Karnataka CM Oath:ರಾಜ್ಯದ ಮುಖ್ಯಮಂತ್ರಿ ಗದ್ದುಗೆ ಏರಿದ ಸಿದ್ದರಾಮಯ್ಯ: ಗ್ಯಾರಂಟಿಗೆ ಬಂತು ವಾರಂಟಿ

By Sathish Kumar KHFirst Published May 20, 2023, 12:44 PM IST
Highlights

ಕರ್ನಾಟಕದ 16ನೇ ವಿಧಾನಸಭೆಯ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಅವರೊಂದಿಗೆ ಪ್ರಮಾಣವಚನ ಸ್ವೀಕಾರ ಮಾಡಿದರು.

ಬೆಂಗಳೂರು (ಮೇ 20): ಕರ್ನಾಟಕದ 16ನೇ ವಿಧಾನಸಭೆಯ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ಜೊತೆಗೆ, ರಾಜ್ಯದ 9ನೇ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ ಮಾಡಿದರು.

ಕರ್ನಾಟಕದ ರಾಜ್ಯದ 16ನೇ ವಿಧಾನಸಣಾ ಚುನಾವಣೆಯನ್ನು ರಾಜ್ಯದಲ್ಲಿ ಒಂದೇ ಹಂತದಲ್ಲಿ ನಡೆಸಲಾಯಿತು. ಮೇ 10 ರಂದು ಮತದಾನ ನಡೆದಿದ್ದು, ಮೇ 13ರಂದು ಫಲಿತಾಂಶ ಬಂದಿದೆ. ರಾಜ್ಯದಲ್ಲಿ ಸರ್ಕಾರ ರಚನೆಗೆ 113 ಸ್ಥಾನಗಳ ಅಗತ್ಯವಿದ್ದು, ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್‌ 135 ಸ್ಥಾನದೊಂದಿಗೆ ಬಹುಮತವನ್ನು ಗಳಿಸಿದೆ. ನಂತರ ನಡೆದ ಕಾಂಗ್ರೆಸ್‌ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಕಸರತ್ತಿನಲ್ಲಿ ಸಿದ್ದರಾಮಯ್ಯ ಬಹುಮತವನ್ನು ಪಡೆದು ಶಾಸಕಾಂಗ ಸಭೆಯ ನಾಯಕರಾಗಿ ಆಯ್ಕೆಯಾದರು. ಸರ್ಕಾರ ರಚನೆ ಮಾಡುವುದಾಗಿ ರಾಜ್ಯಪಾಲರಿಂದ ಅನುಮತಿ ಪಡೆದ ಸಿದ್ದರಾಯಮಯ್ಯ ಅವರು ಶನಿವಾರ (ಮೇ 20ರಂದು) ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಬೆಳಗ್ಗೆ 12.30ಕ್ಕೆ ಪ್ರಮಾಣವಚನ ಸ್ವೀಕಾರ ಮಾಡಿದರು. ರಾಜ್ಯ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಪ್ರಮಾಣವಚನ ಬೋಧಿಸಿದರು. ಇದೇ ವೇಳೆ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ ಮಾಡಿದರು.

Siddaramaiah Oath Ceremony: ಸಿದ್ದರಾಮಯ್ಯ ಎಂಬ ಹೆಸರಿನ ನಾನು.....

ಮೊದಲ ದಿನವೇ 8 ಮಂದಿ ಸಚಿವರ ಪ್ರಮಾಣ ಸ್ವೀಕಾರ: ಕಾಂಗ್ರೆಸ್‌ ಸರ್ಕಾರದಲ್ಲಿ ಸುಮಾರು 80ಕ್ಕೂ ಅಧಿಕ ಜನರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಈ ಪೈಕಿ ಯಾರನ್ನು ಸಚಿವರನ್ನಾಗಿ ಮಾಡಬೇಕು ಎಂಬ ಭಾರಿ ಗೊಂದಲದ ನಡುವೆ ಒಟ್ಟು 8 ಮಂದಿ ಶಾಸಕರನ್ನು ಸಚಿವರನ್ನಾಗಿ ಆಯ್ಕೆ ಮಾಡಲಾಗಿತ್ತು. ಈ ವೇಳೆ ರಾಜ್ಯದ ಪ್ರಬಲ ಸಮುದಾಯಗಳ ನಾಯಕರಿಗೆ ಆದ್ಯತಾ ಪಟ್ಟಿಯಲ್ಲಿ ಸಚಿವ ಸ್ಥಾನ ನೀಡಲಾಗಿದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ನಂತರ ಎಂಟು ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಈ ಮೂಲಕ ರಾಜ್ಯದ 16ನೇ ವಿಧಾನಸಭೆಯ ಸರ್ಕಾರ ರಚನೆ ಮಾಡಲಾಯಿತು.

ಸಿಎಂ ಪ್ರಮಾಣವಚನ ಕಾರ್ಯಕ್ರಮಕ್ಕೆ ಬಂದ ಗಣ್ಯರು: ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಉಪಸ್ಥಿತರಿದ್ದರು. ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಕ್ಕು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಛತ್ತೀಸ್‌ಘಡ ಮುಖ್ಯಮಂತ್ರಿ ಭೂಪೇಶ್‌ ಬಾಗೆಲ್, ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬ ಮುಪ್ತಿ, ಫಾರೂಖ್‌ ಅಬ್ದುಲ್ಲಾ, ಮಹಾರಾಷ್ಟ್ರ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್, ನಟ ಶಿವರಾಜ್‌ ಕುಮಾರ್, ನಟ ಕಮಲಹಾಸನ್, ಸಾಧುಕೋಕಿಲ, ದುನಿಯಾ ವಿಜಯ, ರಮ್ಯಾ ಮತ್ತಿತರ ಗಣ್ಯರು ಭಾಗವಹಿಸಿದ್ದರು.

ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್‌

click me!