ಕೇವಲ ಕಾಂಗ್ರೆಸ್‌ ಅಲ್ಲ, ಎಲ್ಲರ ಕಾರ್ಯಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

By Kannadaprabha News  |  First Published Dec 26, 2024, 8:42 AM IST

ಅಂದು ನಮ್ಮ ನಾಯಕರು ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿಕೊಂಡು ದೇಶಕ್ಕೆ ಮಾರ್ಗದರ್ಶನ ನೀಡಿದ್ದರು. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಮಹಾತ್ಮರಾದರು. ಇದನ್ನು ಸ್ಮರಿಸಲು ನಾವು ಕಾರ್ಯಕ್ರಮ ರೂಪಿಸಿದ್ದೇವೆ. 


ಬೆಳಗಾವಿ (ಡಿ.26): ಅಂದು ನಮ್ಮ ನಾಯಕರು ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿಕೊಂಡು ದೇಶಕ್ಕೆ ಮಾರ್ಗದರ್ಶನ ನೀಡಿದ್ದರು. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಮಹಾತ್ಮರಾದರು. ಇದನ್ನು ಸ್ಮರಿಸಲು ನಾವು ಕಾರ್ಯಕ್ರಮ ರೂಪಿಸಿದ್ದೇವೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಲ್ಲ, ಎಲ್ಲರ ಕಾರ್ಯಕ್ರಮ. ಇಂದಿನ ಪರಿಸ್ಥಿತಿಯಲ್ಲಿ ದೇಶವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು? ದೇಶಕ್ಕೆ ಯಾವ ರೀತಿ ಶಕ್ತಿ ತುಂಬಬೇಕು ಎಂದು ಈ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.ನಗರದ ಸಿಪಿಎಡ್‌ ಕಾಲೇಜು ಮೈದಾನದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. 

ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರು, ದೇಶದ ವಿವಿಧ ರಾಜ್ಯಗಳ ಕಾಂಗ್ರೆಸ್ ಪಕ್ಷದ ಹಾಲಿ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು, ಎಲ್ಲಾ ರಾಜ್ಯಗಳ ಶಾಸಕಾಂಗ ಪಕ್ಷದ ನಾಯಕರು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಎಲ್ಲಾ ಸಂಸತ್ ಸದಸ್ಯರು, ಶಾಸಕರು, ರಾಜ್ಯದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನ ನೀಡಿದ್ದೇವೆ ಎಂದು ತಿಳಿಸಿದರು. 26ರಂದು ಬೆಳಗ್ಗೆ 10 ಗಂಟೆಗೆ ವೀರಸೌಧದಲ್ಲಿ ಗಾಂಧಿ ಅವರ ಪುತ್ಥಳಿ ಅನಾವರಣ ಮಾಡಲಾಗುವುದು. ಜತೆಗೆ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು. ಬೆಳಗ್ಗೆ 10.45ಕ್ಕೆ ಖಾದಿ ಮೇಳ ಉದ್ಘಾಟನೆ ಮಾಡಲಾಗುವುದು. 

Tap to resize

Latest Videos

undefined

ಮೈಸೂರಿನ ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಹೆಸರು: ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ

11.15ಕ್ಕೆ ಗಂಗಾಧರ ದೇಶಪಾಂಡೆ ಅವರ ಸ್ಮಾರಕವನ್ನು ನಾನು ಹಾಗೂ ಮುಖ್ಯಮಂತ್ರಿಗಳು ಅನಾವರಣ ಮಾಡಲಿದ್ದೇವೆ. ನಂತರ ಗಂಗಾಧರ ದೇಶಪಾಂಡೆ ಅವರ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು. ಮಧ್ಯಾಹ್ನ 3 ಗಂಟೆಗೆ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ರಾತ್ರಿ 7ಕ್ಕೆ ಎಐಸಿಸಿ ಅಧ್ಯಕ್ಷರಿಂದ ಭೋಜನಕೂಟ ಏರ್ಪಡಿಸಲಾಗಿದೆ. 27ರಂದು ಬೆಳಗ್ಗೆ 10.30ಕ್ಕೆ ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆಯನ್ನು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಅನಾವರಣಗೊಳಿಸುವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಲಿದ್ದು, ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ ಖಾದರ್ ಹಾಗೂ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ಮುಖಂಡತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಪಕ್ಷದ ನಾಯಕರಿಗೆ ಆಹ್ವಾನ ನೀಡಲಾಗುವುದು. ಸ್ಥಳೀಯ ನಾಯಕರು, ರಾಜ್ಯದ ಎಲ್ಲಾ ಸಂಸದರನ್ನು ನಾವು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ. 12 ಗಂಟೆಗೆ ಮುಖ್ಯಮಂತ್ರಿಗಳಿಂದ ಔತನಕೂಟ, ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

ಶೆಟ್ಟರ್ ಮನೆಗೆ ರತ್ನಗಂಬಳಿ ಹಾಸೋಣ: ಗಾಂಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಗೌರವಯುತವಾಗಿ ಆಹ್ವಾನ ಮಾಡಿಲ್ಲ ಎಂಬ ಜಗದೀಶ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವರ ಮನೆವರೆಗೂ ರತ್ನಗಂಬಳಿ ಹಾಕಿಸೋಣ. ನನ್ನ ಸಮ್ಮುಖದಲ್ಲೇ ಮುಖ್ಯಮಂತ್ರಿಗಳು ಅವರಿಗೆ ಕರೆ ಮಾಡಿ ಆಹ್ವಾನ ನೀಡಿದ್ದಾರೆ. ಆರ್.ಅಶೋಕ್, ನಾರಾಯಣಸ್ವಾಮಿ, ಸಭಾಪತಿಗಳಿಗೆ ಆಹ್ವಾನ ನೀಡಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ಅವರ ಹೆಸರು ಸೇರಿಸಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್‌ ಗಾಂಧಿಗಿರಿಗೆ 100: ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ

ಗಾಂಧಿ ಮೇಲೆ ಪ್ರೀತಿ ಇದ್ದಿದ್ದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೇರಿ ಕಾರ್ಯಕ್ರಮ ಮಾಡಿದ್ದರೆ ₹500 ಕೋಟಿ ಖರ್ಚು ಮಾಡಲು ಸಿದ್ಧವಿದ್ದೆವು ಎಂಬ ಶೆಟ್ಟರ್‌ ಹೇಳಿಕೆಗೆ ಉತ್ತರಿಸಿದ ಅವರು ಈಗಲೂ ಮಾಡಲಿ, ನಾವು ಈ ಕಾರ್ಯಕ್ರಮವನ್ನು ಒಂದು ವರ್ಷಗಳ ಕಾಲ ಆಚರಣೆ ಮಾಡುತ್ತೇವೆ. ಅವರೂ ಕೂಡ ಈ ಕಾರ್ಯಕ್ರಮ ಮಾಡಲಿ ಎಂದು ಮನವಿ ಮಾಡುತ್ತೇನೆ. ಅವರೇ ಮುಂದಾಳತ್ವ ವಹಿಸಿಕೊಂಡು ಕಾರ್ಯಕ್ರಮ ಮಾಡಲಿ, ಅವರ ಹಿಂದೆ ನಿಂತು ನಾವು ಸೇವಕರಂತೆ ಕೆಲಸ ಮಾಡುತ್ತೇವೆ ಎಂದರು.

click me!