
ಬೆಂಗಳೂರು(ಏ.02): ಬಿಜೆಪಿಯ ಕೂಡ್ಲಿಗಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸಲ್ಲಿಸಿದ್ದ ರಾಜೀನಾಮೆ ಶನಿವಾರ ಅಂಗೀಕೃತಗೊಂಡಿದೆ.
ಮೊಳಕಾಲ್ಮುರು, ಬಳ್ಳಾರಿ ಹಾಗೂ ಕೂಡ್ಲಗಿಯಿಂದ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಎನ್.ವೈ.ಗೋಪಾಲಕೃಷ್ಣ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಸಾಧ್ಯತೆಯಿದೆ. ಇತ್ತೀಚೆಗಷ್ಟೇ ರಾಜಾನುಕುಂಟೆಯ ರೆಸಾರ್ಟ್ ಒಂದರಲ್ಲಿ ಎಐಸಿಸಿ ಹಾಗೂ ಕೆಪಿಸಿಸಿ ಹಿರಿಯ ನಾಯಕರನ್ನು ಭೇಟಿ ಮಾಡಿ ಪಕ್ಷ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಕೂಡ್ಲಿಗಿ: ಬಿಜೆಪಿ ಶಾಸಕ ಗೋಪಾಲಕೃಷ್ಣ ರಾಜೀನಾಮೆ ಸಲ್ಲಿಕೆ, ಕಾಂಗ್ರೆಸ್ ತೆಕ್ಕೆಗೆ ಬಿದ್ದ ಕಮಲ ನಾಯಕ..!
ಇದರ ಬೆನ್ನಲ್ಲೇ ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದ್ದರು. ಇದೀಗ ರಾಜೀನಾಮೆಯೂ ಅಂಗೀಕಾರವಾಗಿದ್ದು, ಸದ್ಯದಲ್ಲೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.