ಲೋಕಸಭೆ ಚುನಾವಣೆಗೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಲ್ಲ: ಎಂಟಿಬಿ ನಾಗರಾಜ್ ಸ್ಪಷ್ಟನೆ

By Govindaraj S  |  First Published Mar 9, 2024, 12:27 PM IST

ನಾನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಲ್ಲ. ಈ ವಿಚಾರವಾಗಿ ಪಕ್ಷದ ಹೈ ಕಮಾಂಡ್‌ಗೂ ಸ್ಪಷ್ಟ ನೀಡಿದ್ದೇನೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಸ್ಪಷ್ಟಪಡಿಸಿದರು. 


ಹೊಸಕೋಟೆ (ಮಾ.09): ನಾನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಲ್ಲ. ಈ ವಿಚಾರವಾಗಿ ಪಕ್ಷದ ಹೈ ಕಮಾಂಡ್‌ಗೂ ಸ್ಪಷ್ಟ ನೀಡಿದ್ದೇನೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಹೈಕಮಾಂಡ್ ಜೊತೆಗೆ ನಮ್ಮ ಕಾರ್ಯಕರ್ತರು ಸಾಕಷ್ಟು ಒತ್ತಡ ಹಾಕಿದ್ದಾರೆ. ಆದರೆ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಹೀಗಾಗಿ ಪಕ್ಷದಿಂದ ಗೆಲ್ಲುವ ಬೇರೆ ವ್ಯಕ್ತಿಗೆ ಟಿಕೆಟ್ ಕೊಟ್ಟು ಚುನಾವಣೆಗೆ ನಿಲ್ಲಿಸಲಿ. ಈ ಬಗ್ಗೆ ಪಕ್ಷದ ಹೈಕಮಾಂಡ್‌ ಈಗಾಗಲೇ ನಾನು ತಿಳಿಸಿದ್ದೇನೆ ಎಂದರು.

ಒಂದೆರಡು ದಿನದಲ್ಲಿ ಟಿಕೆಟ್: ಅಷ್ಟೇ ಅಲ್ಲದೆ ಕರ್ನಾಟಕದ ಎಲ್ಲಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನ ಪಕ್ಷದ ಹೈಕಮಾಂಢ್ ಆಯ್ಕೆ ಮಾಡಿ ಎರಡು ದಿನಗಳಲ್ಲಿ ಘೋಷಣೆ ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿ ಮತ್ತೊಮ್ಮೆ ಪ್ರಧಾನಿಯಾಗುವುದರ ಮೂಲಕ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ. ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ದೇಶದ ಜನ ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಎಷ್ಟೇ ಪಕ್ಷಗಳು ಒಗ್ಗೂಡಿದರೂ ಪ್ರಧಾನಿ ನರೇಂದ್ರ ಮೋದಿ ಅವರ ಓಟಕ್ಕೆ ಬ್ರೇಕ್ ಹಾಕಲು ಆಗಲ್ಲ. ದೇಶದಲ್ಲಿ ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ದೇಶದ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದರು.

Tap to resize

Latest Videos

undefined

ಸಂಸ್ಕೃತಿ ಉಳಿವಿಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ವಿ.ಸೋಮಣ್ಣ

ಭಾರತೀಯ ಸಂಸ್ಕೃತಿಯಲ್ಲಿ ಶಿವಾರಾಧನೆಗೆ ಅಗ್ರಸ್ಥಾನ: ಭಾರತೀಯ ಸಂಸ್ಕೃತಿ, ಪರಂಪರೆಯಲ್ಲಿ ಶಿವಾರಾಧನೆಗೆ ವಿಶೇಷ ಮಹತ್ವವಿದ್ದು ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಶಿವರಾತ್ರಿ ಹಬ್ಬವನ್ನು ವಿಭಿನ್ನವಾಗಿ ಆಚರಿಸಲಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿಳಿಸಿದರು. ನಗರದ ಶ್ರೀ ಮಂಜುನಾಥ ಸೇವಾ ಸಮಿತಿಯಿಂದ 28ನೇ ಮಹಾಶಿವರಾತ್ರಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವರಾತ್ರಿ ದಿನ ಶಿವನನ್ನು ಆರಾಧಿಸಿ, ಉಪವಾಸ, ಜಾಗರಣೆ ಮಾಡಿ ಶಿವಪೂಜೆ ಮಾಡುವುದು ಪದ್ಧತಿ. ಮಂಜುನಾಥ ಸ್ವಾಮಿ ದೇವಾಲಯ ಪುನರ್ ಪ್ರತಿಷ್ಠಾಪನೆ ಮಾಡಿ, ಪ್ರಥಮ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಆಚರಿಸುತ್ತಿದ್ದೇವೆ ಎಂದರು.

ಸಿರಿಧಾನ್ಯ ಬೇಸಾಯಕ್ಕೆ ಉತ್ತೇಜಿಸಿ, ರೈತರಿಗೆ ಅನುಕೂಲ ಕಲ್ಪಿಸಿ: ಸಚಿವ ಚಲುವರಾಯಸ್ವಾಮಿ

ಪ್ರಸ್ತುತ ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದು ನೀರಿಲ್ಲದೆ ರೈತರು ಪರದಾಡುತ್ತಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಮಳೆರಾಯ ಕೃಪೆತೋರಿ ಆದಷ್ಟು ಬೇಗ ಮಳೆ ಬಂದು ನಾಡು ಸಮೃದ್ಧವಾಗಿರಲಿ ಎಂದು ಶಿವನಲ್ಲಿ ಪ್ರಾರ್ಥಿಸೋಣ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು. ಬ್ರಹ್ಮರಥೋತ್ಸವದ ವೇಳೆ ವೀರಗಾಸೆ, ಡೊಳ್ಳುಕುಣಿತ, ನಾದಸ್ವರ, ಗೊಂಬೆ ಕುಣಿತ, ಚಂಡೆವಾದ್ಯ, ತಮಟೆ ವಾದ್ಯ, ಕೀಲುಕುದುರೆ, ಮರಗಾಲು ಕುಣಿತ ಮೆರವಣಿಗೆಗೆ ಮತ್ತಷ್ಟು ಮೆರುಗು ನೀಡಿತು. ನಗರಸಭೆ ಮಾಜಿ ಸದಸ್ಯ ಅನಂತರಮಯ್ಯ, ಪುರಸಭೆ ಮಾಜಿ ಅಧ್ಯಕ್ಷ ಪಿಳ್ಳಣ್ಣ, ಬಿಬಿಎಂಪಿ ಮಾಜಿ ಸದಸ್ಯ ನಿತೀಶ್ ಪುರುಷೋತ್ತಮ್, ತಾ.ಬಿಜೆಪಿ ಅಧ್ಯಕ್ಷ ಹುಲ್ಲೂರು ಕೆ.ಸತೀಶ್, ಮುಖಂಡರಾದ ರೇವಣ್ಣ, ಶಾಂತಮ್ಮ ಇತರರಿದ್ದರು.

click me!