ ಮಾಡಬಹುದಾಗಿದೆ. ಈ ಕುರಿತ ಅಂತಿಮ ತೀರ್ಮಾನ ಬಿಜೆಪಿ ವರಿಷ್ಠರಿಗೆ ಬಿಟ್ಟಿದ್ದು ಎಂದರು. ಇದೇ ವೇಳೆ ಡಾ. ಸಿ.ಎನ್.ಮಂಜುನಾಥ್ ಅವರಿಗೆ ಖಾತೆ ನೀಡುವ ಕುರಿತು ಬಿಜೆಪಿ ವರಿಷ್ಠರೇ ತೀರ್ಮಾನ ಮಾಡುತ್ತಾರೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ನಾನು ಈಗ 24*7 ರಾಜಕಾರಣಿ, ಸಿನಿಮಾ ಮಾಡೋದನ್ನು ಬಂದ್ ಮಾಡಿದ್ದೇನೆ: ನಿಖಿಲ್ ಕುಮಾರಸ್ವಾಮಿ
ಜನರ ಆರ್ಶೀವಾದದಿಂದ ಗೆದ್ದಿರುವೆ: ಲೋಕಸಭಾ ಚುನಾವಣೆಯಲ್ಲಿ ಜನರ ಆಶೀರ್ವಾದ ಹಾಗೂ ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷದ ಕಾರ್ಯಕರ್ತರ ಪರಿಶ್ರಮದಿಂದಾಗಿ ಜೆಡಿಎಸ್ ಎರಡು ಸ್ಥಾನ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿದ್ದೇವೆಯೇ ಹೊರತು, ಶತ್ರು ಭೈರವಿ ಯಾಗದಿಂದ ಅಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತೀಕ್ಷ್ಣವಾಗಿ ಹೇಳಿದ್ದಾರೆ.
ಮಂಗಳವಾರ ಮಂಡ್ಯ ಕ್ಷೇತ್ರದ ಫಲಿತಾಂಶ ಹೊರಬಿದ್ದ ಬಳಿಕ ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಭಾಗಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾವು ಯಾವುದೇ ಕುರಿ, ಮೇಕೆ, ಎಮ್ಮೆ ಕಡಿದು ಗೆದ್ದಿಲ್ಲ. ಕಾರ್ಯಕರ್ತರ ಶ್ರಮದಿಂದ ಗೆದ್ದಿದ್ದೇವೆ. ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಕ್ಷೇತ್ರಗಳಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿದ್ದಾರೆ ಎಂದು ಕಿಡಿಕಾರಿದರು.
ಮೋದಿ ಸರ್ಕಾರ ರಚನೆಗೂ ಮುನ್ನವೇ ಅಗ್ನಿವೀರ್ ಯೋಜನೆ ಬಗ್ಗೆ ಜೆಡಿಯು, ಎಲ್‌ಜೆಪಿ ಕ್ಯಾತೆ!
ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ, ಕುಮಾರಸ್ವಾಮಿ ಸೋಲುವುದೂ ಅಷ್ಟೇ ಸತ್ಯ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಈಗ ಅವರ ಪ್ರಕಾರ ಸೂರ್ಯ ಹುಟ್ಟುತ್ತಾನೋ ಇಲ್ಲವೋ ನೋಡೋಣ. ಮಂಡ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಜನರು ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಹಣದ ಹೊಳೆ ಹರಿಸಿ ಅಧಿಕಾರ ದುರುಪಯೋಗ ಮಾಡಿಕೊಂಡರೂ ಜನರು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಪ್ರೀತಿ, ವಿಶ್ವಾಸಕ್ಕೆ ಮನ್ನಣೆ ನೀಡಿದ್ದಾರೆ. ನನಗೆ ರಾಜಕೀಯವಾಗಿ ಶಕ್ತಿ ತುಂಬಿದ ಮಂಡ್ಯ ಯಾವತ್ತೂ ನನ್ನ ಕೈ ಬಿಡಲ್ಲ ಎಂದು ಭಾವುಕರಾಗಿ ನುಡಿದರು.