ಸಿದ್ದರಾಮಯ್ಯ ಸರ್ಕಾರ ಉರುಳಿಸಲು ಯಾರಿಂದಲೂ ಸಾಧ್ಯವಿಲ್ಲ: ಸಚಿವ ಎಂ.ಸಿ.ಸುಧಾಕರ್

Published : Nov 02, 2023, 10:49 AM IST
ಸಿದ್ದರಾಮಯ್ಯ ಸರ್ಕಾರ ಉರುಳಿಸಲು ಯಾರಿಂದಲೂ ಸಾಧ್ಯವಿಲ್ಲ: ಸಚಿವ ಎಂ.ಸಿ.ಸುಧಾಕರ್

ಸಾರಾಂಶ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್‌ನ ಯಾವ ಶಾಸಕರು ಸಿಎಂ ಬದಲಾವಣೆ ಬಯಸುತ್ತಿಲ್ಲ. ವಿರೋಧ ಪಕ್ಷದ ಶಾಸಕರು ಮಾತ್ರ ವಿನಾಕರಣ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಹೇಳಿದರು. 

ಶ್ರೀನಿವಾಸಪುರ (ನ.02): ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್‌ನ ಯಾವ ಶಾಸಕರು ಸಿಎಂ ಬದಲಾವಣೆ ಬಯಸುತ್ತಿಲ್ಲ. ವಿರೋಧ ಪಕ್ಷದ ಶಾಸಕರು ಮಾತ್ರ ವಿನಾಕರಣ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಹೇಳಿದರು. ಅವರು ಬುಧವಾರ ಶ್ರೀನಿವಾಸಪುರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಅಧಿಕಾರ ಸಿಕ್ಕಿಲ್ಲ ಎನ್ನುವ ಕಾರಣಕ್ಕೆ ಹತಾಶೆಯಿಂದ ವಿರೋಧ ಪಕ್ಷದವರು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ 136 ಶಾಸಕರು ಒಗ್ಗಟ್ಟಾಗಿದ್ದೀವಿ, ಯಾರು ಎನೇ ಹೇಳಲಿ ಸುಭದ್ರ ಸರ್ಕಾರದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದೇವೆ ಎಂದರು.

ದೇಶದಲ್ಲಿ ಮೋದಿ ಆಡಳಿತಕ್ಕೆ ಜನ ಬೆಸೆತ್ತಿದ್ದಾರೆ. ಅವರ ಹವಾ ಕಡಿಮೆಯಾಗುತ್ತಿದೆ. ನಮ್ಮ ಸರ್ಕಾರಕ್ಕೆ ಲೋಕಸಭೆ ಚುನಾವಣೆ ಬಹಳ ಮಹತ್ವದಾಗಿದೆ ರಾಜ್ಯದಲ್ಲಿ ಪ್ರತಿ ಲೋಕಸಭೆ ಕ್ಷೇತ್ರದಲ್ಲೂ ಗೆಲ್ಲುವ ಅಭ್ಯರ್ಥಿಗಳನ್ನೆ ಕಣಕ್ಕೆ ಇಳಿಸುತ್ತೇವೆ ಕೋಲಾರ ಕ್ಷೇತ್ರದಲ್ಲೂ ಉತ್ತಮ ಅಭ್ಯರ್ಥಿಯನ್ನು ಸ್ಪರ್ಧೆಗೆ ಇಳಿಸುತ್ತೇವೆ ಎಂದರು. ಶ್ರೀನಿವಾಸಪುರದಲ್ಲಿ ಕೊಲೆಯಾದ ಕಾಂಗ್ರೆಸ್ ಮುಖಂಡ ಶ್ರೀನಿವಾಸನ್ ಮನೆಗೆ ಭೇಟಿ ಕೊಟ್ಟು ಅವರ ಪತ್ನಿ ಡಾ.ಚಂದ್ರಕಲಾ ಮತ್ತು ಅವರ ಮಕ್ಕಳಿಗೆ ಸಚಿವರು ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಭಾಸ್ಕರ್, ಉನಿಕಿಲಿ ನಾಗರಾಜ್, ಅಂಬೇಡ್ಕರ್ ಪಾಳ್ಯ ವಿ.ಮುನಿರಾಜು, ಮತ್ತಿತರರು ಇದ್ದರು.

ಸ್ವಪಕ್ಷೀಯರಿಂದಲೇ ಕಾಂಗ್ರೆಸ್ ಸರ್ಕಾರ ಬೀಳಲಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್‌

ನೆಲದ ಕಾನೂನು ಗೌರವಿಸದವರ ವಿರುದ್ಧ ಕಾನೂನು ಕ್ರಮ: ಈ ನೆಲೆದ ಕಾನೂನಿನ ಮೇಲೆ ಗೌರವವಿಟ್ಟು ನಡೆದಾಗ ಮಾತ್ರ ಅಂತಹವರನ್ನು ಬೆಂಬಲಿಸುತ್ತೇನೆ. ಈ ನೆಲದ ಕಾನೂನನ್ನು ಬಿಟ್ಟು ನಡೆದಾಗ ಅಂತಹವರನ್ನು ಗೌರವಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲವೆಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು. ನಗರದ ಗಜಾನನ ವೃತ್ತದಲ್ಲಿ ಜೆಡಿಎಸ್ ನಗರಸಭಾ ಸದಸ್ಯ ಅಗ್ರಹಾರ ಮುರಳಿ ಮೇಲೆ ಮಾರಾಣಾಂತಿಕ ಹಲ್ಲೆ ನಡೆದಿರುವ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಕಾನೂನು ಕೈಗೆತ್ತಿಕೊಳ್ಳುವವರು ಯಾರೇ ಆದರೂ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ರಕ್ಷಣಾಧಿಕಾರಿ ನಾಗೇಶ್‌ರವರಿಗೆ ಸೂಚನೆ ನೀಡಿದ್ದೇನೆಂದರು.

ಇಂಜಿನಿಯರ್‌ಗಳ ಕಳ್ಳಾಟದಿಂದಾಗಿ ಸಾವಿರಾರು ಎಕರೆ ಬೆಳೆಹಾನಿ: ಕುಡಿಯಲು ಸಹ ನೀರು ಇಲ್ಲದೆ ರೈತರ ಗೋಳಾಟ!

ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಕಾನೂನು ಉಲ್ಲಂಘಿಸುವವರು ನನ್ನ ಜೊತೆ ಗುರ್ತಿಸಿಕೊಂಡಿದ್ದರೂ ಮತ್ತೊಬ್ಬರ ಜೊತೆ ಗುರ್ತಿಸಿಕೊಂಡವರಿಗೂ ಕಾನೂನು ಎಲ್ಲರಿಗೂ ಒಂದೇ, ಕಾನೂನು ಕೈಗೆತ್ತಿಕೊಳ್ಳುವವರ, ಅಶಾಂತಿ ವಾತಾವರಣ ಸೃಷ್ಟಿಸುವ, ಗಲಭೆಯಂತಹ ಸ್ಥಿತಿಯನ್ನು ಉಂಟು ಮಾಡುವವರ ವಿರುದ್ಧ ನಿರ್ಲಕ್ಷ್ಯ ಮಾಡದೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಯಾರೇ ಆಗಲಿ ಕಾನೂನನ್ನು ಕೈಗೆತ್ತಿಕೊಳ್ಳುವುದು ಸರಿಯಲ್ಲ, ಎಷ್ಟೆ ವೈಯುಕ್ತಿಕ ಸಮಸ್ಯೆ, ದ್ವೇಷವಿದ್ದರೂ ಇದರ ನಿವಾರಣೆಗೆಂದು ಪೊಲೀಸ್ ಠಾಣೆ ಮತ್ತಿತರರ ಸಂಸ್ಥೆಗಳು ಕಾರ್ಯನಿರ್ವಹಿಸುತ್ತವೆ. ಅಲ್ಲಿ ಅವುಗಳನ್ನು ಬಗೆಹರಿಸಿಕೊಳ್ಳಬೇಕು. ಈ ರೀತಿ ಬೀದಿಕಾಳಗ ಮಾಡುವುದು ಇನ್ನೊಬ್ಬರ ಪ್ರಾಣಕ್ಕೆ ಧಕ್ಕೆ ಉಂಟು ಮಾಡುವುದನ್ನು ಖಂಡಿಸುತ್ತೇನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೀಚ್‌ಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ಬಗ್ಗೆ ಚರ್ಚೆ: ಡಿ.ಕೆ.ಶಿವಕುಮಾರ್‌
ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌