ಕೋಮು ಸೂಕ್ಷ್ಮ ಪ್ರದೇಶ ಬಿಂಬಿಸಲು ಕಾರ್ಯಪಡೆ ರಚಿಸಿಲ್ಲ: ಪರಮೇಶ್ವರ್

Kannadaprabha News   | Kannada Prabha
Published : Jun 15, 2025, 06:37 AM IST
Dr G parameshwar

ಸಾರಾಂಶ

ಕರಾವಳಿ ಭಾಗದಲ್ಲಿ ನಡೆದಿರುವ, ನಡೆಯುತ್ತಿರುವ ಘಟನಾವಳಿಗಳ ಆಧಾರದಲ್ಲಿ ಕೋಮು ಸಂಘರ್ಷಗಳ ತಡೆಗಾಗಿ ವಿಶೇಷ ಕಾರ್ಯಪಡೆ ರಚಿಸಲಾಗಿದೆ. ಯಾವುದೇ ಜಿಲ್ಲೆಯನ್ನು ಕೋಮುಸೂಕ್ಷ್ಮ ಪ್ರದೇಶ ಎಂದು ಬಿಂಬಿಸಲು ನಾವು ಈ ಕಾರ್ಯಪಡೆ ರಚಿಸಿಲ್ಲ ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ಉಡುಪಿ (ಜೂ.15): ಕರಾವಳಿ ಭಾಗದಲ್ಲಿ ನಡೆದಿರುವ, ನಡೆಯುತ್ತಿರುವ ಘಟನಾವಳಿಗಳ ಆಧಾರದಲ್ಲಿ ಕೋಮು ಸಂಘರ್ಷಗಳ ತಡೆಗಾಗಿ ವಿಶೇಷ ಕಾರ್ಯಪಡೆ ರಚಿಸಲಾಗಿದೆ. ಯಾವುದೇ ಜಿಲ್ಲೆಯನ್ನು ಕೋಮುಸೂಕ್ಷ್ಮ ಪ್ರದೇಶ ಎಂದು ಬಿಂಬಿಸಲು ನಾವು ಈ ಕಾರ್ಯಪಡೆ ರಚಿಸಿಲ್ಲ ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ವಿಶೇಷ ಕಾರ್ಯಪಡೆಗೆ ಉಡುಪಿ ಜಿಲ್ಲೆಯ ಸೇರ್ಪಡೆ ವಿರೋಧಿಸಿ ಶಾಸಕ ಯಶ್ಪಾಲ್ ಸುವರ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ಪಡೆಯ ಉಪಯೋಗ ಆಗದಿರುವಂತೆ ನೋಡಿಕೊಳ್ಳಿ ಎಂದು ಸಾರ್ವಜನಿಕರಿಗೂ ನಾನು ಮನವಿ ಮಾಡಿದ್ದೇನೆ. ಕೋಮುವಾದಕ್ಕೆ ಸಂಬಂಧಪಟ್ಟ ಘಟನೆ ನಡೆಯದಿದ್ದಲ್ಲಿ ಈ ಕಾರ್ಯಪಡೆ ಅಗತ್ಯ ಬರುವುದಿಲ್ಲ. ಇದರ ಅಗತ್ಯ ಬರದಿದ್ದಲ್ಲಿ ಕೋಮುವಾದ ಸಂಪೂರ್ಣ ಹೋಗಿದೆ ಎಂಬ ಅರ್ಥವೇ ಬರುತ್ತದೆ ಎಂದರು. ಈ ಕಾರ್ಯಪಡೆಯಿಂದ ಜಿಲ್ಲೆಯ ಘನತೆಗೆ ಧಕ್ಕೆ ಬರುವ ಪ್ರಮೇಯವೇ ಇಲ್ಲ.

ನಕ್ಸಲರ ನಿಗ್ರಹಕ್ಕಾಗಿ ಕಾರ್ಕಳ ಭಾಗದಲ್ಲಿ ಎಎನ್‌ಎಫ್ ಮುಖ್ಯ ಕಚೇರಿ ಮಾಡಿದ್ದೆವು. ಎಎನ್‌ಎಫ್‌ನಿಂದ ಉಡುಪಿಯ ಘನತೆ ಕಡಿಮೆ ಆಗಿದೆಯಾ ಎಂದು ಪ್ರಶ್ನಿಸಿದ ಅವರು, ನಕ್ಸಲರಿಂದ ಬಹಳಷ್ಟು ಜನರ ಹತ್ಯೆ ಆಗಿತ್ತು. ಅಂತಹ ಪರಿಸ್ಥಿತಿಯಲ್ಲಿ ಉಡುಪಿಯಲ್ಲಿ ಎಎನ್‌ಎಫ್ ಕಚೇರಿ ಆರಂಭಿಸಿದ್ದೆವು. ಇದರಿಂದ ಉಡುಪಿ ಜನಸಮುದಾಯದ ಘನತೆಗೆ ಧಕ್ಕೆ ಆಗಿಲ್ಲ ಎಂದರು. ಕಮಿಷನ‌ರ್ ಅವರು ಕಾರ್ಯಪಡೆಯ ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ನೋಡಿಕೊಳ್ತಾರೆ. ಐಜಿ ಅವರು ಮೂರು ಜಿಲ್ಲೆಗಳನ್ನು ನಿರ್ವಹಣೆ ಮಾಡುತ್ತಾರೆ. ಏನಾದರೂ ಸಮಸ್ಯೆಯಾದರೆ ಈ ಕಾರ್ಯಪಡೆ ಕಾರ್ಯಾಚರಣೆ ಮಾಡಲಿದೆ ಎಂದು ಹೇಳಿದರು.

ತಜ್ಞರ ವರದಿ ಪಡೆದೇ ಯೋಜನೆ ಅನುಷ್ಠಾನ: ಎಕ್ಸ್ ಪ್ರೆಸ್ ಕೆನಾಲ್ ಯೋಜನೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಮುನ್ನ ತಜ್ಞರ ವರದಿಯನ್ನು ಪಡೆದುಕೊಂಡೇ ಈ ಯೋಜನೆಯನ್ನು ಅನುಷ್ಠಾನ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಅವರು ಸುದ್ದಿಗಾರರೊಂದಿಗೆ ಮಾತನಾಡಿ ಪ್ರಾರಂಭದಲ್ಲಿ ಜನಪ್ರತಿನಿಧಿಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ 2024ರ ಸೆಪ್ಟಂಬರ್ 3ರಂದು ಶಾಸಕರಾದ ಬಿ.ಸುರೇಶಗೌಡ, ಜಿ.ಬಿ.ಜ್ಯೋತಿಗಣೇಶ್, ಎಂ.ಟಿ.ಕೃಷ್ಣಪ್ಪ, ಡಾ. ರಂಗನಾಥ ಅವರ ಸಮ್ಮುಖದಲ್ಲಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಿ ಮಾಹಿತಿ ನೀಡಿದಾಗ ಈ ಶಾಸಕರು ನಮ್ಮ ಭಾಗಕ್ಕೆ ನೀರನ್ನು ಕೊರತೆ ಬಾರದಂತೆ ತೆಗೆದುಕೊಂಡು ಹೋಗುವುದಾದರೆ ನಮ್ಮ ಅಭ್ಯಂತರವಿಲ್ಲ ಎಂದು ತಿಳಿಸಿದ್ದರು.

ಕುಣಿಗಲ್‌ಗೆ ಚಾನಲ್ ಇದ್ದರೂ 2014 ರಿಂದ 2024ರವರೆಗೆ ಚಾನಲ್ ಮೂಲಕ ಹರಿದಿರುವ ನೀರಿನ ಪ್ರಮಾಣವನ್ನು ತೆಗೆದುಕೊಂಡರೆ, ಒಂದು ಬಾರಿಯೂ ಪೂರ್ಣ ಪ್ರಮಾಣದ ನೀರನ್ನು ಒದಗಿಸಲಾಗಿಲ್ಲ ಎಂದರು. 0ನೇ ಕಿ.ಮೀ.ನಲ್ಲಿ ಆಧುನಿಕ ಸ್ಕಾಡ ಮೀಟರ್ ಗೇಟ್ ಅನ್ನು ಅಳವಡಿಸಿ ಎಕ್ಸ್ ಪ್ರೆಸ್ ಕೆನಾಲ್‌ನಲ್ಲಿ ಹರಿಯುವ ನೀರಿನ ಪ್ರಮಾಣವನ್ನು ನಿಖರವಾಗಿ ಲೆಕ್ಕ ತೆಗೆದುಕೊಳ್ಳಲಾಗುವುದು, ಈಗಿನ ನಾಲೆಗೆ ಸಮನಾಂತರದಲ್ಲೇ ಎಕ್ಸ್ ಪ್ರೆಸ್ ಕೆನಾಲ್ ನಾಲಾ ಪೈಪ್‌ ಗಳನ್ನು ಅಳವಡಿಸುವುದರಿಂದ ಹೆಚ್ಚಿನ ರಭಸದಿಂದ ಹೆಚ್ಚು ನೀರು ಹರಿಯಲು ಸಾಧ್ಯವಿಲ್ಲ, ಅದರಿಂದ ಮುಂದಕ್ಕೆ ಈಗ ಹರಿಯುತ್ತಿರುವ 900 ಕ್ಯೂಸೆಕ್ಸ್ ನೀರು ಯಾವುದೇ ಅಡೆತಡೆಯಿಲ್ಲದೆ ಸರಾಗವಾಗಿ ಹರಿಯಲಿದೆ ಇದರಲ್ಲಿ ಯಾವುದೇ ತೊಂದರೆಯಾಗುವುದಿಲ್ಲ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!