ನಾನು ಕೇಂದ್ರ ಮಂತ್ರಿಯಾಗಿರುವುದನ್ನು ಅವರು ಸಹಿಸುತ್ತಿಲ್ಲ. ರಾಜಕೀಯವಾಗಿ ನನ್ನನ್ನು ಮುಗಿಸಬೇಕೆಂದು ಹೊರಟಿದ್ದಾರೆ. ಅವರಿಗೆ ನಿಖಿಲ್ ಗಿಂತ ನಾನೇ ದೊಡ್ಡ ಟಾರ್ಗೆಟ್ ಆಗಿದ್ದೇನೆ. ಈ ಉಪಚುನಾಣೆಯಲ್ಲಿ ನಿಖಿಲ್ ಸೋಲಿಸಲು ಕಾಂಗ್ರೆಸ್ ದೊಡ್ಡ ಕುತಂತ್ರ ರೂಪಿಸಿದೆ. ಅದರಿಂದ ನನ್ನ ಮುಂದಿನ ಬೆಳವಣಿಗೆ ಕುಗ್ಗಿಸಬಹುದು ಎಂದು ಲೆಕ್ಕಾಚಾರ ಮಾಡಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ಚನ್ನಪಟ್ಟಣ(ಅ.31): ಕಾಂಗ್ರೆಸ್ ನಾಯಕರಿಗೆ ನಿಖಿಲ್ ಕುಮಾರ ಸ್ವಾಮಿ ಮಾತ್ರವಲ್ಲ, ನಾನೂ ದೊಡ್ಡ ಟಾರ್ಗೆಟ್ ಆಗಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೇಂದ್ರ ಮಂತ್ರಿಯಾಗಿರುವುದನ್ನು ಅವರು ಸಹಿಸುತ್ತಿಲ್ಲ. ರಾಜಕೀಯವಾಗಿ ನನ್ನನ್ನು ಮುಗಿಸಬೇಕೆಂದು ಹೊರಟಿದ್ದಾರೆ. ಅವರಿಗೆ ನಿಖಿಲ್ ಗಿಂತ ನಾನೇ ದೊಡ್ಡ ಟಾರ್ಗೆಟ್ ಆಗಿದ್ದೇನೆ. ಈ ಉಪಚುನಾಣೆಯಲ್ಲಿ ನಿಖಿಲ್ ಸೋಲಿಸಲು ಕಾಂಗ್ರೆಸ್ ದೊಡ್ಡ ಕುತಂತ್ರ ರೂಪಿಸಿದೆ. ಅದರಿಂದ ನನ್ನ ಮುಂದಿನ ಬೆಳವಣಿಗೆ ಕುಗ್ಗಿಸಬಹುದು ಎಂದು ಲೆಕ್ಕಾಚಾರ ಮಾಡಿದ್ದಾರೆ. ಅವರ ಯಾವುದೇ ಕುತಂತ್ರಗಳು ಚನ್ನಪಟ್ಟಣ ಜನತೆ ಮುಂದೆ ನಡೆಯಲ್ಲ ಎಂದು ಹೇಳಿದರು.
ಎಚ್‌ಎಂಟಿ ಜಾಗಕ್ಕೆ ಈಶ್ವರ್ ಖಂಡ್ರೆ ಅತಿಕ್ರಮ ಪ್ರವೇಶ: ಎಚ್.ಡಿ.ಕುಮಾರಸ್ವಾಮಿ
ಕಳೆದ ವಿಧಾನಸಭೆ ಚುನಾವಣೆ ಕಾಲದಿಂದಲೇ ಜೆಡಿಎಸ್ ಪಕ್ಷವನ್ನು ಮುಗಿಸಬೇಕು ಎಂದು ಷಡ್ಯಂತ್ರ ಮಾಡಿ 19 ಸ್ಥಾನಕ್ಕೆ ಜೆಡಿಎಸ್ ಪಕ್ಷವನ್ನು ಇಳಿಸಿದರು. ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ ಎಂದು ಅಪಪ್ರ ಚಾರ ಮಾಡಿದರು. ಆದರೆ, ಯಾರೊಬ್ಬರನ್ನೂ ಅಲುಗಾಡಿಸಲು ಅವರಿಂದ ಆಗಲಿಲ್ಲ ಎಂದರು.
ಶಿಗ್ಗಾಂವಿ ಖಾದ್ರಿ ಕಿಡ್ನಾಪ್ ಮಾಡಿ ಗೃಹ ಬಂಧನ:
ಮುಸ್ಲಿಂ ಮತಗಳಿಗೆ ಎಲ್ಲಾ ರಾಜಕೀಯಪಕ್ಷಗಳುಟಾರ್ಗೆಟ್ ಮಾಡಿವೆ ಎನ್ನುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಮರು ಯಾವಾಗಲೂ ಟಾರ್ಗೆಟ್ ಎನ್ನುವುದು ಎಲ್ಲರಿಗೂ ಗೊತ್ತಿದೆ. ಅವರು ಯಾರನ್ನಾದರೂ ಟಾರ್ಗೆಟ್ ಮಾಡಿ ಕೊಳ್ಳಲಿ. ನಾವು ಮಾತ್ರ ನಮ್ಮ ಕೆಲಸಗಳ ಆಧಾರದ ಮೇಲೆ ಮತ ಕೊಡುವಂತೆ ಕೇಳುತ್ತೇವೆ ಎಂದರು.
ಎರಡು ಬಾರಿ ಗೆದ್ದ ಕುಮಾರಸ್ವಾಮಿ ಏನು ಮಾಡಿದರು: ಸಿ.ಪಿ.ಯೋಗೇಶ್ವರ್ ಪ್ರಶ್ನೆ
ಕಾಂಗ್ರೆಸ್ ಯಾವ ಮಟ್ಟಿಗೆ ಮುಸ್ಲಿಮ ರನ್ನು ಟಾರ್ಗೆಟ್ ಮಾಡಿದೆ ಎನ್ನುವುದಕ್ಕೆ ಶಿಗ್ಗಾಂವಿ ಕಾಂಗ್ರೆಸ್ ಮುಖಂಡ ಸೈಯದ್ ಅಜೀಂ ಪೀರ್ ಖಾದ್ರಿ ಅವರನ್ನು ಕಿಡ್ನಾಪ್ ಮಾಡಿ, ಅವರನ್ನು ಕಳೆದ ಒಂದು ವಾರ ದಿಂದ ಕೂಡಿ ಹಾಕಿಕೊಂಡಿದ್ದಾರೆ. ಖಾದ್ರಿ ಹೊರಟಿದ್ದಾರೆ. ಅಧಿಕಾರ ದುರುಪಯೋಗ ಮಾಡಿಕೊಂಡು ನಾಮ ಪತ್ರ ವಾಪಸ್ ತೆಗೆಸುತ್ತಿದ್ದಾರೆ. ಒಂದು ವಾರ ದಿಂದ ಈ ರೀತಿಯ ರಾಜಕೀಯ ನಡೆಯುತ್ತಿದೆ. ಖಾದ್ರಿ ಯವರನ್ನು ಒಂದು ವಾರ ಕೂಡಿ ಹಾಕಿಕೊಳ್ಳುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದರು.
ಒಬ್ಬ ಸಚಿವರು ಖಾದ್ರಿ ಅರವನ್ನು ಗೃಹ ಬಂಧನದಲ್ಲಿ ಇರಿಸಿಕೊಂಡು ಜತೆಯಲ್ಲಿ ಇದನ್ನೆಲ್ಲ ಮಾಡಿಸುತ್ತಿದ್ದಾರೆ. ಅವರಲ್ಲಿ ಗೆಲುವಿನ ವಿಶ್ವಾಸದ ಕೊರತೆ ಎಷ್ಟಿದೆ ಎಂಬುದು ಇದರಿಂದ ಗೊತ್ತಾಗು ತ್ತಿದೆ. ಚನ್ನಪಟ್ಟಣ ನಗರ ಪ್ರದೇಶದ ಹಲವಾರು ವಾರ್ಡ್‌ಗಳಿಗೆ ಭೇಟಿ ಕೊಟ್ಟಿದ್ದೇನೆ. ಹಲವು ನಾಯಕರ ಮನೆ ಗಳಿಗೂ ಭೇಟಿ ಕೊಟ್ಟಿದ್ದೇನೆ. ಅಲ್ಪ ಸಂಖ್ಯಾತ ಮಹಿಳೆಯರು ಸಮಸ್ಯೆಗಳ ಬಗ್ಗೆ ಗಮನ ಸೆಳೆದಿದ್ದಾರೆ. ಯಾವುದೇ ಅಪಪ್ರಚಾರಕ್ಕೆ ಬಲಿಯಾಗದೆ ನಿಮ್ಮ ಪರ ವಾಗಿದ್ದೇವೆ. ನಮ್ಮ ಕಷ್ಟಗಳನ್ನು ಬಗೆಹರಿಸಿ, ಮತಕೊಡುವುದಾಗಿ ಹೇಳಿದ್ದಾರೆಂದರು.