
ಬೆಂಗಳೂರು(ಮಾ.24): 'ಬಿಜೆಪಿಯವರಂತೆ ನಾವು ಯಾವತ್ತೂ ಜನರಿಗೆ, ಪಕ್ಷದಕಾರ್ಯಕರ್ತರಿಗೆ ಬರೀಸುಳ್ಳು ಭರವಸೆಗಳನ್ನು ನೀಡುತ್ತಾ, ಭಾವನಾತ್ಮಕವಾಗಿ ಕೆರಳಿಸಿ ನಂತರ ಕೈ ಕೊಡುವ ಕೆಲಸಗಳನ್ನು ಮಾಡಿಲ್ಲ. ಕೊಟ್ಟ ಭರವಸೆಗಳನ್ನು ಈಡೇರಿಸಿ ನೋಡಿದಂತೆ ನಡೆದಿದ್ದೇವೆ. ಮುಂದೆಯೂ ಹಾಗೆಯೇ ನಡೆಯುತ್ತೇವೆ.' ಇದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ನಗರದ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ 'ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲೆ ಮತ್ತು ತಾಲ್ಲೂಕು ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯ ರಸಮಾವೇಶ'ದಲ್ಲಿ ನೀಡಿದ ಭರವಸೆ.
ಬಿಜೆಪಿಯವರು ಈ ಹಿಂದಿನ ಚುನಾವಣೆಗಳಲ್ಲಿ ಕೊಟ್ಟ ಭರವಸೆಯಂತೆ ಅಚ್ಛೇ ದಿನ್ ಬಂತಾ? ರೈತರ ಆದಾಯದುಪ್ಪಟ್ಟು ಆಯಿತಾ? ಡೀಸೆಲ್-ಪೆಟ್ರೋಲ್ -ಗ್ಯಾಸ್ ಬೆಲೆ ಕಡಿಮೆ ಮಾಡಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸಿದರಾ? ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕಿದರಾ? ಯಾವುದನ್ನೂ ಮಾಡಿಲ್ಲ ಬಿಜೆಪಿಯವರು ಸರಣಿ ಸುಳ್ಳುಗಾರರು. ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ನರೇಂದ್ರ ಮೋದಿ, ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ' ಎಂದು ಹೆಸರಿಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಮಲೆ ಮಹದೇಶ್ವರನಿಗೆ 700 ಕೆಜಿ ಬೆಳ್ಳಿ ಕಾಣಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ; ಮಾಜಿ ಶಾಸಕ ಮಂಜುನಾಥ್ ಮಾಹಿತಿ
ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲಾ ಧರ್ಮ, ಎಲ್ಲಾ ಜಾತಿ, ಎಲ್ಲಾ ವರ್ಗದವರಿಗೆ ಸೇರಿವೆ. ಸರ್ವರನ್ನೂ ಸಮಾನವಾಗಿ ಕಾಣುವ ಕಾರ್ಯಕ್ರಮ ಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ರೂಪಿಸಿ ಜಾರಿ ಮಾಡುತ್ತಿದೆ. ಇವೆಲ್ಲವನ್ನೂ ನೀವುಗಳು ನಾಡಿನ ಜನರಿಗೆ ಸರಿಯಾಗಿ ಅರ್ಥ ಮಾಡಿಸಬೇಕು. ಅಷ್ಟೇ ಅಲ್ಲ, ನಮ್ಮ ಸರ್ಕಾರದ ಗ್ಯಾರಂಟಿಗಳನ್ನು ನಮ್ಮ ಎಂಬ ಸತ್ಯವನ್ನು ಜನರಿಗೆ ತಿಳಿಸಬೇಕು ಎಂದು ಕರೆ ನೀಡಿದರು.
ಜೊತೆಗೆ, ಕರ್ನಾಟಕದಿಂದ ನಾವು ವರ್ಷಕ್ಕೆ 4.30 ಲಕ್ಷ ಕೋಟಿ ರು. ತೆರಿಗೆಯನ್ನು ಕೇಂದ್ರಕ್ಕೆ ಕಟ್ಟುತ್ತೇವೆ. ಆದರೆ, ಕೇಂದ್ರ ಸರ್ಕಾರ ರಾಜ್ಯಕ್ಕೆ ವಾಪಸ್ ಕೊಡುತ್ತಿರುವುದುಕೇವಲ 50ಸಾವಿರಕೋಟರು. ಈ ನವರು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದನ್ನೂ ಜನರಿಗೆ ಅರ್ಥ ಮಾಡಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್.ಗ್ಯಾರಂಟಿ ಯೋಜನೆಗಳ ಅನುಷ್ಠಾನಸಮಿತಿ ರಾಜ್ಯಾಧ್ಯಕ್ಷ ಹೆಚ್. ಎಂ.ರೇವಣ್ಯ ಉಪಾಧ್ಯಕ್ಷರಾದಪುಷ್ಪಾ ಅಮರನಾಥ್, ಸೂರಜ್ ಹೆಗ್ಡೆ, ಮೆಹರೋಜ್ ಖಾನ್, ಬಿಬಿಎಂಪಿ ವ್ಯಾಪ್ತಿಯ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಕೃಷ್ಣಪ್ಪ ಉಪಸ್ಥಿತರಿದ್ದರು.
ಸಾಧನೆಗಳನ್ನು ಬಿಜೆಪಿಸಾಧನೆ ಎಂದು ಹಳ್ಳಿಹಳ್ಳಿಗಳಲ್ಲಿ ಅವರು ನಿರಂತರವಾಗಿ, ನಿರ್ಲಜ್ಜತನದಿಂದ ಸುಳ್ಳು ಹೇಳುತ್ತಿದ್ದಾರೆ. ಹೀಗಾಗಿ ನಾಡಿನ ಜನರ ಜೇಬಿಗೆ, ಮಹಿಳೆಯರ ಖಾತೆಗೆ ಹಣ ಹಾಕುತ್ತಿರುವುದು ಕಾಂಗ್ರೆಸ್‌ಸರ್ಕಾರ ನಾಡಿನ ಜನತೆಗೆ, ಮಹಿಳೆಯರಿಗೆ, ಯುವ ಸಮೂಹಕ್ಕೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುತ್ತಿರುವುದು ನಮ್ಮ ಕಾಂಗ್ರೆಸ್ ಸರ್ಕಾರ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.