ಕಾಂಗ್ರೆಸ್ಸಿನಲ್ಲಿ ಯಾವುದೇ ಬಂಡಾಯ ಇಲ್ಲ: ಶಾಮನೂರ ಶಿವಶಂಕರಪ್ಪ

By Kannadaprabha News  |  First Published Oct 21, 2023, 1:51 PM IST

ಕಾಂಗ್ರೆಸ್ಸಿನಲ್ಲಿ ಯಾವುದೇ ತೆರನಾದ ಬಂಡಾಯ ಇಲ್ಲ ಎಂದು ಮಾಜಿ ಸಚಿವ, ಶಾಸಕ ಶಾಮನೂರ ಶಿವಶಂಕರಪ್ಪ ಸ್ಪಷ್ಟಪಡಿಸಿದರು. ನಗರದ ಬಿಎಲ್‌ಡಿಇ ಡೀಮ್ಡ್‌ ವಿವಿ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜೊತೆಗೆ ಅವರು ಮಾತನಾಡಿ, ಸಚಿವ ಸತೀಶ ಜಾರಕಿಹೊಳಿ ಅವರ ಬಂಡಾಯ ವಿಚಾರ ನನಗೆ ಗೊತ್ತಿಲ್ಲ. 
 


ವಿಜಯಪುರ (ಅ.21): ಕಾಂಗ್ರೆಸ್ಸಿನಲ್ಲಿ ಯಾವುದೇ ತೆರನಾದ ಬಂಡಾಯ ಇಲ್ಲ ಎಂದು ಮಾಜಿ ಸಚಿವ, ಶಾಸಕ ಶಾಮನೂರ ಶಿವಶಂಕರಪ್ಪ ಸ್ಪಷ್ಟಪಡಿಸಿದರು. ನಗರದ ಬಿಎಲ್‌ಡಿಇ ಡೀಮ್ಡ್‌ ವಿವಿ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜೊತೆಗೆ ಅವರು ಮಾತನಾಡಿ, ಸಚಿವ ಸತೀಶ ಜಾರಕಿಹೊಳಿ ಅವರ ಬಂಡಾಯ ವಿಚಾರ ನನಗೆ ಗೊತ್ತಿಲ್ಲ. ಯಾರೂ ಬಂಡಾಯ ಏಳಲ್ಲ. ಪ್ರತಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ ಎಂದು ಹೇಳಿದರು. ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಕಲ್ಪಿಸಿಲ್ಲ ಎಂಬುವುದು ಆಗಿನ ಮಾತು. 

ಈಗ ಅದನ್ನೇ ಹೇಳುತ್ತ ಹೋಗುವುದು ಸರಿಯಲ್ಲ. ಸರಿಪಡಿಸಿಕೊಂಡು ಹೋಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಎರಡು ವರ್ಷಗಳ ನಂತರ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎಂಬ ರಾಮದುರ್ಗ ಕೈ ಶಾಸಕ ಅಶೋಕ ಪಟ್ಟಣ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅವೆಲ್ಲ ಇಮೇಜ್‌, ಕನಸು ಎಂದು ಉತ್ತರಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮುಂದಿನ ಮುಖ್ಯಮಂತ್ರಿಯಾಗುತ್ತಾರೆಂಬ ಕೆಲ ಶಾಸಕರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಅದೆಲ್ಲಾ ಈಗೇಕೆ ಮುಂದೆ ಬಂದಾಗ ನೋಡೋಣ ಎಂದಷ್ಟೇ ಹೇಳಿದರು.

Latest Videos

undefined

ರಾಜ್ಯ ಸರ್ಕಾರದಿಂದ ಜನರ ನಂಬಿಕೆಗೆ ದ್ರೋಹ: ಶಾಸಕ ಸಿದ್ದು ಸವದಿ

ವಿಜಯಪುರದ ಬಿಎಲ್‌ಡಿಇ ಡೀಮ್ಡ್ ವಿವಿಯಿಂದ ಎಸ್ಸೆಸ್‌ಗೆ ಗೌರವ ಡಾಕ್ಟರೇಟ್: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪನವರಿಗೆ ವಿಜಯಪುರದ ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಶ್ರೀ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಿಂದ ಬಿಎಲ್‌ಡಿಇ ಸಭಾಂಗಣದಲ್ಲಿ ನಡೆದ ಡೀಮ್ಡ್ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವದಲ್ಲಿ ಶಾಮನೂರು ಶಿವಶಂಕರಪ್ಪನವರ ಸಮಾಜ ಸೇವೆ ಮತ್ತು ಶಿಕ್ಷಣ ಸೇವೆಯನ್ನು ಗುರುತಿಸಿ ಈ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಮತ್ತು ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಶಾಮನೂರು ಶಿವಶಂಕರಪ್ಪನವರಿಗೆ ಪದವಿ ನೀಡಿ ಗೌರವಿಸಿದರು.

ರಾಜ್ಯದಲ್ಲಿನ ಬರಗಾಲದಿಂದ ಶಾಸಕರಿಗೆ ಬಿಪಿ, ಶುಗರ್ ಹೆಚ್ಚಳ: ಎಂಎಲ್‌ಎ ಶಾಂತನಗೌಡ

ಎಸ್ಸೆಸ್‌ಗೆ 4 ಗೌರವ ಡಾಕ್ಟರೇಟ್: ಶಾಮನೂರು ಶಿವಶಂಕರಪ್ಪ ಸಮಾಜಸೇವೆ ಮತ್ತು ಶಿಕ್ಷಣ ಸೇವೆಯನ್ನು ಗುರುತಿಸಿ ಇದುವರೆಗೂ ಒಟ್ಟು 4 ಗೌರವ ಡಾಕ್ಟರೇಟ್‌ಗಳು ಸಂದಿವೆ. 15 ವರ್ಷಗಳ ಹಿಂದೆ ಮೊದಲ ಬಾರಿಗೆ ಕುವೆಂಪು ವಿಶ್ವವಿದ್ಯಾಲಯ ನಂತರ ದಾವಣಗೆರೆ ವಿಶ್ವವಿದ್ಯಾಲಯ, ಕಳೆದ 2 ವರ್ಷಗಳ ಹಿಂದೆ ಶರಣ ಬಸವ ಡೀಮ್ಡ್ ವಿಶ್ವವಿದ್ಯಾಲಯ ಹಾಗೂ ಇಂದು ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಈ ಸಂದರ್ಭದಲ್ಲಿ ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಆರ್.ಎಸ್. ಮುಧೋಳ್, ಸಮಕುಲಾಧಿಪತಿಗಳಾದ ವೈ.ಎಂ. ಜಯರಾಜ್, ಅರುಣ್ ಸಿ.ಇನಾಂದಾರ್, ವಿಧಾನಪರಿಷತ್ ಸದಸ್ಯ ಸುನೀಲ್‌ಗೌಡ ಪಾಟೀಲ್, ಗಣ್ಯರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

click me!