ನಾನು ಕೇಂದ್ರದಲ್ಲೇ ಇರುತ್ತೇನೆ. ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವೇ ಇಲ್ಲ. ನನಗೆ ಒಳ್ಳೆ ಖಾತೆ ಸಿಕ್ಕಿದೆ, ಅಲ್ಲಿಯೇ ಒಳ್ಳೆಯ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ ಕೇಂದ್ರ ಸಚಿವೆ ಸಚಿವೆ ಶೋಭಾ ಕರಂದ್ಲಾಜೆ
ಮೈಸೂರು(ಅ.25): ನಾನು ಕೇಂದ್ರ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ, ರಾಜ್ಯ ರಾಜಕಾರಣಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಈ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್‌ನಲ್ಲಿ ತಾವಿಲ್ಲ ಎಂದು ಪರೋಕ್ಷವಾಗಿ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೇಂದ್ರದಲ್ಲೇ ಇರುತ್ತೇನೆ. ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವೇ ಇಲ್ಲ. ನನಗೆ ಒಳ್ಳೆ ಖಾತೆ ಸಿಕ್ಕಿದೆ, ಅಲ್ಲಿಯೇ ಒಳ್ಳೆಯ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಶೋಭಾ, ವಿಜಯೇಂದ್ರ ಹೆಸರು ಮುಂಚೂಣಿಯಲ್ಲಿ
ರಾಜ್ಯಾಧ್ಯಕ್ಷ ಸ್ಥಾನದ ವಿಚಾರವಾಗಿ ನನಗೆ ಯಾವ ವರಿಷ್ಠರಿಂದಲೂ, ಯಾವ ಸೂಚನೆಯೂ ಬಂದಿಲ್ಲ. ಯಾವ ಚರ್ಚೆಯೂ ಆಗಿಲ್ಲ. ಇವೆಲ್ಲ ಸುದ್ದಿ ಹೇಗೆ ಬರುತ್ತಿವೆಯೋ ನನಗೆ ಗೊತ್ತಿಲ್ಲ. ನನ್ನ ಇಚ್ಛೆ ಇರುವುದು ಮುಂದಿನ ಬಾರಿಯೂ ಮೋದಿ ಪ್ರಧಾನಿ ಆಗಬೇಕು ಎಂಬುದು. ಆ ಕುರಿತೇ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದರು.