DK Shivakumar: ವಾಸ್ತು ಪ್ರಕಾರ ವಿಧಾನಸೌಧದ ಸಿಎಂ ಕಚೇರಿಯಲ್ಲಿ ಅಜ್ಜಯ್ಯನ ಫೋಟೋ!

Kannadaprabha News   | Kannada Prabha
Published : Jun 03, 2026, 09:00 AM IST
Nonavinakere Ajjayya photo in Vidhana Soudha CM office according to Vastu

ಸಾರಾಂಶ

ಡಿ.ಕೆ.ಶಿವಕುಮಾರ್‌ ಅವರ ಆಪ್ತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಆರಾಧ್ಯ ಅವರು ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕೊಠಡಿಯ ವಾಸ್ತು ಪರಿಶೀಲನೆ ನಡೆಸಿದ್ದಾರೆ. ಡಿಕೆಶಿ ಆರಾಧ್ಯ ದೈವ ನೊಣವಿನಕೆರೆ ಅಜ್ಜಯ್ಯನ ಫೋಟೋ ಇಟ್ಟು ವಿಶೇಷ ಪೂಜೆ ನೆರವೇರಿಸಲಾಗಿದೆ.

ಬೆಂಗಳೂರು (ಜೂ.3): ವಿಧಾನಸೌಧದ ಮೂರನೇ ಮಹಡಿಯಲ್ಲಿನ ಮುಖ್ಯಮಂತ್ರಿ ಅವರ ಕೊಠಡಿಯ ವಾಸ್ತುವನ್ನು ಡಿ.ಕೆ.ಶಿವಕುಮಾರ್‌ ಅವರ ಆಪ್ತ ಜ್ಯೋತಿಷಿ, ವಾಸ್ತು ತಜ್ಞ ಆರಾಧ್ಯ ಅವರು ಮಂಗಳವಾರ ಪರಿಶೀಲನೆ ನಡೆಸಿದರು. 

ವಾಸ್ತು ಪರಿಶೀಲನೆ ವೇಳೆ ಮುಖ್ಯಮಂತ್ರಿ ಅವರ ಕೊಠಡಿಯಲ್ಲಿದ್ದವರೆಲ್ಲರನ್ನೂ ಹೊರಗೆ ಕಳುಹಿಸಿ ಬಾಗಿಲು ಹಾಕಲಾಗಿತ್ತು. ಆರಾಧ್ಯ ಅವರು ಕೊಠಡಿಯ ಪ್ರತಿಯೊಂದು ಅಂಶವನ್ನೂ ಪರಿಶೀಲಿಸಿದರು. ಈ ವೇಳೆ ಕೆಲ ಬದಲಾವಣೆಗೆ ಸೂಚಿಸಿದ್ದಾರೆ. ಅದರಂತೆ ಕೊಠಡಿಯಲ್ಲಿನ ಪೀಠೋಪಕರಣಗಳನ್ನು ಇಡುವ ಸ್ಥಳ ಸೇರಿ ಮತ್ತಿತರ ಅಂಶಗಳಲ್ಲಿ ಬದಲಾವಣೆ ಮಾಡಲಾಗುತ್ತಿದೆ.

ಸಿಎಂ ಕೊಠಡಿಯಲ್ಲಿ ಅಜ್ಜಯ್ಯ:

ಲೋಕಸಭವನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನದ ನಂತರ ವಿಧಾನಸೌಧಕ್ಕೆ ಡಿ.ಕೆ.ಶಿವಕುಮಾರ್ ಆಗಮಿಸಲಿದ್ದಾರೆ. ಹೀಗಾಗಿ ವಿಧಾನಸೌಧ ಪ್ರವೇಶ ದ್ವಾರ ಹಾಗೂ ವಿಧಾನಸೌಧದ ಮೂರನೇ ಮಹಡಿಯ ಮುಖ್ಯಮಂತ್ರಿ ಅವರ ಕೊಠಡಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದೆ. ಜತೆಗೆ, ಡಿ.ಕೆ.ಶಿವಕುಮಾರ್‌ ಅವರ ಆರಾಧ್ಯ ದೈವ ನೊಣವಿನಕೆರೆ ಅಜ್ಜಯ್ಯ ಅವರ ಭಾವಚಿತ್ರ ಸೇರಿ ದೇವರ ಫೋಟೋಗಳನ್ನಿಟ್ಟು, ವಿಶೇಷ ಪೂಜೆ ನೆರವೇರಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

DK Shivakumar: ಡಿಕೆಶಿವಕುಮಾರ್ ಮುಖ್ಯಮಂತ್ರಿ ಪದಗ್ರಹಣಕ್ಕೆ ದೆಹಲಿಯಿಂದ ಗಣ್ಯರ ದಂಡೇ ಬರುತ್ತಿದೆ!
West Bengal ಬಿಜೆಪಿ ಸರ್ಕಾರದ ಭಯ; ಜನರ ದಾಳಿ ಭೀತಿಗೆ ಹೆದರಿ ಲಂಚದ ಹಣ ವಾಪಸ್‌ ಕೊಟ್ಟ ಟಿಎಂಸಿ ಪುಡಾರಿಗಳು! (ವಿಡಿಯೋ)