ಮುಂದಿನ ಮುಖ್ಯಮಂತ್ರಿ ಬಗ್ಗೆ ಸ್ಪಷ್ಟನೆ ಕೊಟ್ಟ ಪ್ರಹ್ಲಾದ್ ಜೋಶಿ

By Suvarna NewsFirst Published Jul 24, 2021, 6:13 PM IST
Highlights

* ಬಿಎಸ್ ಯಡಿಯೂರಪ್ಪ ಅವರ ಬದಲಾವಣೆ
* ಮುಂದಿನ ಮುಖ್ಯಮಂತ್ರಿ ರೇಸ್‌ನಲ್ಲಿ ಕೇಂದ್ರ ಸಚಿವ  ಪ್ರಹ್ಲಾದ್ ಜೋಶಿ ಹೆಸರು
* ಈ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ಕೊಟ್ಟ ಪ್ರಹ್ಲಾದ್ ಜೋಶಿ 

ನವದೆಹಲಿ, (ಜು.24): ಸಿಎಂ ಬಿಎಸ್ ಯಡಿಯಯೂರಪ್ಪ ಬದಲಾವಣೆ ಖಚಿತ ಎನ್ನಲಾಗುತ್ತಿದ್ದಂತೆಯೇ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ  ಹಲವು ಹೆಸರುಗಳು ಕೇಳಿಬರುತ್ತಿವೆ. ಅದರಲ್ಲೂ ಮುಖ್ಯವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೆಸರು ಬಲವಾಗಿ ಕೇಳಿಬರುತ್ತಿದೆ.

ಈ ಬಗ್ಗೆ ಪ್ರಹ್ಲಾದ್ ಜೋಶಿ ಅವರನ್ನು ಸುದ್ದಿಗಾರರು ಪ್ರಶ್ನಿಸಿದಾಗ, ಈ ಬಗ್ಗೆ ತಮ್ಮೊಂದಿಗೆ ಯಾರೂ ಮಾತನಾಡಿಲ್ಲ. ಬಿಎಸ್​ವೈರನ್ನು ರಾಜೀನಾಮೆ ನೀಡಲು ಕೇಳಿದ್ದಾರೋ ಇಲ್ಲವೋ ಎಂಬ ಬಗ್ಗೆಯೂ ತಮಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಹೊಸ ಸಿಎಂ ಹುದ್ದೆ ಯಾವ ಜಾತಿಗೆ? ಮೋದಿ, ಶಾ ಹೊಸ ಪ್ರಯೋಗ?

ಯಡಿಯೂರಪ್ಪ ಸ್ಥಾನವನ್ನು ನೀವು ಪಡೆಯಬಹುದು ಎನ್ನುವುದರ ಬಗ್ಗೆ ಏನು ಹೇಳುತ್ತೀರಿ ಎಂಬ ಪ್ರಶ್ನೆಗೆ 'ಆ ಬಗ್ಗೆ ಯಾರೂ ನನ್ನೊಂದಿಗೆ ಮಾತನಾಡಿಲ್ಲ. ಮಾಧ್ಯಮದವರು ಮಾತ್ರ ಅದನ್ನು ಚರ್ಚಿಸುತ್ತಿದ್ದಾರೆ. ನನ್ನೊಂದಿಗೆ ಯಾರೂ ಮಾತಾಡಿಲ್ಲವಾದ್ದರಿಂದ, ಅದಕ್ಕೆ ನಾನು ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ' ಎಂದು ಜೋಶಿ ಉತ್ತರಿಸಿದರು.

ಕಾಲದಿಂದ ಕಾಲಕ್ಕೆ ಬೇರೆ ಬೇರೆ ನಾಯಕತ್ವ ಇದೆ. ರಾಜನಾಥ್ ಸಿಂಗ್ ಅವರಿದ್ದರು, ನಂತರ ನಿತಿನ್ ಗಡ್ಕರಿ ಬಂದರು. ಅವರ ನಂತರ ಅಮಿತ್ ಷಾ ನಾಯಕತ್ವ ವಹಿಸಿಕೊಂಡರೆ, ಈಗ ಜೆ.ಪಿ.ನಡ್ಡಾ ಇದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ, ವರಿಷ್ಠ ನಾಯಕರಾಗಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್​ ಶಾ ಇದ್ದಾರೆ. ಅವರು ನಿರ್ಧರಿಸುತ್ತಾರೆ' ಎಂದು ಹೇಳಿದರು.

click me!